ಸೂರತ್ ಅಗ್ನಿ ದುರಂತ: ಮೃತ ವಿದ್ಯಾರ್ಥಿಗಳಿಗಾಗಿ ಮೋದಿ ಕಣ್ಣೀರು
ಸೂರತ್, ಮೇ 24: ಗುಜರಾತ್ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಅಸುನೀಗಿದವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಶಾಪಿಂಗ್ ಕಾಂಪ್ಲೆಕ್ಸ್‌ನ ಮೇಲ್ಭಾಗದಲ್ಲಿ ಟ್ಯೂಷನ್ ಸೆಂಟರ್ ಒಂದು ಇದ್ದು, ಬೆಂಕಿಯಿಂದ ರಕ್ಷಿಸಿಕೊಳ್ಳಲು ವಿದ್ಯಾರ್ಥಿಗಳು ನಾಲ್ಕನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾರೆ. ಈ ಅವಘಡದಲ್ಲಿ ಈ ವರೆಗೆ 19 ಮಂದಿ ಸಾವನ್ನಪ್ಪಿದ್ದಾರೆ ಇದರಲ್ಲಿ ಹಲವರು ವಿದ್ಯಾರ್ಥಿಗಳೇ ಆಗಿದ್ದಾರೆ.
ಸೂರತ್‌ನ ಸರ್ತಾನಾ ಪ್ರದೇಶದಲ್ಲಿರುವ ತಕ್ಷಿಲಾ ಆರ್ಕೇಡ್ ಕಟ್ಟಡದ ಎರಡನೆಯ ಮಹಡಿಯಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದೆ. ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಮಾತ್ರದಲ್ಲಿಯೇ ಎಲ್ಲೆಡೆ ಆವರಿಸಿಕೊಂಡಿತು. 18 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದವು.

ನರೇಂದ್ರ ಮೋದಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಘಟನೆಯಿಂದ ದುಃಖಿತನಾಗಿದ್ದೇನೆ, ಸಾವನ್ನಪ್ಪಿದ ಕುಟುಂಬದವರಿಗೆ ಸಾಂತ್ವನಗಳು. ಗುಜರಾತ್ ಸರ್ಕಾರ ಮತ್ತು ಸ್ಥಳೀಯ ಆಡಳಿತಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದು ಮೋದಿ ಹೇಳಿದ್ದಾರೆ.
ಸಾವನ್ನಪ್ಪಿದವರ ಕುಟುಂಬಕ್ಕೆ ನಾಲ್ಕು ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಗಾಯಗೊಂಡವರಿಗೂ ಪರಿಹಾರ ಘೋಷಿಸಿದೆ.
ವಿದ್ಯಾರ್ಥಿಗಳು ಜೀವ ಭಯದಿಂದ ನಾಲ್ಕನೇ ಮಹಡಿಯಿಂದ ಕೆಳಗೆ ಹಾರುತ್ತಿರುವ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ದೃಶ್ಯ ಭೀಕರವಾಗಿದೆ.












Click it and Unblock the Notifications