ಓಡಿಹೋದ ಕಾರಣಕ್ಕೆ ಮಹಿಳೆಗೆ ಪತಿಯನ್ನು ಹೆಗಲ ಮೇಲೆ ಹೊರುವ ಶಿಕ್ಷೆ!
ಅಹಮದಾಬಾದ್, ಜು.14: ದಾಹೋಡ್ ಜಿಲ್ಲೆಯ ಹಳ್ಳಿಯೊಂದರಲ್ಲಿ 23 ವರ್ಷದ ವಿವಾಹಿತ ಮಹಿಳೆಯೊಬ್ಬಳು ವಿವಾಹೇತರ ಸಂಬಂಧ ಹೊಂದಿದ್ದಕ್ಕಾಗಿ ಸಾರ್ವಜನಿಕವಾಗಿ ಆಕೆಗೆ ಅವಮಾನ ಮಾಡಲಾಗಿದೆ. ಅಷ್ಟೇ ಅಲ್ಲದೇ ಆಕೆಯ ಬಟ್ಟೆಯನ್ನು ಆಕೆಯ ಪತಿಯ ಕುಟುಂಬಸ್ಥರು ಬಿಚ್ಚಿದ್ದು, ಆಕೆಗೆ ಥಳಿಸಿ ಪತಿಯನ್ನು ಹೆಗಲ ಮೇಲೆ ಹೊರುವಂತೆ ಒತ್ತಾಯಿಸಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಳಿಕ ಆಕೆಯ ಮಾವ ಸೇರಿದಂತೆ 19 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಹಿಳೆಯು ದಾಹೋಡ್ ಜಿಲ್ಲೆಯ ಧನ್ಪುರ್ ತಾಲೂಕಿನ ಖಜುರಿ ಗ್ರಾಮದ ನಿವಾಸಿ. ಮಹಿಳೆಯು ವಿವಾಹದ ಬಳಿಕ ಬೇರೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದು, ಆತನೊಂದಿಗೆ ಊರು ಬಿಟ್ಟು ಓಡಿಹೋದಳು.

ಬಳಿಕ ಆಕೆ ಎಲ್ಲಿದ್ದಾಳೆ ಎಂದು ತಿಳಿದುಕೊಂಡ ಆಕೆಯ ಪತಿಯ ಕುಟುಂಬಸ್ಥರನ್ನಯ ಆಕೆಯನ್ನು ಹಳ್ಳಿಗೆ ಕರೆತಂದಿದ್ದಾರೆ. ಬಳಿಕ ಸಾರ್ವಜನಿಕವಾಗಿ ಅವಮಾನ ಮಾಡಿ, ಹಲ್ಲೆ ನಡೆಸಿದ್ದಾರೆ. ಪತಿಯನ್ನು ಹೆಗಲ ಮೇಲೆ ಹೊರುವಂತೆ ಒತ್ತಾಯಿಸಿದ್ದಾರೆ.
ಈ ವಿಚಾರದಲ್ಲಿ ಮಹಿಳೆ ಸಲ್ಲಿಸಿದ ದೂರಿನ ಪ್ರಕಾರ, ಆಕೆಯನ್ನು ಗ್ರಾಮಕ್ಕೆ ಕರೆತಂದ ನಂತರ ಆಕೆಯನ್ನು ನಿಲ್ಲಿಸಿ ತಳ್ಳಿ ಥಳಿಸಿದ್ದಾರೆ. ಆರೋಪಿಗಳು ಆಕೆಗೆ ಕೋಲುಗಳಿಂದ ಹೊಡೆದಿದ್ದಾರೆ. ಅಷ್ಟೇ ಅಲ್ಲದೇ ಆಕೆಯ ಬಟ್ಟೆಯನ್ನು ಹರಿದು ಹಾಕಿದ್ದಾರೆ.
ಜುಲೈ 6 ರಂದು ನಡೆದ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು, ಈ ಘಟನೆಯ ವಿಡಿಯೋ ವೈರಲ್ ಆಗಿದೆ. "ಮಹಿಳೆ ದೂರು ದಾಖಲಿಸಿದ ನಂತರ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಯಿತು. ಘಟನೆಯಲ್ಲಿ ಭಾಗಿಯಾದ 19 ಆರೋಪಿಗಳನ್ನು ಹೆಸರಿಸಲಾಗಿದೆ. ಅಪರಾಧಕ್ಕೆ ಸಂಬಂಧಿಸಿದಂತೆ ಆ ಪೈಕಿ 11 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ," ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಕಾನನ್ ದೇಸಾಯಿ ತಿಳಿಸಿದ್ದಾರೆ.
(ಒನ್‌ಇಂಡಿಯಾ ಸುದ್ದಿ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications