• search
 • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹೆದ್ದಾರಿಯಲ್ಲಿ ಎರಡು ಟ್ರಕ್ ಮುಖಾಮುಖಿ ಡಿಕ್ಕಿ, 9 ಮಂದಿ ಸಾವು

|

ವಡೋದರಾ, ನ. 18: ಗುಜರಾತಿನ ವಡೋದರಾದಲ್ಲಿ ಬುಧವಾರ ಮುಂಜಾನೆ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಟ್ರಕ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಈ ಅಪಘಾತದಲ್ಲಿ ಸಾವು ನೋವು ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ವಘೋಡಿಯಾ ಕ್ರಾಸಿಂಗ್ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ಮುಂಜಾನೆ ಮಂಜು ಮುಸುಕಿದ ವಾತಾವರಣ ಇದ್ದಿದ್ದರಿಂದ ಟ್ರಕ್ ಚಾಲಕರಿಗೆ ರಸ್ತೆ ಸರಿಯಾಗಿ ಕಾಣಿಸಿರಲಿಲ್ಲ. ಹೀಗಾಗಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಎರಡು ಟ್ರಕ್ ಗಳ ಮುಂಭಾಗ ನಜ್ಜುಗುಜ್ಜಾಗಿದೆ.

Vadodara accident: Head-on collision between trucks kills Nine

ಈ ದುರಂತದಲ್ಲಿ ಒಟ್ಟು 9 ಮಂದಿ ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದರೆ, 15ಕ್ಕೂ ಅಧಿಕ ಮಂದಿಗೆ ತೀವ್ರ ಗಾಯಗಳಾಗಿವೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

   ಒಬಾಮ ಹೆಂಡತಿ ಬೇಸರ ಆಗಿರೋದು ಇದೆ ಕಾರಣಕ್ಕೆ !! | Oneindia Kannada

   English summary
   At least nine people lost their lives and over 15 sustained injuries after two trucks collided with each other in Vadodara of Gujarat. The mishap occurred at Waghodia Crossing Highway in the wee hours on Wednesday, news agency ANI reported.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X