• search
  • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾನಹಾನಿ ಪ್ರಕರಣ: ಸೂರತ್ ನ್ಯಾಯಾಲಯದ ಮುಂದೆ ರಾಹುಲ್ ಗಾಂಧಿ ಹಾಜರು

|
Google Oneindia Kannada News

ಸೂರತ್, ಜೂನ್ 24: ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯದ ಮುಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಜರಾಗಿದ್ದಾರೆ.

ಎಲ್ಲ ಕಳ್ಳರ ಹೆಸರೂ ಮೋದಿ ಎಂಬ ಸರ್‌ನೇಮ್ ಏಕೆ ಹೊಂದಿದೆ?' ಎಂಬ ಹೇಳಿಕೆಗಾಗಿ ಕ್ರಿಮಿನಲ್ ಮಾನಹಾನಿ ಪ್ರಕರಣ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಗುಜರಾತ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಗುರುವಾರ ಹಾಜರಾದರು.

ಕೊರೊನಾ ನಿರ್ವಹಣೆ ಕುರಿತು ಶ್ವೇತಪತ್ರ ಹೊರಡಿಸಿದ ರಾಹುಲ್ ಗಾಂಧಿಕೊರೊನಾ ನಿರ್ವಹಣೆ ಕುರಿತು ಶ್ವೇತಪತ್ರ ಹೊರಡಿಸಿದ ರಾಹುಲ್ ಗಾಂಧಿ

ಸೂರತ್-ಪೂರ್ವ ಕ್ಷೇತ್ರದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಎಂಬುವವರು ದೂರು ದಾಖಲಿಸಿದ್ದರು. 2019ರ ಅಕ್ಟೋಬರ್‌ನಲ್ಲಿ ಕೋರ್ಟ್ ಎದುರು ಹಾಜರಾಗಿದ್ದ ರಾಹುಲ್ ಗಾಂಧಿ, ಆರೋಪಗಳನ್ನು ಒಪ್ಪಿಕೊಳ್ಳುತ್ತೀರಾ ಎಂದು ಪ್ರಶ್ನಿಸಿದಾಗ, ತಾವು ತಪ್ಪಿತಸ್ಥ ಅಲ್ಲ ಎಂದು ಹೇಳಿದ್ದರು.

2019ರ ಅಕ್ಟೋಬರ್‌ನಲ್ಲಿ ಈ ಪ್ರಕರಣ ಕುರಿತು ನ್ಯಾಯಾಲಯಕ್ಕೆ ಹಾಜರಾಗಿದ್ದ ರಾಹುಲ್ ಗಾಂಧಿ'' ನನ್ನ ಹೇಳಿಕೆ ಮೂಲಕ ತಪ್ಪು ಮಾಡಿದ್ದೇನೆ ಎಂದುಕೊಂಡಿಲ್ಲ'' ಎಂದು ಹೇಳಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಅಂತಿಮ ಹೇಳಿಕೆ ದಾಖಲಿಸಲು ಜೂನ್ 24ರಂದು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ಸೂರತ್ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಎನ್ ದವೆ ಸೂಚಿಸಿದ್ದರು.

2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿ ಅವರು, ವಂಚನೆ ಆರೋಪದಲ್ಲಿ ದೇಶದಿಂದ ಪರಾರಿಯಾಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ, ನರೇಂದ್ರ ಮೋದಿ.. ಹೀಗೆ ಎಲ್ಲ ಕಳ್ಳರ ಹೆಸರಿನ ಸರ್‌ನೇಮ್‌ನಲ್ಲಿ ಮೋದಿ ಎಂದು ಸಾಮಾನ್ಯವಾಗಿ ಇರುವುದು ಏಕೆ? ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಲು ಹೇಳಿದ್ದರು.

English summary
Congress leader Rahul Gandhi arrived today at a magistrate's court in Gujarat's Surat to record his statement in a criminal defamation suit filed by a BJP MLA over his comments on the "Modi surname".
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X