ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking news: ಗುಜರಾತ್ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ ಹಾರ್ದಿಕ್ ಪಟೇಲ್

|
Google Oneindia Kannada News

ಅಹಮದಾಬಾದ್, ಮೇ 18: ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಗುಜರಾತ್ ರಾಜ್ಯದಲ್ಲಿ ಭಾರಿ ಆಘಾತ ಉಂಟಾಗಿದೆ. ಗುಜರಾತ್ ಘಟಕದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾರ್ದಿಕ್ ಪಟೇಲ್ ರಾಜೀನಾಮೆ ಸಲ್ಲಿಸಿದ್ದು, ಅಧಿಕೃತವಾಗಿ ಪಕ್ಷ ತೊರೆಯುತ್ತಿರುವುದಾಗಿ ಹೇಳಿದ್ದಾರೆ.

"ನಾನು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಹುದ್ದೆಗೆ ರಾಜೀನಾಮೆ ನೀಡಲು ಧೈರ್ಯ ಮಾಡಿದ್ದೇನೆ. ನನ್ನ ನಿರ್ಧಾರವನ್ನು ನನ್ನ ಸಹೋದ್ಯೋಗಿಗಳು ಮತ್ತು ಗುಜರಾತ್ ಜನರು ಸ್ವಾಗತಿಸುತ್ತಾರೆ ಎಂದು ನನಗೆ ಖಾತ್ರಿಯಿದೆ. ಈ ಹೆಜ್ಜೆಯಿಂದ ಭವಿಷ್ಯದಲ್ಲಿ ನಾನು ಗುಜರಾತ್‌ಗೆ ನಿಜವಾಗಿಯೂ ಧನಾತ್ಮಕವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ನಾನು ನಂಬುತ್ತೇನೆ." ಎಂದು ಹಾರ್ದಿಕ್ ಪಟೇಲ್ ಟ್ವಿಟರ್ ಪೋಸ್ಟ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಂಚಿಕೊಂಡಿದ್ದಾರೆ.

ಬಿಜೆಪಿ ನಾಯಕತ್ವಕ್ಕೆ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಇದೆ. ಕಾಂಗ್ರೆಸ್ ಬಗ್ಗೆ ನನಗಿರುವ ಅಸಮಾಧಾನದಿಂದ ನಾನಿದನ್ನು ಹೇಳುತ್ತಿಲ್ಲ. ಬಿಜೆಪಿಯವರು ತಮ್ಮ ಸಂಘಟನೆಗೆ ಬಹಳ ಶ್ರಮ ಹಾಕುತ್ತಾರೆ. ಆಗಾಗ ಬದಲಾವಣೆಗಳನ್ನ ಮಾಡುತ್ತಿರುತ್ತಾರೆ. ಹೊಸ ಆವಿಷ್ಕಾರಗಳನ್ನು ತರುತ್ತಿರುತ್ತಾರೆ. ಹಲವು ವರ್ಷಗಳಿಂದ ಇದು ನಡೆಯುತ್ತಾ ಬಂದಿದೆ. ಕಾಂಗ್ರೆಸ್ ಸೋಲುತ್ತಿದೆ, ಬಿಜೆಪಿ ಗೆಲ್ಲುತ್ತಿದೆ ಎಂದು ಜನರೂ ಮಾತನಾಡುತ್ತಿದ್ದಾರೆ" ಎಂದು ಹಾರ್ದಿಕ್ ಪಟೇಲ್ ಹೇಳಿದ್ದಾರೆ.

Hardik Patel Quits Gujarat Congress

ಗುಜರಾತ್‌ನ ವಿಪಕ್ಷವಾಗಿ ನಾವು ಜನರ ಧ್ವನಿ ಎತ್ತಲು ವಿಫಲರಾಗಿದ್ದೇವೆ. ಜನರ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ಅದಕ್ಕಾಗಿ ಹೋರಾಡುವುದು ವಿಪಕ್ಷದ ಕರ್ತವ್ಯ. ನಾವು ಅದರಲ್ಲಿ ಯಶಸ್ವಿಯಾಗಿಲ್ಲದಿರುವುದರಿಂದ ಜನರು ಬೇರೆ ಆಯ್ಕೆಗಳತ್ತ ಆಲೋಚಿಸುತ್ತಿದ್ದಾರೆ" ಎಂದು ಹಾರ್ದಿಕ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು.

ಹಾರ್ದಿಕ್ ಪಟೇಲ್ ಅವರು ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಳಿಕ ಗುಜರಾತ್ ಕಾಂಗ್ರೆಸ್‌ನ ಉಸ್ತುವಾರಿ ಆಗಿರುವ ರಘು ಶರ್ಮಾ ಅವರು ಮಾಧ್ಯಮಗಳ ಮುಂದೆ ಹೇಳಿಕೆ ಕೊಡುವ ಬದಲು ಪಕ್ಷದ ವೇದಿಕೆಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ಹಾರ್ದಿಕ್ ಪಟೇಲ್ ಅವರಿಗೆ ಎಚ್ಚರಿಕೆ ಕೊಟ್ಟಿದ್ದರು.

2015 ರ ಪಾಟೀದಾರ್ ಚಳವಳಿಯ ಸಮಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಪರಾಧಿ ಎನಿಸಿರುವ ಪಾಟೀದಾರ್ ಸಮುದಾಯದ ನಾಯಕ, ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್‌ಗೆ ಸುಪ್ರೀಂಕೋರ್ಟ್ ನಿಂದ ಮಂಗಳವಾರ ಶುಭ ಸುದ್ದಿ ಸಿಕ್ಕಿದೆ.

Recommended Video

ಡೇವಿಡ್ ಹೋರಾಟ ವ್ಯರ್ಥ:ಮುಂಬೈ ವಿರುದ್ಧ ರೋಚಕ ಗೆಲುವು ಪಡೆದ ಹೈದರಾಬಾದ್ | Oneindia Kannada

ಹಾರ್ದಿಕ್ ಪಟೇಲ್ 2017 ರ ಡಿಸೆಂಬರ್ ನಲ್ಲಿ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲೇ ಸ್ಪರ್ಧಿಸಬೇಕಿತ್ತು. ಆದರೆ ಚುನಾವಣೆಗೆ ಸ್ಪರ್ಧಿಸಲು ಬೇಕಿದ್ದ ಕನಿಷ್ಠ ವಯೋಮಿತಿ(25 ವರ್ಷ)ಯನ್ನು ಅವರು ಮೀರಿರದ ಕಾರಣ ಅವರು ಚುನಾವನೆಗೆ ಸ್ಪರ್ಧಿಸಿರಲಿಲ್ಲ.

English summary
Hardik Patel has quit the Congress, in a huge blow to the party just months before the Gujarat election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X