Breaking: ಗುಜರಾತ್ ಗಲಭೆ 2002: ಮೋದಿಗೆ ಕ್ಲೀನ್ ಚಿಟ್, ಜಫ್ರಿ ಅರ್ಜಿ ವಜಾ
ನವದೆಹಲಿ, ಜೂನ್ 24: 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಶಕಗಳ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ವಿಶೇಷ ತನಿಖಾ ತಂಡವು ಗುಜರಾತ್ ರಾಜ್ಯದ ಅಂದಿನ ಸಿಎಂ ಆಗಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ 62 ಜನರಿಗೆ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯ ಮೇಲೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಕಿಯಾ ಝಫ್ರಿ ಅರ್ಜಿ ವಿಚಾರಣೆ ನಡೆಸಿದ ಅಹಮದಾಬಾದ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಬಿ. ಜೆ. ಗನತ್ರ ತೀರ್ಪುನೀಡಿದ್ದರು. ಗುಜರಾತ್ ಗಲಭೆ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ನೇಮಿಸಿದ್ದ ವಿಶೇಷ ತನಿಖಾ ತಂಡ (ಎಸ್ಐಟಿ) ಈಗಾಗಲೇ ಮೋದಿ ಸೇರಿದಂತೆ ಪ್ರಕರಣದ 57 ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿ, ವರದಿ ನೀಡಿತ್ತು.

35 ಮಂದಿ ಸಜೀವ ದಹನ: ಫೆಬ್ರವರಿ 28, 2002ರಲ್ಲಿ ಗುಜರಾತ್‌ನ ಗುಲ್ಬರ್ಗದಲ್ಲಿ ನಡೆದ ಹತ್ಯಾಕಾಂಡದಲ್ಲಿ ಜಾಕಿಯಾ ಜಫ್ರಿ ಪತಿ ಹಾಗೂ ಮಾಜಿ ಕಾಂಗ್ರೆಸ್ ಸಂಸದ ಇಶಾನ್ ಜಫ್ರಿ ಸೇರಿದಂತೆ 35 ಮಂದಿ ಸಜೀವ ದಹನವಾಗಿದ್ದರು.
ಗುಲ್ಬರ್ಗ್ ಹೌಸಿಂಗ್ ಸೊಸೈಟಿ ಗಲಭೆ ಹಾಗೂ ಎಹ್ಸಾನ್ ಕೊಲೆ ಪ್ರಕರಣ ಕುರಿತಂತೆ ಸಿಬಿಐನ ಮಾಜಿ ನಿರ್ದೇಶಕ ಆರ್. ಕೆ. ರಾಘವನ್ ನೇತೃತ್ವದ ವಿಶೇಷ ತನಿಖಾ ತಂಡ ತನಿಖೆ ನಡೆಸಿತ್ತು. 2011ರ ಸೆಪ್ಟೆಂಬರ್ 12ರಂದು ಸುಪ್ರಿಂ ಕೋರ್ಟ್‌ನ ಮೂವರು ಸದಸ್ಯರ ವಿಸ್ತೃತ ನ್ಯಾಯಪೀಠ, ವಿಶೇಷ ತನಿಖಾ ತಂಡದ ಅಂತಿಮ ವರದಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಸ್ತಾಂತರಿಸುವಂತೆ ಆದೇಶ ನೀಡಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ್ದ ಅಹಮದಾಬಾದ್ ವಿಚಾರಣಾ ನ್ಯಾಯಾಲಯ 2012ರ ಮಾರ್ಚ್ 13ರಂದು ತನಿಖಾ ತಂಡ ಸಲ್ಲಿಸಿದ್ದ ಪರಿಸಮಾಪ್ತಿ ವರದಿಯನ್ನು ಎತ್ತಿ ಹಿಡಿದಿತ್ತು.
Recommended Video
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications