ಗುಜರಾತ್‌ನಲ್ಲಿ ಕೊರೊನಾ ಸೋಂಕಿತ ಹಿಂದೂ ಹಾಗೂ ಮುಸ್ಲಿಮರಿಗೆ ಪ್ರತ್ಯೇಕ ವಾರ್ಡ್ ನಿಜವೇ?
ಅಹಮದಾಬಾದ್, ಏಪ್ರಿಲ್ 17: ಗುಜರಾತ್ ನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಕೊರೊನಾ ಸೋಂಕಿತ ಹಿಂದೂ ಹಾಗೂ ಮುಸ್ಲಿಮರಿಗೆ ಪ್ರತ್ಯೇಕ ವಾರ್ಡ್ ಮಾಡಲಾಗಿದೆ ಎನ್ನುವ ವಿಚಾರವನ್ನು ಆರೋಗ್ಯ ಇಲಾಖೆ ತಳ್ಳಿ ಹಾಕಿದೆ.
ಗುಜರಾತ್ ಆಸ್ಪತ್ರೆಯಲ್ಲಿ ಧರ್ಮಬೇಧ ಅನುಸರಿಸಲಾಗುತ್ತಿದೆ, ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಧರ್ಮದ ಆಧಾರದಲ್ಲಿ ಕೊರೊನಾ ಸೋಂಕಿತರನ್ನು ಬೇರ್ಪಡಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.
ಸಾಮಾನ್ಯವಾಗಿ ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ವಾರ್ಡ್ ಇರುವುದು ನೋಡಿದ್ದೇವೆ ಆದರೆ ಮೊದಲ ಬಾರಿಗೆ ಧರ್ಮದ ಆಧಾರದ ಮೇಲೆ ವಾರ್ಡ್ ಪ್ರತ್ಯೇಕಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಿತ್ತು.

ನರೇಂದ್ರ ಮೋದಿ 2014ರಲ್ಲಿ ಪ್ರಧಾನಿಯಾಗುವ ಮುನ್ನ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದರು. ಹಿಂದೂ ಮುಸ್ಲಿಂ ವಾರ್ಡ್ ವಿಂಗಡಣೆ ಕುರಿತು ಗುಜರಾತ್ ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಜಯಂತಿ ರವಿ ನೀಡಿರುವ ಮಾಹಿತಿ ಪ್ರಕಾರ ಈ ಸುದ್ದಿ ಶುದ್ಧ ಸುಳ್ಳು ಎಂದಿದ್ದಾರೆ.
ಗುಜರಾತ್ ಆರೋಗ್ಯ ಸಚಿವ ನಿತಿನ್ ಪಟೇಲ್ ಇಂತಹ ಯಾವುದೇ ಘಟನೆ ನಡೆದಿಲ್ಲ. ಜನರಿಗೆ ನಮ್ಮ ಕೈಲಾದ ಚಿಕಿತ್ಸೆಯನ್ನು ನಾವು ಒದಗಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಅವರ ವಯಸ್ಸು ಹಾಗೂ ಅವರ ಪರಿಸ್ಥಿತಿ ಆಧಾರದ ಮೇಲೆ ರೋಗಿಗಳನ್ನು ಬೇರೆ ಬೇರೆ ವಾರ್ಡ್‌ಗಳಲ್ಲಿ ಇರಿಸಲಾಗುತ್ತಿದೆ.
ಯಾವುದೇ ಕಾರಣಕ್ಕೂ ಧರ್ಮಬೇಧ ಮಾಡಿಲ್ಲ. ಸಾಕಷ್ಟು ಮಂದಿ ಒಂದೇ ಧರ್ಮದವರಿದ್ದು ಒಂದೇ ವಾರ್ಡ್‌ನಲ್ಲಿ ಇರಲು ಮನವಿ ಮಾಡಿದವರನ್ನು ಇರಲು ಅವಕಾಶ ಮಾಡಿಕೊಡಲಾಗಿದೆ.












Click it and Unblock the Notifications