• search
  • Live TV
ಅಮರಾವತಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತೆಲಂಗಾಣ ಆಯ್ತು, ನೆರೆಯ ಆಂಧ್ರದಲ್ಲಿಯೂ ಕಾಮುಕರ ಅಟ್ಟಹಾಸ: ವೃದ್ಧೆಯ ಅತ್ಯಾಚಾರ, ಕೊಲೆ

|

ಕಾಕಿನಾಡ, ಡಿಸೆಂಬರ್ 3: ತೆಲಂಗಾಣದಲ್ಲಿ ಪಶುವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣ ದೇಶವನ್ನೇ ತಲ್ಲಣಗೊಳಿಸಿದೆ. ಅದರ ನಡುವೆ ಮತ್ತೊಂದು ಭೀಕರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನೆರೆಯ ಆಂಧ್ರಪ್ರದೇಶದಲ್ಲಿ ನಡೆದಿದೆ.

ಕಾಮುಕರಿಗೆ ಮಹಿಳೆಯರ ವಯಸ್ಸಿನ ಭೇದವೂ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ತೆಲಂಗಾಣದಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿದ್ದರೆ, ಆ ಘಟನೆಯ ನಂತರ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಹಲವು ಪ್ರಕರಣಗಳು ವರದಿಯಾಗಿದ್ದವು. ಆಂಧ್ರಪ್ರದೇಶದ ಕಾಕಿನಾಡದ ಗ್ರಾಮವೊಂದರಲ್ಲಿ 60 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ನಡೆಸಲಾಗಿದೆ.

ಹೈದರಾಬಾದ್ ಅತ್ಯಾಚಾರ ಪ್ರಕರಣ: ಜನರು ಮಾಡುತ್ತಿರುವುದೇನು ಗೊತ್ತೇ?ಹೈದರಾಬಾದ್ ಅತ್ಯಾಚಾರ ಪ್ರಕರಣ: ಜನರು ಮಾಡುತ್ತಿರುವುದೇನು ಗೊತ್ತೇ?

ವೃದ್ಧೆಯ ಮನೆಯಲ್ಲಿಯೇ ಅತ್ಯಾಚಾರ ಮತ್ತು ಕೊಲೆ ನಡೆದಿದೆ. ಮನೆಯನ್ನು ಪರಿಶೀಲನೆ ನಡೆಸಿದ ಪೊಲೀಸರಿಗೆ, ಆರೋಪಿಗಳು ತಮ್ಮ ಸುಳಿವು ಶ್ವಾನದಳಕ್ಕೂ ಗೊತ್ತಾಗಬಾರದು ಎಂಬ ಉದ್ದೇಶದಿಂದ ಮನೆಯ ತುಂಬಾ ಖಾರದಪುಡಿ ಚೆಲ್ಲಿ ಹೋಗಿರುವುದು ಕಂಡುಬಂದಿದೆ.

12 ಗಂಟೆಯಲ್ಲಿಯೇ ಭೇದಿಸುತ್ತೇವೆ

12 ಗಂಟೆಯಲ್ಲಿಯೇ ಭೇದಿಸುತ್ತೇವೆ

'ಮಹಿಳೆಯ ಮೇಲೆ ಸೋಮವಾರ ರಾತ್ರಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಮೂವರು ಶಂಕಿತರನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ನಮಗೆ ಕೆಲವು ಸುಳಿವುಗಳು ದೊರೆತಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ನಾವು 12 ಗಂಟೆಯಲ್ಲಿಯೇ ಭೇದಿಸುತ್ತೇವೆ' ಎಂದು ಪೊಲೀಸ್ ವರಿಷ್ಠಾಧಿಕಾರಿ ನಯೀಮ್ ಅಸ್ಮಿ ತಿಳಿಸಿದ್ದಾರೆ.

70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ

70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಸೋನ್‌ಭದ್ರಾ ಜಿಲ್ಲೆಯಲ್ಲಿ 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ವ್ಯಕ್ತಿಯೊಬ್ಬನ್ನು ಬಂಧಿಸಲಾಗಿದೆ. ಸಂತ್ರಸ್ತ ವೃದ್ಧೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ 27 ವರ್ಷದ ಯುವಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಘಟನೆ ಭಾನುವಾರ ನಡೆದಿದೆ ಎಂದು ವೃತ್ತ ಅಧಿಕಾರಿ ಗ್ಯಾನ್ ಪ್ರಕಾಶ್ ರೈ ತಿಳಿಸಿದ್ದಾರೆ.

ನಿರ್ಭಯಾ ಅತ್ಯಾಚಾರಿಗೆ ತಿಹಾರ್ ಜೈಲಿನಲ್ಲಿ ಗಲ್ಲುಶಿಕ್ಷೆ ಅಸಾಧ್ಯ!ನಿರ್ಭಯಾ ಅತ್ಯಾಚಾರಿಗೆ ತಿಹಾರ್ ಜೈಲಿನಲ್ಲಿ ಗಲ್ಲುಶಿಕ್ಷೆ ಅಸಾಧ್ಯ!

ಕಾರ್ಪೆಂಟರ್ ವೃತ್ತಿಯ ಆರೋಪಿ

ಕಾರ್ಪೆಂಟರ್ ವೃತ್ತಿಯ ಆರೋಪಿ

ಅತ್ಯಾಚಾರ ಆರೋಪಿಯನ್ನು ಸೋಮವಾರ ಬಂಧಿಸಲಾಗಿದೆ. ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯು ಕಾರ್ಪೆಂಟರ್ ವೃತ್ತಿ ಮಾಡುತ್ತಿದ್ದು, ಮಹಿಳೆ ಕೂಲಿ ಕಾರ್ಮಿಕರಾಗಿದ್ದಾರೆ. ಇಬ್ಬರೂ ದಲಿತ ಸಮುದಾಯಕ್ಕೆ ಸೇರಿದವರು ಎಂದು ಹೇಳಿದ್ದಾರೆ.

ಪೊಲೀಸ್ ವಶಕ್ಕೆ ಮನವಿ

ಪೊಲೀಸ್ ವಶಕ್ಕೆ ಮನವಿ

ತೆಲಂಗಾಣದಲ್ಲಿ 26 ವರ್ಷದ ಪಶುವೈದ್ಯೆಯ ಮೇಲೆ ದುಷ್ಕರ್ಮಿಗಳ ಗುಂಪು ಅತ್ಯಾಚಾರ ನಡೆಸಿ ಕೊಲೆ ಮಾಡಿದ ಘಟನೆಯ ನಂತರ ದೇಶದ ಹಲವು ಕಡೆ ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ತೆಲಂಗಾಣದ ಘಟನೆ ವ್ಯಾಪಕ ಚರ್ಚೆಗೆ ಒಳಗಾಗಿದ್ದು, ದೇಶದಾದ್ಯಂತ ಪ್ರತಿಭಟನೆಗಳು ನಡೆದಿವೆ. ಈ ಪ್ರಕರಣದ ನಾಲ್ವರು ಆರೋಪಿಗಳನ್ನು 10 ವರ್ಷಗಳ ಕಾಲ ತಮ್ಮ ವಶಕ್ಕೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಪಶುವೈದ್ಯೆ ಮೇಲೆ ಅತ್ಯಾಚಾರ; ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?ಪಶುವೈದ್ಯೆ ಮೇಲೆ ಅತ್ಯಾಚಾರ; ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

English summary
A 60 year old lady was raped and murdered in her house near Kakinada in Andhra Pradesh on Monday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X