ಲೋಕಸಭೆ ಸ್ಪರ್ಧೆಯಿಂದ ಹಿಂದೆ ಸರಿದ ಹಾಲಿ ಸಂಸದ ಪರೇಶ್ ರಾವಲ್

ಅಹಮದಾಬಾದ್, ಏಪ್ರಿಲ್ 04: ಭಾರತೀಯ ಜನತಾ ಪಕ್ಷ (ಬಿಜೆಪಿ)ವು ತನ್ನ ಅಹಮದಾಬಾದ್ ಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿದೆ. ಹೀಗಾಗಿ, ಈ ಕ್ಷೇತ್ರದಿಂದ ಸ್ಪರ್ಧಿಸಬೇಕಿದ್ದ ನಟ ಕಮ್ ರಾಜಕಾರಣಿ, ಹಾಲಿ ಸಂಸದ ಪರೇಶ್ ರಾವಲ್ ಅವರು ಸ್ಪರ್ಧೆ ಅವಕಾಶ ವಂಚಿತರಾಗಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ನಟ ಪರೇಶ್ ಅವರನ್ನು ಬದಲಾಯಿಸಿ ಹಸ್ಮುಖ್ ಎಸ್ ಪಟೇಲ್ ಅವರಿಗೆ ಅಹಮದಾಬಾದ್ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸುವಂತೆ ಬಿಜೆಪಿ ಟಿಕೆಟ್ ನೀಡಲಾಗಿದೆ. 2012 ಹಾಗೂ 2017ರಲ್ಲಿ ಪಟೇಲ್ ಅವರು ಶಾಸಕರಾಗಿದ್ದರು.

ಅಹಮದಾಬಾದ್ ಪೂರ್ವ ಕ್ಷೇತ್ರದ ಹಾಲಿ ಸಂಸದ ಪರೇಶ್ ರಾವಲ್ ಅವರು, ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

LS polls: BJP fields HS Patel from Ahmedabad East in place of Paresh Rawal

'ನಾನು ಈ ಬಾರಿ ಸ್ಪರ್ಧಿಸುವುದಿಲ್ಲ ಎಂದು ನಾಲ್ಕೈದು ತಿಂಗಳುಗಳ ಹಿಂದೆಯೇ ಪಕ್ಷಕ್ಕೆ ತಿಳಿಸಿದ್ದೆ, ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಹೈಕಮಾಂಡ್ ತಿಳಿಸಿತ್ತು' ಎಂದು ರಾವಲ್ ಹೇಳಿದ್ದಾರೆ.

ಏಪ್ರಿಲ್ 11 ರಿಂದ ಮೇ 19ರ ತನಕ ಏಳು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 23ರಂದು ಚುನಾವಣೆ ಫಲಿತಾಂಶ ಹೊರಬರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+