'ಮೋದಿ ನಾಯಕತ್ವದಲ್ಲಿ ಭಾರತ ತಾಳ್ಮೆಯಿಂದ 2 ನೇ ಕೋವಿಡ್ ಅಲೆ ವಿರುದ್ದ ಹೋರಾಡಿದೆ': ಅಮಿತ್ ಶಾ
ಅಹಮದಾಬಾದ್, ಜೂ. 03: "ಕೋವಿಡ್ ಸಾಂಕ್ರಾಮಿಕದಿಂದ ಎದುರಿಸುತ್ತಿರುವ ಸವಾಲುಗಳ ವಿರುದ್ದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಾಳ್ಮೆಯಿಂದ ಹೋರಾಡಿದೆ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಅಹಮದಾಬಾದ್‌ನಲ್ಲಿ ಒಂಬತ್ತು ಆಮ್ಲಜನಕ ಸ್ಥಾವರಗಳ ವರ್ಚುವಲ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವರು, "ಎರಡನೇ ಅಲೆಯಲ್ಲಿನ ಅತಿದೊಡ್ಡ ಸವಾಲುಗಳಲ್ಲಿ ಒಂದಾದ ಆಮ್ಲಜನಕದ ಬೇಡಿಕೆಯಲ್ಲಿನ ಹತ್ತು ಪಟ್ಟು ಹೆಚ್ಚಳವನ್ನು ನಿವಾರಿಸಲು ಸರ್ಕಾರ ಕೈಗೊಂಡ ಹಲವಾರು ಕ್ರಮಗಳನ್ನು ಕೈಗೊಂಡಿದೆ" ಎಂದಿದ್ದಾರೆ.
"ಸಾಮಾನ್ಯ ಪರಿಸ್ಥಿತಿಗಳಲ್ಲಿ, ದೇಶವು ಸುಮಾರು 1000 ಮೆ.ಟನ್ ಆಮ್ಲಜನಕವನ್ನು ಉತ್ಪಾದಿಸುತ್ತಿತ್ತು. ಒಂದು ತಿಂಗಳಲ್ಲಿ ಬೇಡಿಕೆ 10,000 ಮೆ.ಟನ್.ಗೆ ಏರಿತು. ಈ ಬೇಡಿಕೆಯು 10 ಪಟ್ಟು ಹೆಚ್ಚಳವಾಗಿತ್ತು. ಇದನ್ನು ಪೂರೈಸುವುದು ದೊಡ್ಡ ಸವಾಲಾಗಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಕೇಂದ್ರ ಮತ್ತು ರಾಜ್ಯವು ಈ ಸವಾಲನ್ನು ದೃಢವಾಗಿ ಎದುರಿಸಿದೆ" ಎಂದು ಶ್ಲಾಘಿಸಿದ್ದಾರೆ.

"ಕೈಗಾರಿಕಾ ಆಮ್ಲಜನಕದ ಉತ್ಪಾದನೆಯನ್ನು ದೇಶದಾದ್ಯಂತದ ಸ್ಥಾವರಗಳಲ್ಲಿ ಮಾಡಲಾಗುತ್ತಿತ್ತು. ಆದರೆ ಬಳಿಕ ಎಲ್ಲಾ ಸ್ಥಾವರಗಳಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನೆ ಮಾಡಲಾಯಿತು. ಕ್ರಯೋಜೆನಿಕ್ ಟ್ಯಾಂಕರ್‌ಗಳು ದೇಶದಲ್ಲಿ ಕಡಿಮೆ ಇದ್ದವು. ನಾವು ವಿದೇಶಗಳಿಂದ ಅದನ್ನು ಆಮದು ಮಾಡಿಕೊಂಡೆವು. ರೈಲುಗಳಲ್ಲಿ ಆಮ್ಲಜನಕವನ್ನು ಸಾಗಿಸಲಾಯಿತು. ಸುಮಾರು 15,000 ಮೆ.ಟನ್ ಆಮ್ಲಜನಕ ರೈಲುಗಳಲ್ಲಿ ರವಾನೆ ಮಾಡಲಾಗಿದೆ" ಎಂದು ವಿವರಿಸಿದ್ದಾರೆ.
"ಮೊದಲ ಅಲೆಯ ನಂತರ, 162 ಪಿಎಸ್‌ಎ ಸ್ಥಾವರಗಳನ್ನು ಪಿಎಂ ಕೇರ್ಸ್ ನಿಧಿಯಿಂದ ಪ್ರಧಾನಿ ಅನುಮೋದಿಸಿದ್ದಾರೆ. ಇದರೊಂದಿಗೆ ಇನ್ನೂ 100 ಪಿಎಸ್ಎ ಸ್ಥಾವರಗಳನ್ನು ಇತರ ಸಚಿವಾಲಯಗಳು ಪ್ರಾರಂಭಿಸಿದೆ. ಮುಂದಿನ ದಿನಗಳಲ್ಲಿ ಇನ್ನೂ 300 ಸ್ಥಾವರ ಕಾಮಗಾರಿಗಳನ್ನು ಸಹ ಪ್ರಾರಂಭಿಸಲಾಗುವುದು" ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲೇ ಅಮಿತ್ ಶಾ, ಸಶಸ್ತ್ರ ಪಡೆ, ರೈಲ್ವೆ ಮತ್ತು ವಿಜ್ಞಾನಿಗಳ ಪ್ರಯತ್ನಗಳನ್ನು ಶ್ಲಾಘಿಸಿ ಧನ್ಯವಾದ ಹೇಳಿದ್ದಾರೆ. ಅಮಿತ್ ಶಾ ಉದ್ಘಾಟಿಸಿದ ಒಂಬತ್ತು ಆಮ್ಲಜನಕ ಘಟಕಗಳನ್ನು ವಲ್ಲಭ ಯುವ ಸಂಘಟನೆ ನಿರ್ವಹಿಸಲಿದೆ. ವರ್ಚುವಲ್ ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡಾ ಉಪಸ್ಥಿತರಿದ್ದರು.
(ಒನ್ಇಂಡಿಯಾ ಸುದ್ದಿ)
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications