ಆಂಧ್ರ ಪ್ರದೇಶದಲ್ಲಿ ಮತ್ತೊಮ್ಮೆ 10,000 ದಾಟಿತು ಸೋಂಕಿತರ ಸಂಖ್ಯೆ!

ಅಮರಾವತಿ, ಜುಲೈ.30: ಆಂಧ್ರ ಪ್ರದೇಶದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಏರುಮುಖವಾಗಿಯೇ ಸಾಗುತ್ತಿದೆ. ಸತತ ಎರಡನೇ ದಿನವೂ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10,000ದ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ 10167 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು ಈಗಾಗಲೇ 130557ಕ್ಕೆ ಏರಿಕೆಯಾಗಿದೆ. ಇನ್ನು, ಕಳೆದ 24 ಗಂಟೆಗಳಲ್ಲೇ ಮಹಾಮಾರಿಗೆ 68 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆಯು 1281ಕ್ಕೆ ಏರಿಕೆಯಾಗಿದೆ.

ಆಂಧ್ರ ಪ್ರದೇಶದಲ್ಲಿ ಒಟ್ಟು 130557 ಸೋಂಕಿತ ಪ್ರಕರಣಗಳ ಪೈಕಿ 60024 ಸೋಂಕಿತರು ಗುಣಮುಖರಾಗಿದ್ದು, ಗುರುವಾರ ಒಂದೇ ದಿನ 4618 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನು ಹೊರತುಪಡಿಸಿ ರಾಜ್ಯದಲ್ಲಿ 69252 ಸಕ್ರಿಯ ಪ್ರಕರಣಗಳಿವೆ.

10167 New Coronavirus Cases Reported In Andhra Pradesh Today, State Tally Rise To 130557

16 ಲಕ್ಷದ ಗಡಿ ದಾಟಿತು ಸೋಂಕಿತರ ಸಂಖ್ಯೆ:

ಭಾರತದಲ್ಲಿ 24 ಗಂಟೆಗಳಲ್ಲೇ 54,708 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆಯಲ್ಲಿ ದೃಢಪಟ್ಟಿದೆ. ಇದರಿಂದ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 16,39,092ಕ್ಕೆ ಏರಿಕೆಯಾಗಿದೆ. ಒಂದೇ ದಿನ ದೇಶದಲ್ಲಿ 780 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 35,783ಕ್ಕೆ ಏರಿಕೆಯಾಗಿದೆ. ಒಟ್ಟು 16,39,092 ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ 1,057,395 ಸೋಂಕಿತರ ಗುಣಮುಖರಾಗಿದ್ದಾರೆ. ಬಾಕಿ ಉಳಿದ 545,914 ಮಂದಿಗೆ ಸೋಂಕಿತರಿಗೆ ನಿಗದಿತ ಆಸ್ಪತ್ರೆ ಮತ್ತು ಕೊವಿಡ್ ಕೇರ್ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+