ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಚಾರಿ ನಿಯಮ ಉಲ್ಲಂಘನೆ; ರಾಜ್ಯ ಸರ್ಕಾರದಿಂದ ದಂಡ ಮೊತ್ತ ಕಡಿತ

|
Google Oneindia Kannada News

Recommended Video

ಗುಜರಾತ್ ಮಾದರಯಲ್ಲೇ ರಾಜ್ಯದಲ್ಲೂ ಸಂಚಾರಿ ನಿಯಮ ಉಲ್ಲಂಘನೆಯಲ್ಲಿ ಬದಲಾವಣೆ ? | Oneindia Kannada

ಅಹಮದಾಬಾದ್, ಸೆಪ್ಟೆಂಬರ್ 11 : ರಸ್ತೆ ಬದಿಯ ಟೀ ಅಂಗಡಿಯಿಂದ ಸಾಮಾಜಿಕ ತಾಲತಾಣದ ತನಕ ಎಲ್ಲಾ ಕಡೆ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019ರ ಬಗ್ಗೆ ಚರ್ಚೆ ನಡೆಯುತ್ತಿದೆ. ದುಬಾರಿ ದಂಡ ಶುಲ್ಕದ ಬಗ್ಗೆ ಜನರು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಧಿಸಲಾಗುತ್ತಿದೆ. ವಿವಿಧ ರಾಜ್ಯಗಳ ದಂಡ ಮೊತ್ತ ಸಂಗ್ರಹ ಕೋಟಿಗಳ ಲೆಕ್ಕದಲ್ಲಿದೆ. ದಂಡ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಜನರು, ವಿವಿಧ ಸಂಘಟನೆಗಳು ಒತ್ತಾಯಿಸುತ್ತಿವೆ.

ದಂಡ ಮೊತ್ತ ಹೆಚ್ಚಳ; ಪೆಟ್ರೋಲ್ ಸ್ಥಗಿತಗೊಳಿಸುವ ಎಚ್ಚರಿಕೆದಂಡ ಮೊತ್ತ ಹೆಚ್ಚಳ; ಪೆಟ್ರೋಲ್ ಸ್ಥಗಿತಗೊಳಿಸುವ ಎಚ್ಚರಿಕೆ

ಗುಜರಾತ್‌ನಲ್ಲಿರುವ ಬಿಜೆಪಿ ಸರ್ಕಾರ ಸಂಚಾರಿ ನಿಯಮ ಉಲ್ಲಂಘನೆಗೆ ವಿಧಿಸುತ್ತಿರುವ ದಂಡವನ್ನು ಕಡಿಮೆ ಮಾಡಲು ಮುಂದಾಗಿದೆ. ಮುಖ್ಯಮಂತ್ರಿ ವಿಜಯ್ ರೂಪಾನಿ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಸಂಚಾರಿ ನಿಯಮ ಉಲ್ಲಂಘನೆಯ ದಂಡ ಕಡಿಮೆ ಮಾಡಿ: ಸಿದ್ದರಾಮಯ್ಯಸಂಚಾರಿ ನಿಯಮ ಉಲ್ಲಂಘನೆಯ ದಂಡ ಕಡಿಮೆ ಮಾಡಿ: ಸಿದ್ದರಾಮಯ್ಯ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಂಡ ಶುಲ್ಕವನ್ನು ಕಡಿಮೆ ಮಾಡಿ ಎಂದು ರಾಜ್ಯ ಸರ್ಕರವನ್ನು ಆಗ್ರಹಿಸಿದ್ದರು. ಕರ್ನಾಟಕದಲ್ಲಿಯೂ ಬಿಜೆಪಿ ಸರ್ಕಾರವಿದ್ದು, ಈ ಬಗ್ಗೆ ಚಿಂತನೆ ನಡೆಯಲಿದೆಯೇ? ಕಾದು ನೋಡಬೇಕಿದೆ.

ಬ್ರೇಕಿಂಗ್ ನ್ಯೂಸ್: ಸಂಚಾರಿ ನಿಯಮ ಉಲ್ಲಂಘನೆ ದಂತ ಮೊತ್ತ ಕಡಿತಬ್ರೇಕಿಂಗ್ ನ್ಯೂಸ್: ಸಂಚಾರಿ ನಿಯಮ ಉಲ್ಲಂಘನೆ ದಂತ ಮೊತ್ತ ಕಡಿತ

ವಿಜಯ್ ರೂಪಾನಿ ಹೇಳಿದ್ದೇನು?

ವಿಜಯ್ ರೂಪಾನಿ ಹೇಳಿದ್ದೇನು?

"ರಾಜ್ಯದಲ್ಲಿ ವಿಧಿಸಲಾಗುವ ದಂಡದ ಪ್ರಮಾಣ ಕೇಂದ್ರ ಸರ್ಕಾರ ಪ್ರಸ್ತಾಪಿಸಿದ್ದಕ್ಕಿಂತ ಕಡಿಮೆ ಇರಲಿದೆ" ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಎಷ್ಟು ಕಡಿಮೆ ಮಾಡಬೇಕು ಎಂದು ಸರ್ಕಾರ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ.

ಜನರಿಗೆ ಹೊರೆಯಾಗಬಾರದು

ಜನರಿಗೆ ಹೊರೆಯಾಗಬಾರದು

"ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲು ಜನರಿಗೆ ಪ್ರೋತ್ಸಾಹ ನೀಡಲಾಗುತ್ತದೆ. ಸಂಚಾರಿ ಪೊಲೀಸರು ವಿಧಿಸುವ ದಂಡ ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಉದ್ದೇಶವಾಗಿದೆ" ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ದಂಡ ಮೊತ್ತಕ್ಕೆ ಜನರ ಆಕ್ರೋಶ

ದಂಡ ಮೊತ್ತಕ್ಕೆ ಜನರ ಆಕ್ರೋಶ

ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಸೆಪ್ಟೆಂಬರ್ 1ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಹೆಲ್ಮೆಟ್ ಹಾಕಿಲ್ಲವೆಂದರೆ 2 ಸಾವಿರ, ಡಿಎಲ್ ಇಲ್ಲದಿದ್ದರೆ 5 ಸಾವಿರ, ಮಾಲಿನ್ಯ ಪ್ರಮಾಣ ಪತ್ರವಿಲ್ಲದ್ದಕ್ಕೆ 2 ಸಾವಿರ ಸೇರಿದಂತೆ ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡವನ್ನು ವಿಧಿಸಲಾಗುತ್ತಿದೆ. ದೇಶಾದ್ಯಂತ ಜನರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕರ್ನಾಟಕದಲ್ಲಿಯೂ ಆಗುತ್ತಾ?

ಕರ್ನಾಟಕದಲ್ಲಿಯೂ ಆಗುತ್ತಾ?

ಕರ್ನಾಟಕದಲ್ಲಿಯೂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವಿದೆ. ಮಾಜಿ ಮಖ್ಯಮಂತ್ರಿ ಸಿದ್ದರಾಮಯ್ಯ ದಂಡ ಮೊತ್ತ ಕಡಿಮೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸದಾ ಗುಜರಾತ್ ಮಾದರಿ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ರಾಜ್ಯದಲ್ಲಿಯೂ ದಂಡ ಮೊತ್ತ ಪರಿಷ್ಕರಣೆಗೆ ಮುಂದಾಗಲಿದ್ದಾರೆಯೇ? ಕಾದು ನೋಡಬೇಕು.

ಪೆಟ್ರೋಲ್ ಪೂರೈಕೆ ಸ್ಥಗಿತ?

ಪೆಟ್ರೋಲ್ ಪೂರೈಕೆ ಸ್ಥಗಿತ?

ಕರ್ನಾಟಕ ತೈಲ ಸಾಗಣೆ ಟ್ಯಾಂಕರ್ ಚಾಲಕರು ಮತ್ತು ಕ್ಲೀನರ್ ಒಕ್ಕೂಟದ ಅಧ್ಯಕ್ಷ ಶ್ರೀರಾಮ್ ದಂಡ ಮೊತ್ತ ಪರಿಷ್ಕರಣೆ ಮಾಡುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದಿದ್ದಾರೆ. "ಚಾಲಕರು ಹಾಗೂ ಮಾಲೀಕರ ಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ತೈಲ ಸಾಗಣೆ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸುತ್ತೇವೆ" ಎಂದು ಎಚ್ಚರಿಕೆ ನೀಡಿದ್ದಾರೆ.

English summary
Gujarat government decided to reduce fine amount of Motor Vehicles Amendment Act 2019. People opposing heavy fine for traffic rules violation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X