ಆಂಧ್ರ ಪ್ರದೇಶದಲ್ಲಿ ಒಂದೇ ದಿನ 10328 ಮಂದಿಗೆ ಕೊರೊನಾವೈರಸ್!

ಅಮರಾವತಿ, ಆಗಸ್ಟ್.06: ಕೊರೊನಾವೈರಸ್ ಮಹಾಮಾರಿಯು ಆಂಧ್ರ ಪ್ರದೇಶದಲ್ಲಿ ಪ್ರತಿನಿತ್ಯ ಒಂದೊಂದು ದಾಖಲೆಗಳನ್ನು ಬರೆಯುತ್ತಿದೆ. ಬುಧವಾರಕ್ಕಿಂತ ಗುರುವಾರ ಹೆಚ್ಚು ಸೋಂಕಿತ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದೆ.

ಬುಧವಾರ 10128 ಮಂದಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿದ್ದು ಪತ್ತೆಯಾಗಿದ್ದು, ಅದಾಗಿ 24 ಗಂಟೆಗಳಲ್ಲೇ ಆಂಧ್ರ ಪ್ರದೇಶದಲ್ಲಿ 10328 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಇದರಿಂದ ಒಟ್ಟು ಸೋಂಕಿತರ ಸಂಖ್ಯೆಯು 196789ಕ್ಕೆ ಏರಿಕೆಯಾಗಿದೆ.

ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಕುರಿತು ಆಂಧ್ರ ಪ್ರದೇಶ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ 196789 ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಒಂದೇ ದಿನ 8,516 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇದುವರೆಗೂ 1,12,870 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಹೆಲ್ತ್ ಬುಲೆಟಿನ್ ಅಂಕಿ-ಅಂಶಗಳಲ್ಲಿ ತಿಳಿದು ಬಂದಿದೆ.

10328 New Coronavirus Cases Reported in Andhra Pradesh Today, State Tally Rise to 196789

24 ಗಂಟೆಗಳಲ್ಲೇ ಮಹಾಮಾರಿಗೆ 72 ಮಂದಿ ಬಲಿ:

ಆಂಧ್ರ ಪ್ರದೇಶದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಡುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಒಂದೇ ದಿನ ಮಹಾಮಾರಿಗೆ 72 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರಿಂದಾಗಿ ಸಾವಿನ ಸಂಖ್ಯೆಯು 1,753ಕ್ಕೆ ಏರಿಕೆಯಾಗಿದೆ. 82,166 ಸೋಂಕಿತರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+