ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್‌; ಗೋಡೆ ಕುಸಿತದಿಂದ ಕಾರ್ಮಿಕರು ಸಾವು, ಪರಿಹಾರ ಘೋಷಿಸಿದ ಮೋದಿ

|
Google Oneindia Kannada News

ಅಹಮದಾಬಾದ್, ಮೇ 18: ಗುಜರಾತ್‌ನ ಮೋರ್ಬಿಯಲ್ಲಿ ಕಾರ್ಖಾನೆ ಗೋಡೆ ಕುಸಿದು 12 ಕಾರ್ಮಿಕರು ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಬುಧವಾರ ಮಧ್ಯಾಹ್ನ ಮೋರ್ಬಿಯಲ್ಲಿನ ಗುಜರಾತ್ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್‌ನ (ಜಿಐಡಿಸಿ) ಉಪ್ಪು ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆಯೆ ಏಕಾಏಕಿ ಗೋಡೆ ಕುಸಿದುಬಿದ್ದಿತ್ತು.

ಈ ದುರ್ಘಟನೆಯಲ್ಲಿ 12 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಜೆಸಿಬಿಗಳ ಸಹಾಯದಿಂದ 12 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹಲವು ಕಾರ್ಮಿಕರು ಗಾಯಗೊಂಡಿದ್ದು, ಅವಶೇಷಗಳಡಿಯಿಂದ ಅವರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಪರಶೋತ್ತಮ್ ಸಬರಿಯಾ, ಜಿಲ್ಲಾಧಿಕಾರಿ ಸೇರಿದಂತೆ ಹಲವು ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ; ಈ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಸಂತಾಪ ವ್ಯಕ್ತ ಪಡಿಸಿದ್ದಾರೆ. "ಗೋಡೆ ಕುಸಿತದಿಂದ ಮೋರ್ಬಿಯಲ್ಲಿ ನಡೆದಿರುವ ದುರಂತ ಹೃದಯ ವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನನ್ನ ನೈತಿಕ ಬೆಂಬಲ ಇರುತ್ತದೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಸ್ಥಳೀಯ ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದ್ದಾರೆ" ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Wall Collapse In Salt Factory At Morbi District PM Modi Announces Ex Gratia Of Rs 2 Lakh

ಇನ್ನು ಮೋರ್ಬಿಯಲ್ಲಿ ನಡೆದ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂಪಾಯಿ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿಯು ಟ್ವೀಟ್ ಮಾಡಿದೆ.

ರಾಜ್ಯ ಸರ್ಕಾರದಿಂದ 4 ಲಕ್ಷ ಪರಿಹಾರ; ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ದುರಂತ ಸ್ಥಳಕ್ಕೆ ಭೇಟಿ ನೀಡಿರುವ ಅವರು, ಸಾವನ್ನಪ್ಪಿದವರ ಕುಟುಂಬದ ಜೊತೆಗೆ ಸರಕಾರ ನಿಲ್ಲಲಿದೆ ಎಂದು ತಿಳಿಸಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 4 ಲಕ್ಷ ರೂಪಾಯಿಗಳ ನೆರವು ಘೋಷಿಸಿದ್ದಾರೆ.

English summary
12 workers were killed in the wall collapse of a salt factory in the Halvad GIDC of the Morbi district in Gujarat. Prime minister Narendra Modi announces ex-gratia of 2 lakh per each died person's family.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X