ಆಂಧ್ರ ಪ್ರದೇಶದಲ್ಲಿ ಒಂದೇ ದಿನ 10,093 ಮಂದಿಗೆ ಕೊರೊನಾವೈರಸ್
ಅಮರಾವತಿ, ಜುಲೈ.29: ದಕ್ಷಿಣ ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಪ್ರತಿನಿತ್ಯ ದಾಖಲೆಯ ಮಟ್ಟದಲ್ಲಿ ಸೋಂಕಿತ ಪ್ರಕರಣ ವರದಿಯಾಗುತ್ತಿದ್ದು, ಸಾರ್ವಜನಿಕರ ಎದೆಯಲ್ಲಿ ನಡುಕ ಹುಟ್ಟಿಸುತ್ತಿದೆ.
ಆಂಧ್ರ ಪ್ರದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಮತ್ತೊಂದು ದಾಖಲೆ ಬರೆದಿವೆ. ಕಳೆದ 24 ಗಂಟೆಗಳಲ್ಲೇ 10093 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.
ಕೊರೊನಾವೈರಸ್ ಸೋಂಕಿತರ ಅಂಕಿ-ಸಂಖ್ಯೆಗೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 120390ಕ್ಕೆ ಏರಿಕೆಯಾಗಿದೆ.

ಒಂದೇ ದಿನ 65 ಮಂದಿ ಉಸಿರು ನಿಲ್ಲಿಸಿದ ಮಹಾಮಾರಿ:
ಆಂಧ್ರ ಪ್ರದೇಶದಲ್ಲಿ 24 ಗಂಟೆಗಳಲ್ಲೇ 2784 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 120390 ಸೋಂಕಿತ ಪ್ರಕರಣಗಳ ಪೈಕಿ ಇದುವರೆಗೂ 55406 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇನ್ನೂ 63771 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ. ಇನ್ನು, ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ ಕೊರೊನಾವೈರಸ್ ಮಹಾಮಾರಿಗೆ 65 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 1213ಕ್ಕೆ ಏರಿಕೆಯಾಗಿದೆ.












Click it and Unblock the Notifications