ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಅಭ್ಯರ್ಥಿ ಪಟ್ಟಿ ಪ್ರಕಟ: ಬಿಜೆಪಿ ಭೀಷ್ಮ ಅಡ್ವಾಣಿಗೆ ಟಿಕೆಟ್ ಇಲ್ಲ

|
Google Oneindia Kannada News

ಗಾಂಧಿನಗರ, ಮಾರ್ಚ್‌ 21: ಲೋಕಸಭಾ ಚುನಾವಣೆ 2019ಕ್ಕೆ ಬಿಜೆಪಿಯು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅಚ್ಚರಿ ಎಂಬಂತೆ ಬಿಜೆಪಿಯ ಕಟ್ಟಾಳು ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಟಿಕೆಟ್ ನೀಡಲಾಗಿಲ್ಲ.

ಮಾಜಿ ಬಿಜೆಪಿ ರಾಷ್ಟ್ರಾಧ್ಯಕ್ಷ ಲಾಲ್ ಕೃಷ್ಣ ಅಡ್ವಾಣಿ ಅವರು ಗುಜರಾತ್‌ನ ಗಾಂಧಿನಗರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದರು, ಆದರೆ ಈ ಬಾರಿ ಇದೇ ಕ್ಷೇತ್ರದಿಂದ ಈಗಿನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸ್ಪರ್ಧಿಸುತ್ತಿದ್ದಾರೆ.

ಲೋಕಸಭೆ ಚುನಾವಣೆ 2019: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿಲೋಕಸಭೆ ಚುನಾವಣೆ 2019: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿ

ಗಾಂಧಿ ನಗರ ಕ್ಷೇತ್ರದಿಂದ ಲಾಲ್ ಕೃಷ್ಣ ಅಡ್ವಾಣಿ ಅವರು ಈವರೆಗೆ ಆರು ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಕಳೆದ ನಾಲ್ಕು ಸಾರ್ವತ್ರಿಕ ಚುನಾವಣೆಯಲ್ಲಿ ಸತತವಾಗಿ ಜಯ ಗಳಿಸಿದ್ದರು. ಕಳೆದ ಚುನಾವಣೆಯಲ್ಲಿಯೂ ಸಹ ಅವರು ಇದೇ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

No election ticket to BJP elder leader Lal Krishna Advani

ಆದರೆ ಈ ಬಾರಿ ಗಾಂಧಿನಗರ ಕ್ಷೇತ್ರದಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸ್ಪರ್ಧಿಸುತ್ತಿದ್ದಾರೆ. ಅಮಿತ್ ಶಾ ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಮುಂಚೆ ಅವರು ಐದು ವಿಧಾನಸಭೆ ಚುನಾವಣೆಗಳನ್ನು ಎದುರಿಸಿ ಗೆದ್ದಿದ್ದರು. ನಾಲ್ಕು ಬಾರಿ ಸರ್ಕೇಜ್‌ನಿಂದ ಹಾಗೂ ಒಂದು ಬಾರಿ ನಾರನ್ ಪುರದಿಂದ ಅವರು ಗುಜರಾತ್ ವಿಧಾನಸಭೆಗೆ ಆಯ್ಕೆಯಾಗಿದ್ದರು.

ಲೋಕಸಭಾ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಲೋಕಸಭಾ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ಅಡ್ವಾಣಿ ಅವರನ್ನು ಬಿಜೆಪಿಯ ಮೋದಿ-ಶಾ ಜೋಡಿ ಮೂಲೆಗುಂಪು ಮಾಡಿದೆ ಎಂಬ ಆರೋಪ ಇದೆ. ಅದಕ್ಕೆ ಪೂರಕವೆಂಬಂತೆ ಈಗ ಅಡ್ವಾಣಿ ಅವರಿಗೆ ಅವರದ್ದೇ ಕ್ಷೇತ್ರದಿಂದ ಟಿಕೆಟ್ ನೀಡಲಾಗಿಲ್ಲ. ಅಡ್ವಾಣಿ ಅವರಿಗೆ 91 ವರ್ಷ ವಯಸ್ಸಾಗಿದ್ದು, ಅವರಿಗೆ ಟಿಕೆಟ್ ತಪ್ಪಲು ಅವರ ವಯಸ್ಸೇ ಪ್ರಮುಖ ಕಾರಣ ಎನ್ನಲಾಗುತ್ತಿದೆ.

English summary
BJP elder leader Lal Krishna Advani not contesting to election this time. BJP highcommand not given ticket to him. Amit Shah contesting from Advani's constituency Gandhi Nagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X