ಸಿಎಎ ಪ್ರತಿಗಳನ್ನು ಸುಟ್ಟು ಪ್ರತಿಭಟನೆ: ಜಿಗ್ನೇಶ್ ಮೇವಾನಿ
ಅಹಮದಾಬಾದ್, ಜನವರಿ 9: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ವಿರೋಧಿಸಿ ಅದರ ಪ್ರತಿಗಳನ್ನು ಅಹಮದಾಬಾದ್‌ನ 12 ಕಡೆಗಳಲ್ಲಿ ಸುಟ್ಟುಹಾಕುವುದಾಗಿ ಶಾಸಕ ಜಿಗ್ನೇಶ್ ಮೇವಾನಿ ತಿಳಿಸಿದ್ದಾರೆ.
ರೈತರು, ಮಹಿಳೆಯರು, ಕಾರ್ಮಿಕರು, ಬುಡಕಟ್ಟು ಸಮುದಾಯದವರು, ಮೀನುಗಾರರು, ಅಲೆಮಾರಿಗಳು ಮತ್ತು ಆದಿವಾಸಿಗಳ ಸಂಘಟನೆಗಳು ಸ್ವಪ್ರೇರಣೆಯಿಂದ ಪಾಲ್ಗೊಳ್ಳಲಿವೆ ಎಂದು ಅವರು ಹೇಳಿದ್ದಾರೆ. ಗುಜರಾತ್‌ನಲ್ಲಿನ ಬಿಜೆಪಿ ಸರ್ಕಾರವು ವಿಧಾನಸಭೆಯಲ್ಲಿ ಕಾಯ್ದೆ ಬೆಂಬಲಿಸಲು ನಿರ್ಣಯ ಅಂಗೀಕರಿಸಿದ ಹಿನ್ನೆಲೆಯಲ್ಲಿ ಈ ಪ್ರತಿಭಟನೆಯ ಮಾರ್ಗ ನಡೆಸಲು ನಿರ್ಧರಿಸಲಾಗಿದೆ.
ಗುಜರಾತ್ ಸರ್ಕಾರವು ಸಿಎಎ ಬೆಂಬಲಿಸಿ ಜ.10ರಂದು ವಿಧಾನಸಭೆಯಲ್ಲಿ ವಿಶೇಷ ಅಧಿವೇಶನ ಕರೆದಿದೆ. ಸಿಎಎ, ಉದ್ದೇಶಿತ ರಾಷ್ಟ್ರಯ ಪೌರತ್ವ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರುದ್ಧ ರಾಜ್ಯದಲ್ಲಿ ಸಂಘಟನೆಗಳು ಅಸಹಕಾರ ಚಳವಳಿ ನಡೆಸಲು ತೀರ್ಮಾನಿಸಿವೆ.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಜಿಗ್ನೇಶ್ ಮೇವಾನಿ, ವಿಧಾನಸಭೆಯಲ್ಲಿ ಅಂಗೀಕಾರವಾಗಲಿರುವ ಸಿಎಎ ಪರ ನಿರ್ಣಯವನ್ನು ವಿರೋಧಿಸಲು ನಾವೆಲ್ಲರೂ 'ನಾವು ಭಾರತದ ಜನರು' ಎಂಬ ಅನೌಪಚಾರಿಕ ಬ್ಯಾನರ್ ಅಡಿಯಲ್ಲಿ ಒಟ್ಟಾಗಿದ್ದೇವೆ. ನಾವು ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ಅನ್ನು ಬೆಂಬಲಿಸುವುದಿಲ್ಲ ಎಂದರು.
ಗುಜರಾತ್ ವಿಧಾನಸಭೆಯಲ್ಲಿ ಸಿಎಎ ಬೆಂಬಲಿಸುವ ನಿರ್ಣಯ ಅಂಗೀಕಾರವಾದ ದಿನವೇ ನಮ್ಮ ಸಂಘಟನೆಗಳು ಈ ಕರಾಳ ಕಾಯ್ದೆಯ ಪ್ರತಿಗಳನ್ನು ಸುಟ್ಟುಹಾಕುವ ಮೂಲಕ ಅಹ್ಮದಾಬಾದ್‌ನ 12 ಸ್ಥಳಗಳಲ್ಲಿ ಹೋಳಿಯಾಡಲಿವೆ ಎಂದು ತಿಳಿಸಿದರು.
ನಿರುದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಖಾಸಗೀಕರಣ, ಹಣದುಬ್ಬರ ಮತ್ತು ಸಾರ್ವಜನಿಕ ವಲಯದ ಘಟಕಗಳನ್ನು ಮಾರಾಟ ಮಾಡುತ್ತಿರುವಂತಹ ವಾಸ್ತವ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕೇಂದ್ರ ಸರ್ಕಾರವು ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿಯಂತಹ ಯೋಜನೆಗಳನ್ನು ಜಾರಿ ಮಾಡುತ್ತಿದೆ ಎಂದು ಆರೋಪಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications