• search
  • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗುಜರಾತಿನ ಪ್ರಮುಖ ನಾಲ್ಕು ನಗರದಲ್ಲಿ ರಾತ್ರಿ ನಿಷೇಧಾಜ್ಞೆ

|

ಅಹ್ಮದಾಬಾದ್, ಫೆಬ್ರವರಿ.15: ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದ ನಾಲ್ಕು ಪ್ರಮುಖ ನಗರದಲ್ಲಿ ರಾತ್ರಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಪಂಜಾಬ್ ಸರ್ಕಾರ ಆದೇಶ ಹೊರಡಿಸಿದೆ.

ಗುಜರಾತ್ ಅಹ್ಮದಾಬಾದ್, ಸೂರತ್, ವಡೋದರಾ, ರಾಜ್ ಕೋಟ್ ನಲ್ಲಿ ಫೆಬ್ರವರಿ.28ರವರೆಗೂ ರಾತ್ರಿ ವೇಳೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಾಲ್ಕು ಪ್ರಮುಖ ನಗರಗಳಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೂ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಪಂಕಜ್ ಕುಮಾರ್ ತಿಳಿಸಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿಗೆ ಕೊರೊನಾ ಸೋಂಕು

ದೀಪಾವಳಿ ವಳೇೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕಳೆದ ನವೆಂಬರ್ ತಿಂಗಳಿನಲ್ಲಿ ಗುಜರಾತ್ ಸರ್ಕಾರವು ರಾತ್ರಿ ನಿಷೇಧಾಜ್ಞೆಯನ್ನು ಜಾರಿಗೊಳಸಿತ್ತು. ಜನವರಿ.31ರವರೆಗೂ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ತದನಂತರದಲ್ಲಿ ನಿಷೇಧಾಜ್ಞೆ ಸಮಯವನ್ನು ಕಡಿತಗೊಳಿಸಲಾಗಿತ್ತು. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೂ ಕರ್ಫ್ಯೂ ಜಾರಿಯಲ್ಲಿರಲಿದೆ.

ಗುಜರಾತ್ ಸಿಎಂಗೆ ಕೊವಿಡ್-19 ಸೋಂಕು:

ಗುಜರಾತ್ ಸಿಎಂ ವಿಜಯ್ ರೂಪಾನಿ ಅವರಿಗೂ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಅವರನ್ನು ಅಹ್ಮದಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದಲ್ಲಿ 265244 ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೂ 259104 ಸೋಂಕಿತರು ಗುಣಮುಖರಾಗಿದ್ದಾರೆ. ಮಹಾಮಾರಿಗೆ ರಾಜ್ಯದಲ್ಲಿ 1739 ಜನರು ಪ್ರಾಣ ಬಿಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
Night Curfew Extended In 4 Gujarat Major Cities Till February 28.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X