• search
  • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗುಜರಾತ್ ಹೊಸ ಸಿಎಂ ಆಯ್ಕೆ; 3 ಗಂಟೆಗೆ ಮಹತ್ವದ ಸಭೆ

|
Google Oneindia Kannada News

ಅಹಮದಾಬಾದ್, ಸೆಪ್ಟೆಂಬರ್ 12; ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ (65) ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಭಾನುವಾರ ಹೊಸ ಸಿಎಂ ಆಯ್ಕೆಗೆ ಮಹತ್ವದ ಸಭೆ ನಡೆಯಲಿದೆ.

ಭಾನುವಾರ ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕೇಂದ್ರದಿಂದ ಆಗಮಿಸಿರುವ ನಾಯಕರ ನೇತೃತ್ವದಲ್ಲಿ ನಡೆಯಲಿದೆ. ಬಿಜೆಪಿಯ ವೀಕ್ಷಕರಾಗಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ನೇಮಕಗೊಂಡಿದ್ದಾರೆ.

ಗುಜರಾತ್ ಸಿಎಂ ವಿಜಯ್ ರೂಪಾನಿ ದಿಢೀರ್ ರಾಜೀನಾಮೆಗೆ ಕಾರಣ ಏನಿರಬಹುದು?ಗುಜರಾತ್ ಸಿಎಂ ವಿಜಯ್ ರೂಪಾನಿ ದಿಢೀರ್ ರಾಜೀನಾಮೆಗೆ ಕಾರಣ ಏನಿರಬಹುದು?

ನರೇಂದ್ರ ಸಿಂಗ್ ತೋಮರ್ ಭಾನುವಾರ ಬೆಳಗ್ಗೆ ಅಹಮದಾಬಾದ್ ತಲುಪಿದ್ದಾರೆ. ಗುಜರಾತ್ ಬಿಜೆಪಿ ಅಧ್ಯಕ್ಷ್ ಸಿ. ಆರ್. ಪಾಟೀಲ್ ಜೊತೆ ಅವರು ಒಂದು ಸುತ್ತಿನ ಸಭೆ ನಡೆಲಿದ್ದು, ಮುಂದಿನ ಬೆಳವಣಿಗೆ ಕುರಿತು ಚರ್ಚೆ ನಡೆಸಲಿದ್ದಾರೆ.

ಗುಜರಾತ್ ಸಿಎಂ ರೂಪಾನಿ ರಾಜೀನಾಮೆ: ಸಿಎಂ ರೇಸಿನಲ್ಲಿರುವ ಐವರುಗುಜರಾತ್ ಸಿಎಂ ರೂಪಾನಿ ರಾಜೀನಾಮೆ: ಸಿಎಂ ರೇಸಿನಲ್ಲಿರುವ ಐವರು

ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ ಬಿಜೆಪಿ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ವಿಧಾನಸಭೆ ಚುನಾವಣೆಗೆ 15 ತಿಂಗಳು ಬಾಕಿ ಇರುವಾಗ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

Breaking: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ Breaking: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ

"ಗುಜರಾತ್‌ಗೆ ಹೊಸ ನಾಯಕತ್ವದ ಅಗತ್ಯವಿದೆ ಅನ್ನಿಸುತ್ತಿದೆ. ಆದ್ದರಿಂದ ರಾಜೀನಾಮೆ ನೀಡುತ್ತಿದ್ದೇನೆ" ಎಂದು ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ. 2017ರಲ್ಲಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು.

ಕೆಲವು ದಿನಗಳ ಹಿಂದೆ ನರೇಶ್ ಪಟೇಲ್, "ಪಾಟೀದಾರ್ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ಬೇಕು" ಎಂದು ಹೇಳಿದ್ದರು. ಚುನಾವಣೆ ಹತ್ತಿರವಿರುವಾಗ ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ರಾಜೀನಾಮೆ ಪಡೆದಿರುವುದು ಚರ್ಚೆಗೆ ಕಾರಣವಾಗಿದೆ.

ವಿಜಯ್ ರೂಪಾನಿ 'ರಿಮೋಟ್ ಕಂಟ್ರೋಲ್ ಮುಖ್ಯಮಂತ್ರಿ' ಎಂಬ ಮಾತುಗಳು ಪಕ್ಷದ ವಲಯದಲ್ಲಿ ಹಬ್ಬಿದ್ದವು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ. ಆರ್. ಪಾಟೀಲ್ ಸೂಪರ್ ಸಿಎಂ ರೀತಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ ಎಂಬ ಆರೋಪಗಳಿದ್ದವು.

ಇನ್ನೂ ಕೋವಿಡ್ ಸಂದರ್ಭದಲ್ಲಿ ವಿಜಯ್ ರೂಪಾನಿ ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಆರೋಪಗಳು ಸಹ ಇವೆ. ಪಾಟೀದಾರ್ ಸಮಯದಾಯದ ನಾಯಕನಿಗೆ ಮುಖ್ಯಮಂತ್ರಿ ಪಟ್ಟ ಒಲಿದು ಬಂರಲಿದೆ ಎಂಬ ಸುದ್ದಿಗಳು ಹಬ್ಬಿವೆ.

ಅಮಿತ್ ಶಾ ಆಗಮನ; ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಹ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಹೊಸ ಮುಖ್ಯಮಂತ್ರಿ ಹೆಸರನ್ನು ಇಂದೇ ಬಿಜೆಪಿ ಘೋಷಣೆ ಮಾಡಲಿದೆ.

ಬಿಜೆಪಿ ಮುಂದಿನ ಆಯ್ಕೆ; ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆಗೆ 15 ತಿಂಗಳು ಬಾಕಿ ಇದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಮುಂದೆ ಮೂರು ಆಯ್ಕೆಗಳಿವೆ

* ಹೊಸ ಮುಖ್ಯಮಂತ್ರಿ ಆಯ್ಕೆ ಮಾಡುವುದು
* ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ
* ಅವಧಿ ಪೂರ್ವ ಚುನಾವಣೆಗೆ ಹೋಗುವುದು

ಆದರೆ ಬಿಜೆಪಿ ಅವಧಿ ಪೂರ್ಣ ಚುನವಣೆಗೆ ಹೋಗುವುದಿಲ್ಲ. ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದೆ ಎಂಬ ಸುದ್ದಿಗಳು ಹಬ್ಬಿವೆ. ಚುನಾವಣೆ ಮುಂದಿಟ್ಟುಕೊಂಡು ಯಾರಿಗೆ ಮುಖ್ಯಮಂತ್ರಿ ಪಟ್ಟ ನೀಡಲಾಗುತ್ತದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಸಿಎಂ ರೇಸ್‌ನಲ್ಲಿ ಯಾರು?; ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಉಪ ಮುಖ್ಯಮಂತ್ರಿಯಾಗಿರುವ ನಿತಿನ್ ಪಟೇಲ್ ಹೆಸರು ಮುಂಚೂಣಿಯಲ್ಲಿದೆ.

ಉಳಿದಂತೆ ಇಬ್ಬರು ಕೇಂದ್ರ ಸಚಿವರು, ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್, ರಾಜ್ಯದ ಕೃಷಿ ಸಚಿವ ಆರ್. ಸಿ. ಫಾಲ್ಡು ಹೆಸರು ಸಹ ಕೇಳಿಬರುತ್ತಿದೆ.

2016ರಲ್ಲಿ ವಿಧಾನಸಭೆ ಚುನಾವಣಗೆ ಒಂದು ವರ್ಷವಿದೆ ಎನ್ನುವಾಗ ವಯಸ್ಸಿನ ಕಾರಣ ನೀಡಿ ಆನಂದಿ ಬೆನ್ ಪಟೇಲ್ ರಾಜೀನಾಮೆ ಪಡೆಯಲಾಗಿತ್ತು. ಈಗ 15 ತಿಂಗಳು ಬಾಕಿ ಇರುವಾಗ ವಿಜಯ್ ರೂಪಾಣಿ ರಾಜೀನಾಮೆಯನ್ನು ಬಿಜೆಪಿ ಪಡೆದಿದೆ.

ಜುಲೈ ತಿಂಗಳಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ಪಡೆಯಲಾಗಿತ್ತು. ಬಸವರಾಜ ಬೊಮ್ಮಾಯಿಯನ್ನು ನೂತನ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿತ್ತು.

English summary
BJP legislature party meeting in Gujarat is scheduled on 3 pm to choose the new chief minister after the resignation of Vijay Rupani.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X