ಸಂಜೆ ತೀವ್ರಗೊಳ್ಳಲಿದೆ ತೌಕ್ತೆ ಚಂಡಮಾರುತ; ಗುಜರಾತ್ನಲ್ಲಿ ಲಕ್ಷ ಮಂದಿ ಸ್ಥಳಾಂತರ
ಅಹಮದಾಬಾದ್, ಮೇ 17: ಸೋಮವಾರ ಸಂಜೆ ವೇಳೆಗೆ ಗುಜರಾತ್ ಕರಾವಳಿ ಪ್ರದೇಶದಲ್ಲಿ ತೌಕ್ತೆ ಚಂಡಮಾರುತ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಚಂಡಮಾರುತ ಅಪ್ಪಳಿಸುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುಜರಾತ್ನ ಕರಾವಳಿ ಪ್ರದೇಶಗಳಲ್ಲಿ ವಾಸವಾಗಿರುವ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಭಾನುವಾರ ತಡರಾತ್ರಿಯಿಂದ ಸೋಮವಾರ ಬೆಳಿಗ್ಗೆವರೆಗೂ ಜನರನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಸಲಾಗಿದೆ.
ತೌಕ್ತೆ ಚಂಡಮಾರುತದಿಂದಾಗಿ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೂ ಗುಜರಾತ್ನ 21 ಜಿಲ್ಲೆಗಳಲ್ಲಿ ಮಳೆ ದಾಖಲಾಗಿದೆ. ಸೋಮವಾರ ಸಂಜೆ ವೇಳೆಗೆ ತೌಕ್ತೆ ಚಂಡಮಾರುತ ತೀವ್ರಗೊಳ್ಳಲಿದ್ದು ರಾತ್ರಿ 8 ರಿಂದ 11ರ ನಡುವೆ ರಾಜ್ಯ ಕರಾವಳಿಯನ್ನು ದಾಟಲಿದೆ. ಪೋರ್ ಬಂದರ್ ಹಾಗೂ ಭಾವನಗರ ಜಿಲ್ಲೆಯ ಮಹುವಾ ನಡುವೆ ರಾತ್ರಿ ಹಾದುಹೋಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಸಂಜೆ ಸೌರಾಷ್ಟ್ರ ಹಾಗೂ ಗುಜರಾತ್ನ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಕೆ ರವಾನಿಸಿದೆ. ಹೀಗಾಗಿ ಜನರನ್ನು ಸ್ಥಳಾಂತರ ಮಾಡಲಾಗಿದೆ.

ಅರಬ್ಬೀ ಸಮುದ್ರದ ಈಶಾನ್ಯ ಭಾಗದಲ್ಲಿ ಮತ್ತು ದಕ್ಷಿಣ ಗುಜರಾತ್ ಹಾಗೂ ದಾಮನ್ ದಿಯು ಕರಾವಳಿ ಉದ್ದಕ್ಕೂ ಮೇ 17ರಂದು ಬೆಳಗ್ಗೆ ಚಂಡಮಾರುತ ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಿಂದ 60 ಕಿ.ಮೀ. ವೇಗದಲ್ಲಿ ಸಾಗುವ ಸಾಧ್ಯತೆಯಿದೆ ಎಂದು ಈ ಹಿಂದೆ ಹವಾಮಾನ ಇಲಾಖೆ ತಿಳಿಸಿತ್ತು.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ












Click it and Unblock the Notifications