ಆಂಧ್ರ ಪ್ರದೇಶದಲ್ಲಿ 24 ಗಂಟೆಗಳಲ್ಲೇ 6051 ಮಂದಿಗೆ ಕೊರೊನಾವೈರಸ್!
ಅಮರಾವತಿ, ಜುಲೈ.27: ದಕ್ಷಿಣ ಭಾರತದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು ಪ್ರತಿನಿತ್ಯ ಗಗನಮುಖಿಯಾಗಿ ಏರಿಕೆಯಾಗುತ್ತಿದೆ. ಆಂಧ್ರ ಪ್ರದೇಶದಲ್ಲಿ ಕೊವಿಡ್-19 ಅಂಕಿ-ಸಂಖ್ಯೆಗಳು ಜನರನ್ನು ಬೆಚ್ಚಿ ಬೀಳಿಸುತ್ತಿವೆ.
ಆಂಧ್ರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲೇ 6051 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ಖಾತ್ರಿಯಾಗಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 102349ಕ್ಕೆ ಏರಿಕೆಯಾಗಿದೆ.
ಕೊರೊನಾವೈರಸ್ ಸೋಂಕಿತರ ಅಂಕಿ-ಸಂಖ್ಯೆಗೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಆಂಧ್ರ ಪ್ರದೇಶದಲ್ಲಿ ಇದುವರೆಗೂ 49558 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ರಾಜ್ಯದಲ್ಲಿ 1090 ಮಂದಿ ಪ್ರಾಣ ಬಿಟ್ಟಿದ್ದಾರೆ.

ಭಾರತದಲ್ಲಿ ಒಂದೇ ದಿನ 49,931 ಮಂದಿಗೆ ಕೊರೊನಾವೈರಸ್:
ಭಾರತದಲ್ಲಿ ಹೊಸದಾಗಿ 49,931 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. 24 ಗಂಟೆಗಳಲ್ಲಿ 708 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 14,35,453 ಕೊರೊನಾ ಸೋಂಕಿತ ಪ್ರಕರಣಗಳಿವೆ. 4,85,114 ಸಕ್ರಿಯ ಪ್ರಕರಣಗಳಿವೆ. 9,17,568 ಮಂದಿ ಗುಣಮುಖರಾಗಿದ್ದಾರೆ. 32,771 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಜುಲೈ 26ರವರೆಗೆ 1,68,06,803 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಭಾನುವಾರ ಒಂದೇ ದಿನ 5,15,472 ಮಂದಿಯ ಪರೀಕ್ಷೆ ನಡೆಸಲಾಗಿತ್ತು ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ತಿಳಿಸಿದೆ.












Click it and Unblock the Notifications