ಆಂಧ್ರ ಪ್ರದೇಶದಲ್ಲಿ ಒಂದೇ ದಿನ 10128 ಮಂದಿಗೆ ಕೊವಿಡ್-19
ಅಮರಾವತಿ, ಆಗಸ್ಟ್.05: ಆಂಧ್ರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿದೆ. ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 10128 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ.
ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಆಂಧ್ರ ಪ್ರದೇಶದಲ್ಲಿ ಕೊವಿಡ್-19 ಸೋಂಕಿತರ ಒಟ್ಟು ಸಂಖ್ಯೆಯು 186461ಕ್ಕೆ ಏರಿಕೆಯಾಗಿದೆ.
ಇದರ ಜೊತೆಗೆ ರಾಜ್ಯದಲ್ಲಿ ಇದುವರೆಗೂ 104354 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಮಹಾಮಾರಿ ಕೊರೊನಾವೈರಸ್ ನಿಂದ ಇದುವರೆಗೂ 1681 ಮಂದಿ ಪ್ರಾಣ ಬಿಟ್ಟಿದ್ದಾರೆ. ಒಟ್ಟು 80426 ಮಂದಿಗೆ ಸಕ್ರಿಯ ಪ್ರಕರಣಗಳು ಇರುವುದು ಪತ್ತೆಯಾಗಿದೆ.
Recommended Video

ಭಾರತದಲ್ಲಿ ಕೊರೊನಾವೈರಸ್ ಕಂಡೀಷನ್:
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 19 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ ದೇಶದಲ್ಲಿ 52509 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ 857 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 39795ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,08,255ಕ್ಕೆ ಏರಿಕೆಯಾಗಿದ್ದು, ಈ ಪೈಕಿ 12,82,216 ಸೋಂಕಿತರು ಗುಣಮುಖರಾಗಿದ್ದಾರೆ. ಭಾರತದಲ್ಲಿ 5,86,244 ಸಕ್ರಿಯ ಪ್ರಕರಣಗಳಿವೆ. ಇದುವರೆದೂ ದೇಶದಲ್ಲಿ 2,14,84,402 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ.












Click it and Unblock the Notifications