• search
  • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ಸೋಂಕು ಹೆಚ್ಚಳ:ಗುಜರಾತ್‌ನ 4 ನಗರಗಳಲ್ಲಿ ರಾತ್ರಿ ಕರ್ಫ್ಯೂ ವಿಸ್ತರಣೆ

|

ಅಹಮದಾಬಾದ್,ಫೆಬ್ರವರಿ 27: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್‌ನ 4 ನಗರಗಳಲ್ಲಿ ರಾತ್ರಿ ಕರ್ಫ್ಯೂವನ್ನು ವಿಸ್ತರಿಸಲಾಗಿದೆ.

ರಾತ್ರಿ ಕರ್ಫ್ಯೂವನ್ನು 15 ದಿನಗಳ ಕಾಲ ವಿಸ್ತರಿಸಲಾಗಿದೆ,ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ನಿಟ್ಟಿನಲ್ಲಿ ಲಸಿಕೆ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸಲು ನಿರ್ಧರಿಸಲಾಗಿದೆ, ಗುಜರಾತ್‌ನಲ್ಲಿ ಈವರೆಗೆ 2,69,031 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ 2,62,487 ಸೋಂಕಿತರು ಗುಣಮುಖರಾಗಿದ್ದಾರೆ. ಶುಕ್ರವಾರ 460 ಪ್ರಕರಣಗಳು ವರದಿಯಾಗಿದ್ದವು.

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ನೇತೃತ್ವದಲ್ಲಿ ನಡೆಸ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಅಹಮದಾಬಾದ್,ವಡೋದರ,ಸೂರತ್,ರಾಜ್‌ಕೋರ್ಟ್‌ನಲ್ಲಿ ಜಾರಿಯಲ್ಲಿದ್ದ ರಾತ್ರಿ ಕರ್ಫ್ಯೂಫೆಬ್ರವರಿ 28 ರಂದು ಕೊನೆಗೊಳ್ಳಬೇಕಿತ್ತು, ಇದೀಗ 15 ದಿನಗಳ ಕಾಲ ವಿಸ್ತರಿಸಲಾಗಿದೆ.

ಕಳೆದ ನಾಲ್ಕುದಿನದಿಂದ ಪುಣೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಪ್ರತಿ ನಿತ್ಯ ಒಂದು ಸಾವಿರಕ್ಕಿಂತಲೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ಪಂಜಾಬ್‌ನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು,ನಿತ್ಯ 500ಕ್ಕಿಂತಲೂ ಅಧಿಕ ಪ್ರಕರಣಗಳು ಕಂಡುಬರುತ್ತಿವೆ. ಶುಕ್ರವಾರ 622 ಪ್ರಕರಣಗಳು ಪತ್ತೆಯಾಗಿದ್ದವು.

ದೇಶದ ಕೆಲ ರಾಜ್ಯಗಳಲ್ಲಿನ ಮಾರಕ ಕೊರೊನಾ ವೈರಸ್ ಆರ್ಭಟ ಮುಂದುವರೆದಿದ್ದು, ದೇಶದ ಒಟ್ಟಾರೆ ಸೋಂಕಿತರ ಪೈಕಿ ಕೇವಲ 6 ರಾಜ್ಯಗಳಲ್ಲಿ ಶೇ.86ರಷ್ಟು ಸೋಂಕಿತರು ಇದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಕೇಂದ್ರ ಆರೋಗ್ಯ ಇಲಾಖೆ ನೀಡಿದೆ. ಇದೇ ಕಾರಣಕ್ಕಾಗಿ ಇಂದು ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ಏರ್ಪಡಿಸಲಾಗಿದೆ.

ದೇಶದಲ್ಲಿನ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊವಿಡ್ ಹೊಸ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು ಇದೇ ಕಾರಣಕ್ಕೆ ಕ್ಯಾಬಿನೆಟ್ ಕಾರ್ಯದರ್ಶಿಗಳ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಲಾಗುತ್ತಿದೆ. ದೇಶದಲ್ಲಿ ದಾಖಲಾಗುತ್ತಿರುವ ಹೊಸ ಪ್ರಕರಣಗಳ ಪೈಕಿ ದೇಶದ ಆರು ರಾಜ್ಯಗಳಲ್ಲಿ ಮಾತ್ರವೇ ಶೇಕಡಾ 85.75 ರಷ್ಟು ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

English summary
In view of the recent spike in coronavirus cases, the Gujarat government has decided to extend the night curfew in four major cities of the state, including Ahmedabad, by another 15 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X