• search
  • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತೌಕ್ತೆ ಚಂಡಮಾರುತ: ವೈಮಾನಿಕ ಸಮೀಕ್ಷೆ ನಡೆಸಲು ಗುಜರಾತ್‌ಗೆ ಪ್ರಧಾನಿ ಮೋದಿ ಆಗಮನ

|
Google Oneindia Kannada News

ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಗುಜರಾತ್‌ನ ಭಾವ್‌ನಗರಕ್ಕೆ ಆಗಮಿಸಿದ್ದು ತೌಕ್ತೆ ಚಂಡಮಾರುತದಿಂದ ಉಂಟಾದ ಹಾನಿಯನ್ನು ವೀಕ್ಷಿಸಲಿದ್ದಾರೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಪ್ರಧಾನಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸುವ ಬಗ್ಗೆ ಮಾಹಿತಿಯನ್ನು ನೀಡಿದ್ದರು. ಅಮ್ರೇಲಿ, ಗಿರ್ ಸೋಮನಾಥ್, ಭಾವ್‌ನಗರ ಜಿಲ್ಲೆಗಳಲ್ಲಿ ತೌಕ್ತೆ ಚಂಡಮಾರುತದಿಂದ ಉಂಟಾಗಿರುವ ಹಾನಿಯನ್ನು ವೈಮಾನಿಕ ಸಮೀಕ್ಷೆಯಲ್ಲಿ ಪ್ರಧಾನಿ ವೀಕ್ಷಿಸಲಿದ್ದಾರೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ತೌಕ್ತೆ ಚಂಡಮಾರುತ: ಹಲವು ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆತೌಕ್ತೆ ಚಂಡಮಾರುತ: ಹಲವು ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಇನ್ನು ಇದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ದಿಯುಗೆ ತೆರಳಲಿದ್ದು ಅಲ್ಲಿಯೂ ಚಂಡಮಾರುತದಿಂದ ಉಂಟಾಗಿರುವ ಹಾನಿಯನ್ನು ವೀಕ್ಷಿಸಲಿದ್ದಾರೆ. ಮಂಗಳವಾರ ಮುಖ್ಯಮಂತ್ರಿಗಳ ಕಛೇರಿ ನೀಡಿದ ಮಾಹಿತಿಯ ಪ್ರಕಾರ ವೈಮಾನಿಕ ಸಮೀಕ್ಷೆಯ ಬಳಿಕ ಪ್ರಧಾನಿ ಅಹಮದಾಬಾದ್‌ನಲ್ಲಿ ಸಮೀಕ್ಷೆಯ ಸಭೆಯನ್ನು ನಡೆಸಲಿದ್ದಾರೆ.

ತೌಕ್ತೆ; ಭಟ್ಕಳ, ಅಂಕೋಲಾದಲ್ಲಿ ಹಾನಿ ಪರಿಶೀಲಿಸಿದ ಸಚಿವರು ತೌಕ್ತೆ; ಭಟ್ಕಳ, ಅಂಕೋಲಾದಲ್ಲಿ ಹಾನಿ ಪರಿಶೀಲಿಸಿದ ಸಚಿವರು

"ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್‌ಗೆ ಭೇಟಿ ನೀಡಲಿದ್ದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾಗಿರುವ ಅಮ್ರೇಲಿ, ಗಿರ್ ಸೋಮ್‌ನಾಥ್, ಭಾವ್‌ನಗರ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಿದ್ದಾರೆ. ನಂತರ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ರಾಜ್ಯದ ಉನ್ನತ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ" ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿತ್ತು.

English summary
PM Narendra Modi reaches Gujarat to Conducts Aerial Survey In Gujarat And Diu to review damaged by Cyclone Tauktae.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X