• search
  • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಬಿಟ್ಟು ಉಳಿದೆಲ್ಲರೂ ಪರೀಕ್ಷೆ ಇಲ್ಲದೆ ಪಾಸ್

|

ಗಾಧಿನಗರ, ಮಾರ್ಚ್ 5: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಹೊರತುಪಡಿಸಿ ಉಳಿದೆಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲು ಗುಜರಾತ್ ಸರ್ಕಾರ ನಿರ್ಧರಿಸಿದೆ.

ಕೊರೊನಾ ವೈರಸ್ ಬಿಕ್ಕಟ್ಟಿನಿಂದಾಗಿ ಈ ವರ್ಷ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲಾ ಶಾಲೆಗಳನ್ನು ಮುಚ್ಚಲು ಮತ್ತು 1ರಿಂದ 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮುಂದಾಗಿದೆ.

ಕೊರೊನಾಭೀತಿ: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡಿಕೆ

ಶಾಲೆಗಳನ್ನು ಮುಚ್ಚಲು ಕೇಳಿದ್ದರಿಂದ 1ರಿಂದ 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ತರಗತಿಯ ವಿದ್ಯಾರ್ಥಿಗಳನ್ನು ಸಾಮೂಹಿಕವಾಗಿ ಪಾಸ್ ಮಾಡಲು ಸಿಎಂ ನಿರ್ಧರಿಸಿದ್ದಾರೆ.

ಮಕ್ಕಳನ್ನು ಸುರಕ್ಷಿತೆಯ ದೃಷ್ಟಿಯಿಂದ ಈ ಕ್ರಮ ಅಗತ್ಯವಾಗಿದೆ' ಎಂದು ಅಶ್ವನಿ ಕುಮಾರ್ ಗಾಂಧಿನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಗುಜರಾತ್‍ನಲ್ಲಿ ಮಾರ್ಚ್ ತಿಂಗಳ ಆರಂಭದಲ್ಲೇ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗಳನ್ನು ಶಿಕ್ಷಣ ಮಂಡಳಿಯು ನಡೆಸಿದೆ. ಆದರೂ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಿಂದ ಶಾಲೆಗಳನ್ನು ಮುಚ್ಚಲಾಗಿತ್ತು.

Live Updates: ಭಾರತದಲ್ಲಿ 562ಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ

ಹೀಗಾಗಿ ಇತರ ತರಗತಿಯ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಸಿಎಂ ಕಚೇರಿಯ ಕಾರ್ಯದರ್ಶಿ ಅಶ್ವನಿ ಕುಮಾರ್ ತಿಳಿಸಿದ್ದಾರೆ.

English summary
All students from class 1 to 9 and 11 to be promoted without examinations in Gujarat, as the schools have been closed in the wake of Coronavirus: Ashwani Kumar, Secretary, State Information and Broadcasting Department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X