• search
  • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲಸಿಕೆ ಹಾಕಿಸಿಕೊಂಡ 2ನೇ ದಿನಕ್ಕೆ ಸಚಿವರಿಗೆ ಕೊರೊನಾ ಪಾಸಿಟಿವ್!

|

ಅಹ್ಮದಾಬಾದ್, ಮಾರ್ಚ್ 16: ಕೊರೊನಾವೈರಸ್ ಲಸಿಕೆ ಹಾಕಿಸಿಕೊಂಡ ಎರಡೇ ದಿನಕ್ಕೆ ಗುಜರಾತ್ ಸಚಿವ ಈಶ್ವರ್ ಸಿನ್ಹಾ ಪಟೇಲ್ ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದ ಮಾರ್ಚ್ 13ರಂದು ಸಚಿವ ಈಶ್ವರ್ ಸಿನ್ಹಾ ಪಟೇಲ್ ಕೊರೊನಾವೈರಸ್ ಲಸಿಕೆ ಹಾಕಿಸಿಕೊಂಡಿದ್ದರು. ಸೋಮವಾರ ವೈದ್ಯಕೀಯ ತಪಾಸಣೆಯಲ್ಲಿ ನಡೆಸಲಾಗಿದ್ದು, ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ಮಂಗಳವಾರ ಹೊರಬಂದ ವರದಿಯಲ್ಲಿ ಸ್ಪಷ್ಟವಾಗಿದೆ.

ಕೊವಿಡ್ 19: ಮಾರ್ಚ್ 15ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಚೇತರಿಕೆ?ಕೊವಿಡ್ 19: ಮಾರ್ಚ್ 15ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಚೇತರಿಕೆ?

ತಮಗೆ ಕೊವಿಡ್-19 ಸೋಂಕು ತಗುಲಿರುವ ಬಗ್ಗೆ ಸ್ವತಃ ಸಚಿವ ಈಶ್ವರ್ ಸಿನ್ಹಾ ಪಟೇಲ್ ಅವರು ಟ್ವೀಟ್ ಮಾಡಿದ್ದಾರೆ. ಇಂದು ನನಗೆ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ಸಕಾರಾತ್ಮಕ ವರದಿ ಬಂದಿದ್ದು, ನಾನು ಆರೋಗ್ಯವಂತನಾಗಿದ್ದೇನೆ. ಮುನ್ನೆಚ್ಚರಿಕೆ ಕ್ರಮವಾಗಿ ನನ್ನ ಜೊತೆಗೆ ಸಂಪರ್ಕದಲ್ಲಿದ್ದ ಎಲ್ಲರೂ ಒಮ್ಮೆ ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಗಾಗಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ" ಎಂದು ಟ್ವೀಟ್ ಮಾಡಿದ್ದಾರೆ.


ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ:

ಭಾರತದಲ್ಲಿ 59 ದಿನಗಳಲ್ಲಿ 3,17,71,661 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 74,08,521 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 43,97,613 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 74,26,479 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 13,23,527 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ಎರಡನೇ ಹಂತದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಮಾರ್ಚ್.01ರಿಂದ ಆರಂಭವಾಗಿದ್ದು, ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 16,96,497 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟ 95,19,024 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

English summary
Gujarat Minister Ishwarsinh Patel Tests Positive For Covid-19 Days After Taking Vaccine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X