ತೌಕ್ತೆ ಚಂಡಮಾರುತ: ವೈಮಾನಿಕ ಸಮೀಕ್ಷೆ ನಡೆಸಲು ಗುಜರಾತ್ಗೆ ಪ್ರಧಾನಿ ಮೋದಿ ಆಗಮನ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಗುಜರಾತ್ನ ಭಾವ್ನಗರಕ್ಕೆ ಆಗಮಿಸಿದ್ದು ತೌಕ್ತೆ ಚಂಡಮಾರುತದಿಂದ ಉಂಟಾದ ಹಾನಿಯನ್ನು ವೀಕ್ಷಿಸಲಿದ್ದಾರೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಪ್ರಧಾನಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸುವ ಬಗ್ಗೆ ಮಾಹಿತಿಯನ್ನು ನೀಡಿದ್ದರು. ಅಮ್ರೇಲಿ, ಗಿರ್ ಸೋಮನಾಥ್, ಭಾವ್ನಗರ ಜಿಲ್ಲೆಗಳಲ್ಲಿ ತೌಕ್ತೆ ಚಂಡಮಾರುತದಿಂದ ಉಂಟಾಗಿರುವ ಹಾನಿಯನ್ನು ವೈಮಾನಿಕ ಸಮೀಕ್ಷೆಯಲ್ಲಿ ಪ್ರಧಾನಿ ವೀಕ್ಷಿಸಲಿದ್ದಾರೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಇನ್ನು ಇದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ದಿಯುಗೆ ತೆರಳಲಿದ್ದು ಅಲ್ಲಿಯೂ ಚಂಡಮಾರುತದಿಂದ ಉಂಟಾಗಿರುವ ಹಾನಿಯನ್ನು ವೀಕ್ಷಿಸಲಿದ್ದಾರೆ. ಮಂಗಳವಾರ ಮುಖ್ಯಮಂತ್ರಿಗಳ ಕಛೇರಿ ನೀಡಿದ ಮಾಹಿತಿಯ ಪ್ರಕಾರ ವೈಮಾನಿಕ ಸಮೀಕ್ಷೆಯ ಬಳಿಕ ಪ್ರಧಾನಿ ಅಹಮದಾಬಾದ್ನಲ್ಲಿ ಸಮೀಕ್ಷೆಯ ಸಭೆಯನ್ನು ನಡೆಸಲಿದ್ದಾರೆ.

"ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್ಗೆ ಭೇಟಿ ನೀಡಲಿದ್ದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾಗಿರುವ ಅಮ್ರೇಲಿ, ಗಿರ್ ಸೋಮ್ನಾಥ್, ಭಾವ್ನಗರ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಿದ್ದಾರೆ. ನಂತರ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ರಾಜ್ಯದ ಉನ್ನತ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ" ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿತ್ತು.
-
PM Modi: ಆದಿಚುಂಚನಗಿರಿ ಮಠಕ್ಕೆ 'ನಮೋ' ಭೇಟಿ: ಕರ್ನಾಟಕ ಸಂಸ್ಕೃತಿ, ಮಠದ ಸೇವೆಗೆ ಮೆಚ್ಚುಗೆ -
Narendra Modi: ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ 18 ಅಂಶ: ನರೇಂದ್ರ ಮೋದಿಗೆ ಸಿದ್ದರಾಮಯ್ಯ ಪತ್ರ -
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications