ಗುಜರಾತ್ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್‌ಗೆ ಸಿಹಿಸುದ್ದಿ ಕೊಟ್ಟ ಸುಪ್ರೀಂಕೋರ್ಟ್
ನವದೆಹಲಿ, ಏಪ್ರಿಲ್ 12: 2015 ರ ಪಾಟೀದಾರ್ ಚಳವಳಿಯ ಸಮಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಪರಾಧಿ ಎನಿಸಿರುವ ಪಾಟೀದಾರ್ ಸಮುದಾಯದ ನಾಯಕ, ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್‌ಗೆ ಸುಪ್ರೀಂಕೋರ್ಟ್ ನಿಂದ ಮಂಗಳವಾರ ಶುಭ ಸುದ್ದಿ ಸಿಕ್ಕಿದೆ. ಮೆಹ್ಸಾನಾ ದಂಗೆ ಪ್ರಕರಣದಲ್ಲಿ ಗುಜರಾತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಹಾರ್ದಿಕ್ ಪಟೇಲ್ ದೋಷಿ ಎಂದು ನೀಡಲಾಗಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ
ಗಲಭೆ ಮತ್ತು ಬೆಂಕಿ ಹಚ್ಚಿದ ಪ್ರಕರಣದಲ್ಲಿ ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಶಿಕ್ಷೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಸ್ ಎ ನಜೀರ್ ಮತ್ತು ವಿಕ್ರಮ್ ನಾಥ್ ಅವರ ಪೀಠವು, ಹೈಕೋರ್ಟ್ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂಕ್ತವಾದ ಪ್ರಕರಣವಾಗಿದೆ ಎಂದು ಹೇಳಿದೆ.
ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಗುಜರಾತಿನ ಜಾಮ್ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಳಿಯಬೇಕಿದ್ದ ಹಾರ್ದಿಕ್ ಪಟೇಲ್ ಅವರಿಗೆ ನ್ಯಾಯಾಲಯವು ತಡೆಯೊಡ್ಡಿತ್ತು. ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತಿನ ವಿಸ್ನಗರ್ ನ್ಯಾಯಾಲಯವು ಹಾರ್ದಿಕ್ ಪಟೇಲ್ ಅವರನ್ನು ದೋಷಿ ಎಂದು ಪರಿಗಣಿಸಿ, 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶಕ್ಕೆ ತಡೆ ನೀಡುವಂತೆ ಕೋರಿ ಗುಜರಾತ್ ಹೈಕೋರ್ಟಿನಲ್ಲಿ ಹಾರ್ದಿಕ್ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಮೇಲ್ಮನವಿ ತಿರಸ್ಕೃತಗೊಂಡಿತ್ತು. ಜನಪ್ರತಿನಿಧಿಗಳ ಕಾಯ್ದೆ 1951ರ ಅನ್ವಯ ಅಪರಾಧಿ ಎನಿಸಿರುವುದರಿಂದ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ

ಆದರೆ, ಹಿರಿಯ ವಕೀಲ ಮಣಿಂದರ್ ಸಿಂಗ್ ಅವರು ಪಟೇಲ್ ಪರ ವಾದಿಸಿ, ನನ್ನ ಕಕ್ಷಿದಾರರನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿಸದಿರುವುದು ಅವರ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳಿದರು.
ಹಾರ್ದಿಕ್ ಪಟೇಲ್ 2017 ರ ಡಿಸೆಂಬರ್ ನಲ್ಲಿ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲೇ ಸ್ಪರ್ಧಿಸಬೇಕಿತ್ತು. ಆದರೆ ಚುನಾವಣೆಗೆ ಸ್ಪರ್ಧಿಸಲು ಬೇಕಿದ್ದ ಕನಿಷ್ಠ ವಯೋಮಿತಿ(25 ವರ್ಷ)ಯನ್ನು ಅವರು ಮೀರಿರದ ಕಾರಣ ಅವರು ಚುನಾವನೆಗೆ ಸ್ಪರ್ಧಿಸಿರಲಿಲ್ಲ.

2015 ರಲ್ಲಿ ನಡೆದ ಪಟೇಲ್ ಸಮುದಾಯದ ಮೀಸಲಾತಿ ಹೋರಾಟದ ಸಂದರ್ಭದಲ್ಲಿ ಹಲವು ಹಿಂಸಾಚಾರ ಪ್ರಕರಣಗಳು ನಡೆದಿದ್ದವು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಋಷಿಕೇಶ್ ಪಟೇಲ್ ಅವರ ವಿಸ್ನಗರ ಕಚೇರಿಯನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಅವರನ್ನು ದೋಷಿ ಎಂದು ನ್ಯಾಯಾಲಯ ಪರಿಗಣಿಸಿತ್ತು.
2019 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಗುಜರಾತ್ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಪಟೇಲ್ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಪಟೇಲ್ ಅವರು ಜುಲೈ 25, 2018 ರಂದು ವಿಸ್ನಗರದ ಮೆಹ್ಸಾನಾ ಸೆಷನ್ಸ್ ನ್ಯಾಯಾಲಯವು ನೀಡಿದ ಶಿಕ್ಷೆಯ ಆದೇಶವನ್ನು ಅಮಾನತುಗೊಳಿಸಲು ನಿರ್ದೇಶನವನ್ನು ಕೋರಿದ್ದರು. ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಮಾಡಿದ ಮನವಿಯನ್ನು ತಿರಸ್ಕರಿಸಿ ಮಾರ್ಚ್ 29ರ ಹೈಕೋರ್ಟ್‌ನ ಆದೇಶದ ಸಿಂಧುತ್ವವನ್ನು ಅವರು ಪ್ರಶ್ನಿಸಿದ್ದರು.
"ವಾಸ್ತವತೆಗಳು ಮತ್ತು ಸಂದರ್ಭಗಳನ್ನು ಪರಿಗಣಿಸಿ, ಉಚ್ಚ ನ್ಯಾಯಾಲಯವು ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂಕ್ತವಾದ ಪ್ರಕರಣ ಎಂದು ನಾವು ಭಾವಿಸುತ್ತೇವೆ. ಈ ಮೂಲಕ ಮೇಲ್ಮನವಿಗಳು ಮುಗಿಯುವವರೆಗೆ ಶಿಕ್ಷೆಗೆ ತಡೆ ನೀಡಲಾಗಿದೆ. ಅದರಂತೆ ನಿರ್ಧರಿಸಿದೆ." ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications