ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾನಸಿಕ ಆರೋಗ್ಯ ರಕ್ಷಣೆಗೆ ಇ-ಮನಸ್ ಮಾದರಿ ಸೇವೆ; ಸುಧಾಕರ್

|
Google Oneindia Kannada News

ಅಹಮದಾಬಾದ್, ಮೇ 06 : "ದೈಹಿಕ ಆರೋಗ್ಯಕ್ಕೆ ಎಷ್ಟು ಮಹತ್ವ ಸಿಗುತ್ತಿದೆಯೋ ಅಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ಸಿಗಬೇಕು. ಆಧುನಿಕ ಜೀವನ ಶೈಲಿಯಿಂದ ಜನರು ಮಾನಸಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ" ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಶುಕ್ರವಾರ ಗುಜರಾತ್​​ನ ಕೆವಾಡಿಯಾದಲ್ಲಿ 14ನೇ ಆವೃತ್ತಿಯ ಸೆಂಟ್ರಲ್ ಹೆಲ್ತ್ ಕೌನ್ಸಿಲ್ ಆಫ್ ಹೆಲ್ತ್ ಅಂಡ್ ಫ್ಯಾ ಮಿಲಿ ವೆಲ್ ಫೇರ್ ನಡೆಸುತ್ತಿರುವ 'ಸ್ವಾಸ್ಥ್ಯ ಚಿಂತನ್ ಶಿವಿರ್' ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಡಾ. ಸುಧಾಕರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, "ಆಧುನಿಕ ಜೀವನ ಶೈಲಿಯಿಂದ ಜನರು ಮಾನಸಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇದಕ್ಕೆ ಪರಿಹಾರ ಕಲ್ಪಿಸಲು ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆ ವಿಶೇಷ ಕಾರ್ಯಕ್ರಮಗಳನ್ನು ಮಾಡಿದೆ" ಎಂದರು.

"ಮಾನಸಿಕ ಆರೋಗ್ಯ ಚಿಕಿತ್ಸೆಯಲ್ಲಿ ಕರ್ನಾಟಕ ಮಾದರಿ ವ್ಯವಸ್ಥೆಯನ್ನು ಜಾರಿ ಮಾಡಿದೆ. ಮಾನಸಿಕ ಆರೋಗ್ಯದ ಕೊರತೆ ದೈಹಿಕ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿ ಸರ್ಕಾರ ಇ-ಮನಸ್ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಜನರ ಮಾನಸಿಕ ಆರೋಗ್ಯವನ್ನು ಗಟ್ಟಿಮಾಡಲು ಶ್ರಮಿಸುತ್ತಿದೆ" ಎಂದು ತಿಳಿಸಿದರು.

"ಕೋವಿಡ್ ಆರಂಭ ಕಾಲದಲ್ಲಿ ಪಾಸಿಟಿವ್ ಎಂಬ ವರದಿಯನ್ನು ನೋಡಿಯೇ ವಿನಾಕಾರಣ ಆತಂಕಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ಉದಾಹರಣೆ ಇದೆ. ಹಾಗೆಯೇ 100 ವರ್ಷ ಮೇಲ್ಪಟ್ಟ ವೃದ್ಧರು ಯಶಸ್ವಿಯಾಗಿ ಕೊರೊನಾ ಗೆದ್ದು ಬಂದ ಅಚ್ಚರಿಯ ಘಟನೆಗಳೂ ಇವೆ" ಎಂದು ಸಚಿವರು ಹೇಳಿದರು.

ನಿರ್ವಹಣೆಗೆ ಡಿಜಿಟಲ್ ವ್ಯವಸ್ಥೆ

ನಿರ್ವಹಣೆಗೆ ಡಿಜಿಟಲ್ ವ್ಯವಸ್ಥೆ

"ಮಾನಸಿಕ ಆರೋಗ್ಯ ಇಡೀ ದೇಹದ ಒಟ್ಟು ಆರೋಗ್ಯದ ಸುಸ್ಥಿತಿಯ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಕೊರೊನಾ ಸಮಯದಲ್ಲಿ ಟೆಲಿ ಕೌನ್ಸೆಲಿಂಗ್ ಮೂಲಕ ಸುಮಾರು 27 ಲಕ್ಷ ಜನರಿಗೆ ಆತ್ಮವಿಶ್ವಾಸ ತುಂಬಲಾಗಿದೆ. ಸರ್ಕಾರ, ನಿಮ್ಹಾನ್ಸ್ ಸಂಸ್ಥೆಯ ಜೊತೆ ಸೇರಿಕೊಂಡು ಟೆಲಿ ಕೌನ್ಸಲಿಂಗ್ ಮತ್ತು ಟೆಲಿ ಮಾನಿಟರಿಂಗ್ ಮೂಲಕ ಡಿಜಿಟಲ್ ವ್ಯವಸ್ಥೆಯಲ್ಲಿ ಮಾನಸಿಕ ಆರೋಗ್ಯ ಕ್ಷೇಮವನ್ನು ಹೆಚ್ಚಿಸಲು ಕ್ರಮ ಕೈಗೊಂಡಿತ್ತು" ಎಂದು ಡಾ. ಕೆ. ಸುಧಾಕರ್ ವಿವರಿಸಿದರು.

ಮಾನಸಿಕ ಸಮಸ್ಯೆ

ಮಾನಸಿಕ ಸಮಸ್ಯೆ

"ಕರ್ನಾಟಕದಲ್ಲಿ ಇ-ಮನಸ್, ಮನೋ ಚೈತನ್ಯ ಕ್ಲಿನಿಕ್, ಮಾತೃ ಚೈತನ್, ಧವಾ ಅಂಡ್ ಧುವಾ ಹೀಗೆ ಹಲವು ಚಿಕಿತ್ಸಾ ವ್ಯವಸ್ಥೆಯನ್ನು ಹೊಂದಿದೆ. ಈ ಮೂಲಕ ವಿವಿಧ ರೀತಿಯ ಮಾನಸಿಕ ಸಮಸ್ಯೆ ಎದುರಿಸುತ್ತಿರುವವರಿಗೆ ವಿವಿಧ ರೀತಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅನೇಕರು ಮಾನಸಿಕ ರೋಗಗಳಿಂದ ಬಳಲುತ್ತಿದ್ದರೂ ಅದನ್ನು ಒಂದು ರೋಗ ಎಂದು ಗುರುತಿಸುವುದಿಲ್ಲ. ಇನ್ನೂ ಕೆಲವರು ಅದನ್ನು ಬಹಿರಂಗವಾಗಿ ಹೇಳಿಕೊಳ್ಳಲು ಮುಜುಗರಪಡುತ್ತಾರೆ. ಈ ಸವಾಲುಗಳನ್ನು ನಿವಾರಿಸಿ ಮಾನಸಿಕ ಅನಾರೋಗ್ಯಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಸಚಿವರು ಹೇಳಿದರು.

ವಿಶೇಷ ಕಾಳಜಿ ವಹಿಸಲಾಗುತ್ತಿದೆ

ವಿಶೇಷ ಕಾಳಜಿ ವಹಿಸಲಾಗುತ್ತಿದೆ

"ಸಾರ್ವಜನಿಕರ ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ, ಆಪ್ತ ಸಮಾಲೋಚನೆ ಸೇವೆ ನೀಡಲಾಗುತ್ತಿದೆ. ಕರ್ನಾಟಕ ಮಾನಸಿಕ ಆರೋಗ್ಯ ನಿರ್ವಹಣಾ ವ್ಯವಸ್ಥೆ (ಇ-ಮನಸ್) ಸಂಪೂರ್ಣ ಡಿಜಿಟಲ್ ವ್ಯವಸ್ಥೆಯಾಗಿದೆ. ಈ ವೆಬ್ ವ್ಯವಸ್ಥೆಯು, ಮಾನಸಿಕ ಅಸ್ವಸ್ಥತೆಯ ಆರೈಕೆ ಪಡೆಯಲು ಬಯಸುವ ವ್ಯಕ್ತಿಯ ಮೂಲ ವೈದ್ಯಕೀಯ ದಾಖಲೆಯನ್ನು ನಿರ್ವಹಣೆ ಮಾಡುತ್ತದೆ" ಎಂದರು.

ಒಂದು ಗೂಡಿಸುವ ವೇದಿಕೆ

ಒಂದು ಗೂಡಿಸುವ ವೇದಿಕೆ

"ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ, ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿ, ಸಾರ್ವಜನಿಕ ಹಾಗೂ ಖಾಸಗಿ ಮಾನಸಿಕ ಆರೋಗ್ಯ ಸಂಸ್ಥೆಗಳು ಸೇರಿದಂತೆ ಮಾನಸಿಕ ಆರೋಗ್ಯ ವಲಯದ ಎಲ್ಲಾ ಪಾಲುದಾರರನ್ನು ಒಂದುಗೂಡಿಸುವ ವೇದಿಕೆ ಇದಾಗಿದೆ. ಇಂಟರ್ ವೆನ್ಷನ್, ಇಂಟಗ್ರೇಶನ್, ಇಂಪ್ಲಿಮೆಂಟೇಶನ್, ಇನ್ನೋವೇಶನ್ ಮತ್ತು ಇನ್ವೆಸ್ಟ್ ಮೆಂಟ್ ಮೂಲಕ ಸರ್ಕಾರ ಜನರ ಆರೋಗ್ಯದ ಸುಧಾರಣೆಗೆ ವಿಶೇಷ ಕಾಳಜಿ ವಹಿಸುತ್ತಿದೆ" ಎಂದು ಸಚಿವರು ತಿಳಿಸಿದರು.

English summary
Karnataka health minister Dr. K. Sudhakar said that modern lifestyle destroying mental health and state will implement e-manas model program to treat illness. He took part in Swasthya Chintan Shivir in Kevadia, Gujarat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X