• search
  • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉಪವಾಸದ ಬೆದರಿಕೆ ಒಡ್ಡಿದ ಹಾರ್ದಿಕ್ ಪಟೇಲ್ ಪೊಲೀಸ್ ವಶಕ್ಕೆ

|

ಸೂರತ್, ಮೇ 28: ಉಪವಾಸ ಸತ್ಯಾಗ್ರಹ ಮಾಡುವುದಾಗಿ ಬೆದರಿಕೆ ಹಾಕಿದ ಪಟೇಲ್ ಆಂದೋಲನದ ಮುಖಂಡ, ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುಜರಾತಿನ ನಗರದ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ 22 ಜೀವಗಳನ್ನು ಬಲಿ ಪಡೆದುಕೊಂಡ ಬೆಂಕಿ ಅವಘಡದ ನಂತರ ಯಾರ ಮೇಲೂ ಕ್ರಮ ತೆಗೆದುಕೊಳ್ಳದ ಪೊಲೀಸರ ಕ್ರಮವನ್ನು ಖಂಡಿಸಿ ಉಪವಾಸ ಸತ್ಯಾಗ್ರಹ ನಡೆಸಲು ಹಾರ್ದಿಕ್ ಪಟೇಲ್ ಮುಂದಾಗಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಹಾರ್ದಿಕ್ ಪಟೇಲ್: ಉಪವಾಸ ಮುಂದುವರಿಕೆ

ಮೇ 23 ರಂದು ಸೂರತ್‌ನ ಸರ್ತಾನಾ ಪ್ರದೇಶದಲ್ಲಿರುವ ತಕ್ಷಿಲಾ ಆರ್ಕೇಡ್‌ ಕಟ್ಟಡದ ಎರಡನೆಯ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಕಟ್ಟಡದೊಳಗೆ ಸಿಲುಕಿಕೊಂಡ ಹಲವರನ್ನು ರಕ್ಷಿಸಲಾಗಿತ್ತಾದರೂ 22 ನ ಜನ ಮೃತರಾಗಿದ್ದರು.

ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ, ರೈತರ ಸಾಲ ಮನ್ನಾ, ದೇಶದ್ರೋಹದ ಆರೋಪದಲ್ಲಿ ಜೈಲಿನಲ್ಲಿರುವ ಅಲ್ಪೇಶ್ ಕಠಾರಿಯಾ ಬಿಡುಗಡೆಗಾಗಿ ಒತ್ತಾಯಿಸಿ 25 ವರ್ಷ ವಯಸ್ಸಿನ ಹಾರ್ದಿಕ್ ಪಟೇಲ್ ಆಗಸ್ಟ್ 24 ರಿಂದ ಉಪವಾಸ ಸತ್ಯಾಗ್ರಹ ನಡೆಸಿದ್ದರು.

English summary
PAAS founder and Congress leader Hardik Patel was detained by police soon after he drove into Surat to hold a protest at the site of fire accident which claimed 22 young lives.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more