• search
 • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗುಜರಾತಿನಲ್ಲಿ ಪರೀಕ್ಷೆ ಇಲ್ಲದೇ SSLC ವಿದ್ಯಾರ್ಥಿಗಳು ಪಾಸ್!

|
Google Oneindia Kannada News

ಅಹ್ಮದಾಬಾದ್, ಮೇ 14: ಗುಜರಾತಿನಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಪರೀಕ್ಷಾ ಮಂಡಳಿ 10 ತರಗತಿ ವಿದ್ಯಾರ್ಥಿಗಳನ್ನು ಸಾಮೂಹಿಕವಾಗಿ ಪಾಸ್ ಮಾಡುವುದಾಗಿ ಗುರುವಾರ ಘೋಷಿಸಿದೆ.

ಕೊವಿಡ್-19 ಸೋಂಕು ಹರಡುವಿಕೆ ಆತಂಕದಿಂದ ವಿದ್ಯಾರ್ಥಿಗಳನ್ನು ರಕ್ಷಿಸುವ ಸಲುವಾಗಿ 10ನೇ ತರಗತಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಕಳುಹಿಸುವ ಕುರಿತು ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಗುಜರಾತ್ ಪ್ರೌಢಶಿಕ್ಷಣ ಮಂಡಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲೂ SSLC ಮತ್ತು PUC ಪರೀಕ್ಷೆ ರದ್ದು ಆಗಲಿದೆಯೇ ?ಕರ್ನಾಟಕದಲ್ಲೂ SSLC ಮತ್ತು PUC ಪರೀಕ್ಷೆ ರದ್ದು ಆಗಲಿದೆಯೇ ?

ಈ ಹಿಂದಿನ ಪ್ರಯತ್ನದಲ್ಲಿ ಅನುತ್ತೀರ್ಣರಾದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾದ ನಂತರದಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಸರ್ಕಾರವು ಸ್ಪಷ್ಟಪಡಿಸಿದೆ.

1 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪಾಸ್:

   ಭಾರತ ಮತ್ತು ಇಂಗ್ಲೆಂಡ್ ಸೇರಿ ಆಸ್ಟ್ರೇಲಿಯಾನ ಹಿಂದಿಕ್ಕಿದ್ದಾರೆ ! | Oneindia Kannada

   ಗುಜರಾತಿನಲ್ಲಿ ಕಳೆದ ಬಾರಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಹೆಚ್ಚಾದ ಸಂದರ್ಭದಲ್ಲೇ 1 ರಿಂದ 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಕ್ಕೆ ಆದೇಶ ಹೊರಡಿಸಲಾಗಿದೆ. ಇತ್ತೀಚಿಗಷ್ಟೇ ಮೇ 10 ರಿಂದ 25ರವರೆಗೆ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ನಡೆಸಲಾಗುವುದು ಎಂದು ಇತ್ತೀಚಿಗಷ್ಟೇ ರಾಜ್ಯ ಸರ್ಕಾರವು ತನ್ನ ಆದೇಶದಲ್ಲಿ ಉಲ್ಲೇಖಿಸಿತ್ತು. ಇದೀಗ 10ನೇ ತರಗತಿ ವಿದ್ಯಾರ್ಥಿಗಳಿಗೆ ಸಾಮೂಹಿಕ ಪರೀಕ್ಷೆ ನಡೆಸದೇ ಪಾಸ್ ಮಾಡುವುದಾಗಿ ಸರ್ಕಾರ ಆದೇಶಿಸಿದೆ. 2020-21ನೇ ಶೈಕ್ಷಣಿಕ ಸಾಲಿನಲ್ಲಿ 12 ಲಕ್ಷ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿತ್ತು.

   English summary
   Gujarat Govt Gives Mass Promotion For SSLC Students; No Board Exams In This Year.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X