ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಕ್ಸಿಜನ್ ಕೊರತೆಯಿಂದ ವ್ಯವಸ್ಥೆ ಮೇಲೆ ಒತ್ತಡ; ಹೈಕೋರ್ಟ್‌ಗೆ ಸರ್ಕಾರದ ಉತ್ತರ

|
Google Oneindia Kannada News

ಅಹ್ಮದಾಬಾದ್, ಮೇ 11: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ನಡುವೆ ವೈದ್ಯಕೀಯ ಆಮ್ಲಜನಕ ಪೂರೈಕೆ ಕೊರತೆಯಿಂದ ಇಡೀ ವ್ಯವಸ್ಥೆ ತೀವ್ರ ಒತ್ತಡದಲ್ಲಿದೆ ಎಂದು ಗುಜರಾತ್ ಸರ್ಕಾರವು ಉಚ್ಛ ನ್ಯಾಯಾಲಯಕ್ಕೆ ತಿಳಿಸಿದೆ.

ಕೊವಿಡ್-19 ಸೋಂಕಿನ ಹೆಚ್ಚಳ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಯಾಗಿ ಸರ್ಕಾರ ಹೈಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ. ಏಪ್ರಿಲ್ 23 ರಿಂದ ಮೇ 7ರವರೆಗೆ ರಾಜ್ಯದಲ್ಲಿ ಸರಾಸರಿ 1,232 ಮೆಟ್ರಿಕ್ ಟನ್ ವೈದ್ಯಕೀಯ ಆಮ್ಲಜನಕಕ್ಕೆ ಬೇಡಿಕೆಯಿತ್ತು. ಈ ಪ್ರಮಾಣವು ಇದೀಗ ಸ್ಥಿರವಾಗಿದೆ ಎಂದು ಗುಜರಾತ್ ಸರ್ಕಾರ ಸಲ್ಲಿಸಿದ ಅಫಿಡವಿಟ್ ನಲ್ಲಿ ಉಲ್ಲೇಖಿಸಿದೆ.

ಆಕ್ಸಿಜನ್ ಪೂರೈಕೆ; ಕರ್ನಾಟಕಕ್ಕೆ ಕೊಡುಗೆ ಕೊಟ್ಟ ಕೇಂದ್ರ ಆಕ್ಸಿಜನ್ ಪೂರೈಕೆ; ಕರ್ನಾಟಕಕ್ಕೆ ಕೊಡುಗೆ ಕೊಟ್ಟ ಕೇಂದ್ರ

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ವೈದ್ಯಕೀಯ ಆಮ್ಲಜನಕ ಕೊರತೆ ಸೃಷ್ಟಿಯಾಗುತ್ತಿತ್ತು. ಆದರೆ ಅದಕ್ಕೂ ಮೂರು ದಿನಗಳ ಮೊದಲೇ ಅಗತ್ಯ ಪ್ರಮಾಣದ ಆಕ್ಸಿಜನ್, ಆಕ್ಸಿಜನ್ ಸಿಲಿಂಡರ್ ಹಾಗೂ ಲಸಿಕೆ ಬಾಟಲಿ ತಯಾಕರು ತಿಳಿಸಿದ್ದಾರೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Tremendous Stress On System Due To Oxygen Shortage, Gujarat Govt Filed Affidavit To High Court

ವೈದ್ಯಕೀಯ ಆಮ್ಲಜನಕ ಬಳಕೆ ಪ್ರಮಾಣದಲ್ಲಿ ಸ್ಥಿರತೆ:

ಗುಜರಾತಿನಲ್ಲಿ ಒಂದು ಕಡೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಈ ಹಂತದಲ್ಲಿ ವೈದ್ಯಕೀಯ ಆಮ್ಲಜನಕದ ಬಳಕೆ ಪ್ರಮಾಣ 1250 ಮೆಟ್ರಿಕ್ ಟನ್ ಗೆ ಸ್ಥಿರವಾಗಿದೆ. ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು ತಗ್ಗಿಸುವುದಕ್ಕೂ ಮೊದಲು ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳನ್ನು ಪತ್ತೆಯಾಗುವುದಕ್ಕೆ ಆದ್ಯತೆ ನೀಡಲಾಗುತ್ತದೆ. ಕೊರೊನಾವೈರಸ್ ಪ್ರಕರಣಗಳು ಇಳಿಮುಖವಾಗಿರುವ ಬಗ್ಗೆ ಸ್ಪಷ್ಟತೆ ಸಿಕ್ಕ ಬಳಿಕ ಆಕ್ಸಿಜನ್ ಬಳಕೆಯ ಸ್ಥಿರ ಪ್ರಮಾಣವನ್ನು ಕಡಿತಗೊಳಿಸಲಾಗುವುದು ಎಂದು ಗುಜರಾತ್ ಸರ್ಕಾರದ ಆರೋಗ್ಯ ಕಾರ್ಯದರ್ಶಿ ಜಯಂತಿ ರವಿ ಅವರು ಸಲ್ಲಿಸಿದ ಅಫಿಡವಿಟ್ ನಲ್ಲಿ ಹೇಳಲಾಗಿದೆ.

ಮೂರನೇ ಅಲೆಗೂ ಗುಜರಾತ್ ಸನ್ನದ್ಧ:

ಕೊರೊನಾವೈರಸ್ ಸೋಂಕಿನ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಸರ್ವಸನ್ನದ್ಧವಾಗಿದೆ ಎಂದು ಆರೋಗ್ಯ ಕಾರ್ಯದರ್ಶಿ ಜಯಂತಿ ರವಿ ತಿಳಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 4 ರಿಂದ 5 ದಿನದಲ್ಲಿ ಒಬ್ಬ ಸೋಂಕಿತನು ಆಸ್ಪತ್ರೆಗೆ ದಾಖಲಾಗುತ್ತಿದ್ದು, 10 ರಿಂದ 12 ದಿನಕ್ಕೆ ಒಬ್ಬ ರೋಗಿಯು ಐಸಿಯುಗೆ ದಾಖಲಾಗುತ್ತಿದ್ದಾರೆ. ಮೂರ್ನಾಲ್ಕು ದಿನಕ್ಕೆ 1250 ಮೆಟ್ರಿಕ್ ಟನ್ ಆಮ್ಲಜನಕ ಬಳಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಒಂದು ವಾರಕ್ಕೆ ಕೇವಲ 100 ಮೆಟ್ರಿಕಲ್ ಟನ್ ಆಕ್ಸಿಜನ್ ಬಳಕೆ ಆಗುವಂತಾ ಸ್ಥಿತಿಯನ್ನು ನಿರ್ಮಾಣ ಮಾಡುವತ್ತ ಸರ್ಕಾರ ಆಲೋಚಿಸುತ್ತಿದೆ ಎಂದು ಹೇಳಿದ್ದಾರೆ.

English summary
Tremendous Stress On System Due To Oxygen Shortage, Gujarat Govt Filed Affidavit To High Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X