• search
  • Live TV
ಅಮರಾವತಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಶಾಖಪಟ್ಟಣಂ ಸೆಂಟ್ರಲ್ ಜೈಲ್‌ನ 57 ಕೈದಿಗಳಲ್ಲಿ ಕೊರೊನಾ ಸೋಂಕು ಪತ್ತೆ

|
Google Oneindia Kannada News

ಅಮರಾವತಿ, ಮೇ 21: ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಸೆಂಟ್ರಲ್ ಜೈಲಿನಲ್ಲಿ 57 ಜನ ಬಂಧಿತರು ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ. ಈ ಬಗ್ಗೆ ಜೈಲಿನ ಅಧಿಕಾರಿಗಳು ಶುಕ್ರವಾರ ಮಾಹಿತಿಯನ್ನು ನೀಡಿದ್ದಾರೆ. ಎಲ್ಲಾ ಕೊರೊನಾ ಪಾಸಿಟಿವ್ ಬಂದ ರೋಗಿಗಳಿಗೆ ಸೆಂಟ್ರಲ್ ಜೈಲಿನ ವಿಶೇಷ ಐಸೋಲೇಶನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಶಾಖಪಟ್ಟಣಂ ಸೆಂಟ್ರಲ್ ಜೈಲ್‌ನ ಪೊಲೀಸ್ ಅಧೀಕ್ಷಕ ರಾಹುಲ್ ಈ ಬಗ್ಗೆ ಖಚಿತಪಡಿಸಿದ್ದಾರೆ. ಜೈಲಿನಲ್ಲಿದ್ದ 102 ಕೈದಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 57 ಜನರು ಕೊರೊನಾ ವೈರಸ್‌ಗೆ ತುತ್ತಾಗಿರುವುದು ಬೆಳಕಿಗೆ ಬಂದಿದೆ ಎಂದು ಅವರು ಮಾಹಿತಿಯನ್ನು ನೀಡಿದ್ದಾರೆ.

ಕೋವಿಡ್ 19 ವಿರುದ್ಧ ಖೋಡೆಸ್‌ನಿಂದ ವೈರಾನಾರ್ಮ್ ಔಷಧಿ, ಏನು ವಿಶೇಷ? ಕೋವಿಡ್ 19 ವಿರುದ್ಧ ಖೋಡೆಸ್‌ನಿಂದ ವೈರಾನಾರ್ಮ್ ಔಷಧಿ, ಏನು ವಿಶೇಷ?

ಕೆಲ ಕೈದಿಗಳಲ್ಲಿ ವಾರದ ಹಿಂದೆ ಜ್ವರ ಮುಂತಾದ ಕೊರೊನಾ ವೈರಸ್‌ನ ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ತಕ್ಷಣವೇ ಜೈಲಿನ ಒಳಗೆ ಕೊರೊನಾ ವೈರಸ್ ಪರೀಕ್ಷೆಗೆ ವ್ಯವಸ್ಥೆಯನ್ನು ಮಾಡಲಾಯಿತು ಎಂದು ಪೊಲೀಸ್ ಅಧೀಕ್ಷಕ ರಾಹುಲ್ ಮಾಹಿತಿಯನ್ನು ನೀಡಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ಎಲ್ಲರೂ ಆರೋಗ್ಯದಿಂದಿದ್ದಾರೆ. ಇಬ್ಬರು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು ನಿಗಾವಹಿಸಿದ್ದಾರೆ ಅವರು ತಿಳಿಸಿದ್ದಾರೆ.

ಇನ್ನು ಜೈಲಿನಲ್ಲಿ ಅಧಿಕಾರಿಗಳು ಎಲ್ಲಾ ರೀತಿಯ ಕೋವಿಡ್ ನಿಯಮಗಳನ್ನು ಪಾಲಿಸುತ್ತಿದ್ದು ಅಗತ್ಯಕ್ರಮಗಳನ್ನು ವಹಿಸಲಾಗುತ್ತಿದೆ ಎಂದು ತಿಳಿಸಿದ ಅವರು "ನಾವು ಕೈದಿಗಳಿಗೆ ಮಾಸ್ಕ್, ಸ್ಯಾನಿಟೈಸರ್‌ಗಳನ್ನು ನೀಡುತ್ತಿದ್ದೇವೆ. ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳನ್ನು ನೀಡಲಾಗುತ್ತಿದೆ. ಕೊರೊನಾ ವೈರಸ್ ದೃಢಪಟ್ಟ ಖೈದಿಗಳಿಗೆ ಪ್ರತ್ಯೇಕ ವಿಭಾಗದಲ್ಲಿ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಧೀಕ್ಷಕ ರಾಹುಲ್ ತಿಳಿಸಿದ್ದಾರೆ.

ಕೊರೊನಾಗೆ ಆಯುರ್ವೇದ ಮದ್ದು; ನೆಲ್ಲೂರಿನಲ್ಲಿ ಸೇರಿದ ಸಾವಿರಾರು ಜನಕೊರೊನಾಗೆ ಆಯುರ್ವೇದ ಮದ್ದು; ನೆಲ್ಲೂರಿನಲ್ಲಿ ಸೇರಿದ ಸಾವಿರಾರು ಜನ

ಅಧಿಕೃತ ವರದಿಯ ಪ್ರಕಾರ, ಆಂಧ್ರಪ್ರದೇಶದಲ್ಲಿ ಕೊರೊನಾ ವೈರಸ್‌ನ ಸಕ್ರಿಯ ಪ್ರಕರಣಗಳ ಸಂಖ್ಯೆ 2,09,134 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 15,21,142 ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ವೈರಸ್‌ಗೆ 9,800 ಜನರು ಆಂಧ್ರಪ್ರದೇಶದಲ್ಲಿ ಪ್ರಾಣಕಳೆದುಕೊಂಡಿದ್ದಾರೆ.

English summary
57 prisoners of Visakhapatnam Central Jail test coronavirus positive jail authorities said on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X