ಗುಜರಾತ್; ಪ್ರಧಾನಿ ಮೋದಿ ಸಂಬಂಧಿ ಕೋವಿಡ್‌ಗೆ ಬಲಿ

ಅಹಮದಾಬಾದ್, ಏಪ್ರಿಲ್ 27; ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧಿ ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

80 ವರ್ಷದ ನರ್ಮದಾಬೇನ್ ಅಹಮದಾಬಾದ್‌ನ ನ್ಯೂ ರಾಣಿಪ್ ಪ್ರದೇಶದಲ್ಲಿ ಮಕ್ಕಳ ಜೊತೆ ವಾಸವಾಗಿದ್ದರು. ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಈ ಕುರಿತು ಮಾಹಿತಿ ನೀಡಿದ್ದಾರೆ. "ನಮ್ಮ ಸಂಬಂಧಿ ನರ್ಮದಾಬೇನ್ ಅವರನ್ನು 10 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೋವಿಡ್ ಸೋಂಕು ತಗುಲಿದ್ದ ಅವರ ಸ್ಥಿತಿ ಗಂಭೀರವಾಗಿತ್ತು" ಎಂದು ತಿಳಿಸಿದ್ದಾರೆ.

Narendra Modis Aunt Died Due To COVID 19

"ಚಿಕಿತ್ಸೆ ಫಲಕಾರಿಯಾಗದೇ ಅವರು ಮಂಗಳವಾರ ಮೃತಪಟ್ಟಿದ್ದಾರೆ. ಆಕೆಯ ಪತಿ, ನರೇಂದ್ರ ಮೋದಿ ತಂದೆ ದಾಮೋದರ್ ದಾಸ್ ಸಹೋದರ ಜಗಜೀವನ್‌ದಾಸ್ ಹಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು" ಎಂದು ಹೇಳಳಿದ್ದಾರೆ.

ಗುಜರಾತ್ ರಾಜ್ಯದಲ್ಲಿಯೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಇಂದು ರಾಜ್ಯದಲ್ಲಿ 14,352 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 5,24,725ಕ್ಕೆ ಏರಿಕೆಯಾಗಿದೆ.

ರಾಜಧಾನಿ ಅಹಮದಾಬಾದ್‌ನಲ್ಲಿ ಇಂದು 5,725 ಹೊಸ ಪ್ರಕರಣ ದಾಖಲಾಗಿದೆ. 26 ಜನರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 56,076.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+