ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೈ ಪಕ್ಷಕ್ಕೆ ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಸ್ವಾಗತಿಸಿದ ರಾಹುಲ್

|
Google Oneindia Kannada News

ಅಹಮದಾಬಾದ್, ಮಾರ್ಚ್ 12: ಗುಜರಾತಿನಲ್ಲಿ ಪಟೇಲರ ಮೀಸಲಾತಿ ವಿಷಯವಾಗಿ ಕಳೆದ ಕೆಲ ವರ್ಷಗಳಿಂದ ಭಾರಿ ಸಂಚಲನ ಮೂಡಿಸಿರುವ ಪಾಟೀದಾರ್ ಮುಖಂಡ ಹಾರ್ದಿಕ್ ಪಟೇಲ್ ಅವರು ಮಂಗಳವಾರದಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಂಗ್ರೆಸ್ಸಿನ ಉತ್ತರೀಯವನ್ನು ಹಾರ್ದಿಕ್ ಕೊರಳಿಗೆ ಹಾಕಿ, ಪಕ್ಷಕ್ಕೆ ಸ್ವಾಗತಿಸಿದರು.

ಅಹಮದಾಬಾದಿನಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಯಿತು. ನಂತರ ಗಾಂಧಿನಗರದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶದಲ್ಲಿ 25 ವರ್ಷ ವಯಸ್ಸಿನ ಹಾರ್ದಿಕ್ ಅವರು ಕಾಂಗ್ರೆಸ್ಸಿಗೆ ಸೇರ್ಪಡೆಗೊಂಡರು.

ಗುಜರಾತಿನ ನವತಾರೆ ಹಾರ್ದಿಕ್ ಪಟೇಲ್ಗುಜರಾತಿನ ನವತಾರೆ ಹಾರ್ದಿಕ್ ಪಟೇಲ್

ರೈತರು ಹಾಗೂ ಯುವ ಸಮುದಾಯದ ಏಳಿಗೆಗಾಗಿ ನಾನು ಶ್ರಮಿಸುವೆ. ಜಾಮ್ ನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆ ಇದೆ. ಈ ಬಗ್ಗೆ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಹಾರ್ದಿಕ್ ಪಟೇಲ್ ಅವರು ಭಾನುವಾರದಂದು ಟ್ವೀಟ್ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

Patidar leader Hardik Patel joins Congress, may contest Lok Sabha polls

ಸದ್ಯ ಜಾಮ್ ನಗರ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಪೂನಮ್ ಬೆನ್ ಮಾದಮ್ ಅವರು ಹಾಲಿ ಸಂಸದೆಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 182 ಸ್ಥಾನಗಳ ಪೈಕಿ 81 ಸ್ಥಾನ ಗೆದ್ದು ಬಿಜೆಪಿಗೆ ಎಚ್ಚರಿಕೆ ನೀಡಿದ್ದ ಕಾಂಗ್ರೆಸ್ ಈ ಬಾರಿ ಲೋಕಸಭೆ ಚುನಾವಣೆಯಲ್ಲೂ ಅಚ್ಚರಿಯ ಫಲಿತಾಂಶ ನೀಡುವ ಉತ್ಸಾಹದಲ್ಲಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 26 ಸ್ಥಾನಗಳು ಬಿಜೆಪಿ ಪಾಲಾಗಿತ್ತು.

English summary
Firebrand Patidar leader Hardik Patel joined the Congress party on Tuesday in the presence of party president Rahul Gandhi. He is likely to be fielded from the Jamnagar Lok Sabha seat in Gujarat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X