ಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ಮೋದಿ ಹೆಸರು
ಅಹಮದಾಬಾದ್, ಫೆಬ್ರವರಿ 24: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹೊಸ ಸ್ವರೂಪ ಪಡೆದುಕೊಂಡ ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಮೊಟೆರಾ ಕ್ರಿಕೆಟ್ ಕ್ರೀಡಾಂಗಣವನ್ನು ಬುಧವಾರ ಉದ್ಘಾಟಿಸಿದರು. ಭಾರತ ಮತ್ತು ಇಂಗ್ಲೆಂಡ್ ನಡುವಿನ ಕ್ರಿಕೆಟ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಕೋವಿಂದ್ ಅವರು ಈ ಕ್ರೀಡಾಂಗಣವನ್ನು ಲೋಕಾರ್ಪಣೆಗೊಳಿಸಿದರು.
ಮೊಟೆರಾ ಕ್ರಿಕೆಟ್ ಮೈದಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಇರಿಸಲಾಗಿದ್ದು, ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣ ಮಾಡಲಾಗಿದೆ. ಬುಧವಾರ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ, ಕ್ರೀಡಾ ಸಚಿವ ಕಿರೆಣ್ ರಿಜಿಜು, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಬಿಸಿಸಿಐ ಕಾರ್ಯದರ್ಶಿ ಜೇ ಶಾ ಹಾಜರಿದ್ದರು.
ನರೇಂದ್ರ ಮೋದಿ ಕ್ರೀಡಾಂಗಣವು ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಕ್ರಿಕೆಟ್ ಮೈದಾನ ಎನಿಸಿಕೊಂಡಿದ್ದು, 1,10,000 ಪ್ರೇಕ್ಷಕರು ಕುಳಿತುಕೊಳ್ಳುವ ಸಾಮರ್ಥ್ಯ ಹೊಂದಿದೆ. ಇಲ್ಲಿ ಮೊದಲ ಬಾರಿಗೆ ಭಾರತ-ಇಂಗ್ಲೆಂಡ್ ನಡುವೆ ಹೊನಲು ಬೆಳಕಿನ 'ಪಿಂಕ್ ಬಾಲ್' ಟೆಸ್ಟ್ ಪಂದ್ಯ ನಡೆಯಲಿದೆ.

ಭಾರತದ ಕ್ರೀಡಾ ನಗರ
ಮೊಟೆರಾದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಸ್ಪೋರ್ಟ್ಸ್ ಎನ್‌ಕ್ಲೇವ್ ಮತ್ತು ನರೇಂದ್ರ ಮೋದಿ ಸ್ಟೇಡಿಯಂ ಜತೆಗೆ ನರಾನ್‌ಪುರದಲ್ಲಿ ಕ್ರೀಡಾ ಸಂಕೀರ್ಣವೊಂದನ್ನು ಸಹ ನಿರ್ಮಿಸಲಾಗುತ್ತದೆ. ಈ ಮೂರೂ ಸ್ಥಳಗಳು ಯಾವುದೇ ಬಗೆಯ ಅಂತಾರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳನ್ನು ನಡೆಸಲು ಅಗತ್ಯ ಸೌಲಭ್ಯಗಳನ್ನು ಹೊಂದಲಿವೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದರು.
'ಅಹಮದಾಬಾದ್ ಭಾರತದ ಕ್ರೀಡಾ ನಗರವಾಗಿ ಗುರುತಿಸಿಕೊಳ್ಳಲಿದೆ' ಎಂದು ಅಮಿತ್ ಶಾ ಹೇಳಿದರು.

ಬಾಲ್ಯದ ಕನಸು ನಿಜವಾಗಿದೆ
'ಕ್ರಿಕೆಟ್‌ಗೆ ಮಾತ್ರವಲ್ಲ, ಇದು ಭಾರತಕ್ಕೆ ಹೆಮ್ಮೆಯ ಗಳಿಗೆ. ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನ್ನುವುದರ ಜತೆಗೆ ಇದು ಜಗತ್ತಿನ ಅತ್ಯಂತ ಆಧುನಿಕ ಕ್ರೀಡಾಂಗಣಗಳಲ್ಲಿ ಒಂದಾಗಿದೆ. ಮಕ್ಕಳಾಗಿದ್ದಾಗ ನಮಗೆ ಜಗತ್ತಿನ ಅತಿ ದೊಡ್ಡ ಕ್ರೀಡಾಂಗಣ ಭಾರತದಲ್ಲಿ ಇರಬೇಕು ಎಂಬ ಕನಸಿತ್ತು. ಈಗ ಕ್ರೀಡಾ ಸಚಿವನಾಗಿ ಇದು ಕೊನೆಗೂ ಈಡೇರಿತು ಎಂಬ ನನ್ನ ಸಂತಸವನ್ನು ವರ್ಣಿಸಲು ಆಗುತ್ತಿಲ್ಲ' ಎಂದು ಕಿರೆನ್ ರಿಜಿಜು ಹೇಳಿದರು.

ಸತತ ಏಳು ಅಂತಾರಾಷ್ಟ್ರೀಯ ಪಂದ್ಯಗಳು
ಈ ಕ್ರೀಡಾಂಗಣವು ನವೀಕರಣಗೊಂಡ ಬಳಿಕ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ನಡೆಯುತ್ತಿದೆ. ಇದಕ್ಕೂ ಮುನ್ನ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ನಾಕೌಟ್ ಹಂತದ ಪಂದ್ಯಗಳು ಇಲ್ಲಿ ನಡೆದಿದ್ದವು. ಕೆಲವೇ ಸಮಯದಲ್ಲಿ ಇಲ್ಲಿ ಏಳು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಕೊನೆಯ ಎರಡು ಟೆಸ್ಟ್ ಹಾಗೂ ಟಿ20 ಸರಣಿಯ ಎಲ್ಲ ಐದೂ ಪಂದ್ಯಗಳು ಇಲ್ಲಿಯೇ ನಡೆಯಲಿವೆ.

63 ಎಕರೆ ವಿಸ್ತೀರ್ಣ
ಮೊಟೆರಾ ಕ್ರೀಡಾಂಗಣವನ್ನು 1982ರಲ್ಲಿ ನಿರ್ಮಿಸಲಾಗಿತ್ತು. ಆಗ ಅದರ ಸಾಮರ್ಥ್ಯ 49,000 ಇತ್ತು. 63 ಎಕರೆ ವಿಸ್ತೀರ್ಣದಲ್ಲಿನ ಪ್ರದೇಶದಲ್ಲಿ 40 ಅಥ್ಲೀಟ್ ಉಳಿದುಕೊಳ್ಳಲು ಸಾಧ್ಯವಾಗುವಂತಹ ಜಾಗ ಹಾಗೂ ಒಳಾಂಗಣ ಕ್ರಿಕೆಟ್ ಅಕಾಡೆಮಿಯನ್ನು ಹೊಂದಿದೆ. ನಾಲ್ಕು ತಂಡಗಳಿಗೆ ಸಾಲುವಷ್ಟು ಡ್ರೆಸ್ಸಿಂಗ್ ರೂಂಗಳಿವೆ. ಜಿಮ್, ಆರು ಒಳಾಂಗಣ ಅಭ್ಯಾಸ ಪಿಚ್‌ಗಳು, ಮೂರು ಹೊರಾಂಗಣ ಅಭ್ಯಾಸ ಪಿಚ್‌ಗಳು ಹಾಗೂ ಇತರೆ ಸವಲತ್ತುಗಳಿವೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications