ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಕಾಣೆ: ಹೆಂಡತಿ ಅಳಲು

ಅಹ್ಮದಾಬಾದ್, ಫೆಬ್ರವರಿ 10: ಕಾಂಗ್ರೆಸ್ ನಾಯಕ, ಪಾಟೀದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಅವರು ಕಾಣೆ ಆಗಿದ್ದಾರೆ, ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಅವರ ಪತ್ನಿ ಅಳಲು ತೋಡಿಕೊಂಡಿದ್ದಾರೆ.

'ಜನವರಿ 18 ರಿಂದಲೂ ಪತಿ ಹಾರ್ದಿಕ್ ಪಟೇಲ್ ಸಂಪರ್ಕಕ್ಕೆ ಸಿಕ್ಕಿಲ್ಲ, ಅವರನ್ನು ಹುಡುಕಿಕೊಂಡು ಪೊಲೀಸರು ಮನೆಗೆ ಬರುತ್ತಿದ್ದಾರೆ. ಅವರ ಬಗ್ಗೆ ಮಾಹಿತಿ ಕೇಳುತ್ತಾರೆ ಆದರೆ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ' ಎಂದು ಹಾರ್ದಿಕ್ ಪಟೇಲ್ ಪತ್ನಿ ಕಿಂಜಲ್ ಅವರು ಪಾಟೀದಾರ್ ಸಮುದಾಯ ಸಭೆಯಲ್ಲಿ ಮಾತನಾಡಿ ಹೇಳಿದ್ದಾರೆ.

ಹಾರ್ದಿಕ್ ಪಟೇಲ್ ಅವರನ್ನು ದೇಶದ್ರೋಹ ಪ್ರಕರಣದಲ್ಲಿ ಜನವರಿ 18 ರಂದು ಪೊಲೀಸರು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಅದೇ ದಿನ ಮತ್ತೆ ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಅವರನ್ನು ಬಂಧಿಸಿದ್ದರು. ಮತ್ತೆ ಆ ಪ್ರಕರಣದಲ್ಲೂ ಜಾಮೀನಿನ ಮೇಲೆ ಹೊರಬಂದರು ಅಂದಿನಿಂದ ಅವರು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.

Hardik Patel Untraceable Since January 18: Wife Kinjal

ನಂತರ ಫೆಬ್ರವರಿ 7 ರಂದು ನ್ಯಾಯಾಲಯದ ವಿಚಾರಣೆಗೆ ಗೈರಾದ ಕಾರಣ ಹಾರ್ದಿಕ್ ಪಟೇಲ್ ಮೇಲೆ ವಾರೆಂಟ್ ಹೊರಡಿಸಲಾಗಿದ್ದು, ಪೊಲೀಸರು ಹಾರ್ದಿಕ್‌ ಗಾಗಿ ಹುಡುಕಾಟ ನಡೆಸಿದ್ದಾರೆ. ಜನವರಿ 24 ರಂದು ಕೊನೆ ಬಾರಿಗೆ ಜಾಮೀನಿನ ಮೇಲೆ ಹೊರಗೆ ಬಂದಿದ್ದರು ಅದಾದ ನಂತರ ಅವರು ಎಲ್ಲಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ.

2015 ರಲ್ಲಿ ಪಾಟೀದಾರ್ ಸಮುದಾಯದ ಮೀಸಲಾತಿಗೆ ಒತ್ತಾಯಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸಮುದಾಯದವರ ಮೇಲೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವಂತೆ ಪಾಟೀದಾರ್ ಸಮುದಾಯವು ಪ್ರತಿಭಟನೆ ನಡೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+