ಅಹಮದಾಬಾದ್: ಬ್ಲ್ಯಾಕ್ ಫಂಗಸ್ ಸೋಂಕು ಗಣನೀಯ ಹೆಚ್ಚಳ
ಬ್ಲ್ಯಾಕ್ ಫಂಗಸ್ ಸೋಂಕು ಹೆಚ್ಚಳ - ಅಹಮದಾಬಾದ್ನಲ್ಲಿ 481 ರೋಗಿಗಳು ಆಸ್ಪತ್ರೆಗೆ ದಾಖಲು
ಅಹಮದಾಬಾದ್, ಮೇ 20: ದೇಶದಲ್ಲಿ ಈಗ ಬ್ಲ್ಯಾಕ್ ಫಂಗಸ್ ಸೋಂಕು ಪ್ರಕರಣಗಳು ಕೂಡಾ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಗುಜರಾತ್ನ ಅಹಮದಾಬಾದ್ನಲ್ಲೇ 481 ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೇಶದಲ್ಲಿ ಈಗಾಗಲೇ ಕೊರೊನಾ ಸೋಂಕು ಆರೋಗ್ಯ ವಲಯ ಮಾತ್ರವಲ್ಲದೇ ಎಲ್ಲಾ ವಲಯಗಳಲ್ಲೂ ಭಾರೀ ಪ್ರಮಾಣದ ಪರಿಣಾಮ ಉಂಟು ಮಾಡಿದೆ. ಈ ನಡುವೆ ಈಗ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪ್ರಕರಣಗಳು ದೃಢಪಡುತ್ತಿರುವುದು ಕೂಡಾ ಅಧಿಕವಾಗುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರವು ಈ ಸೋಂಕನ್ನು ಸಾಂಕ್ರಾಮಿಕ ಎಂದು ಘೋಷಿಸಲು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

4 ರಾಜ್ಯಗಳಲ್ಲಿ ಈ ಸೋಂಕು ಹೆಚ್ಚಳವಾಗುತ್ತಿದ್ದು, ಮಹಾರಾಷ್ಟ್ರದಲ್ಲಿ ಸುಮಾರು 90 ಜನರು ಈ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಗುಜರಾತ್ನ ಅಹಮದಾಬಾದ್ನಲ್ಲಿ ಸೋಂಕು ಪ್ರಮಾಣ ಉಲ್ಬಣವಾಗಿದ್ದು 481 ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ರೋಗಿಗಳ ಸೇವೆಗೆ 24x7 ಹಾಜರಿರುವಂತೆ ವೈದ್ಯರಿಗೆ ಆದೇಶ ಹೊರಡಿಸಲಾಗಿದೆ.
ಇನ್ನು ಈಗಾಗಲೇ 132 ರೋಗಿಗಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಚಿಕಿತ್ಸೆ ಪಡೆದ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ನಡುವೆ ಬ್ಲ್ಯಾಕ್ ಫಂಗಸ್ ಸೋಂಕಿಗೆ ಬಳಸಲಾಗುವ ಆಂಟಿ ಫಂಗಲ್ ಔಷಧಿ ಆಂಫೊಟೆರಿಸಿನ್-ಬಿ ಯ ಕೊರತೆಯು ಗುಜರಾತ್ನಲ್ಲಿ ಆತಂಕಕ್ಕೆ ಕಾರಣವಾಗಿದೆ.
ಈ ಬ್ಲ್ಯಾಕ್ ಫಂಗಸ್ನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿರುವ ಕೇಂದ್ರ ಸರ್ಕಾರವು, ಈ ಬಗ್ಗೆ ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಕಳುಹಿಸಿದೆ. ಈ ಪತ್ರದಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ನ್ಯೂಕೋರ್ಮಿಕೋಸಿಸ್ ರೋಗವನ್ನು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಸೂಚಿಸಬಹುದಾದ ಕಾಯಿಲೆ ಎಂದು ತಿಳಿಸಲಾಗಿದೆ.
(ಒನ್ಇಂಡಿಯಾ ಸುದ್ದಿ)
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications