Get Updates
Get notified of breaking news, exclusive insights, and must-see stories!

ತಿರುಪತಿ: ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರು ಪರಿಹಾರ

ಅಮರಾವತಿ, ಮಾರ್ಚ್ 27: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಭಾಕರಪೇಟ್‌ನಲ್ಲಿ ಶನಿವಾರ ರಾತ್ರಿ 11.30 ರ ಸುಮಾರಿಗೆ ಬಸ್ ಬಂಡೆಯೊಂದರಿಂದ ಕಂದರಕ್ಕೆ ಬಿದ್ದಿದೆ. ಪರಿಣಾಮವಾಗಿ, ಏಳು ಜನರು ಮೃತಪಟ್ಟಿದ್ದಾರೆ ಮತ್ತು 45 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಭಾಕರಪೇಟ್ ದೇವಾಲಯದ ಪಟ್ಟಣವಾದ ತಿರುಪತಿಯಿಂದ ಕೇವಲ 25 ಕಿಲೋಮೀಟರ್ ದೂರದಲ್ಲಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ತಿರುಪತಿಯ ಪೊಲೀಸ್ ವರಿಷ್ಠಾಧಿಕಾರಿ, "ಚಾಲಕರ ನಿರ್ಲಕ್ಷ್ಯದಿಂದ ಬಸ್ ಬಂಡೆಗೆ ಬಡಿದು ಕಂದರಕ್ಕೆ ಬಿದ್ದು ಅಪಘಾತ ಸಂಭವಿಸಿದೆ, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ" ಎಂದು ಹೇಳಿದರು.

ಅನಂತಪುರ ಜಿಲ್ಲೆಯ ಧರ್ಮಾವರಂನಿಂದ ಚಿತ್ತೂರಿನ ನಗರಿ ಬಳಿಯ ಗ್ರಾಮಕ್ಕೆ ಖಾಸಗಿ ಬಸ್ ತೆರಳುತ್ತಿತ್ತು. ಬಸ್‌ನಲ್ಲಿ 52 ಜನರ ಮದುವೆ ಸಮಾರಂಭದ ಅತಿಥಿಗಳಿದ್ದರು. ಘಾಟ್ ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಬಸ್ ಆಯತಪ್ಪಿ ಕಣಿವೆಗೆ ಬಿದ್ದಿದೆ.

7 People Killed and 45 Injured in a Bus Accident Last Night in Chittoor

ಪೊಲೀಸರು, ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಶನಿವಾರ ರಾತ್ರಿಯೇ ಆರಂಭಿಸಿದರು. ಆದರೆ, ಕಣಿವೆ 50 ಅಡಿ ಆಳವಿರುವುದರಿಂದ ಕತ್ತಲೆಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಬೆಳಗ್ಗೆಯೂ ಕಾರ್ಯಾಚರಣೆ ಮುಂದುವರೆದಿದೆ. ಬದುಕುಳಿದವರನ್ನು ಹಗ್ಗದ ಸಹಾಯದಿಂದ ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಆಘಾತ ವ್ಯಕ್ತಪಡಿಸಿದ ಆಂಧ್ರಪ್ರದೇಶ ಸಿಎಂ
ತಿರುಪತಿ ಬಳಿಯ ಭಾಕರಪೇಟದಲ್ಲಿ ಖಾಸಗಿ ಬಸ್ ಅಪಘಾತದಲ್ಲಿ ಮದುವೆ ದಿಬ್ಬಣದ ಬಸ್ ಕಂದಕಕ್ಕೆ ಉರುಳಿದ ಘಟನೆ ಬಗ್ಗೆ ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದಾರೆ.

ಬಸ್ ಅವಘಡಕ್ಕೆ ಕಾರಣ ಮತ್ತು ರಕ್ಷಣಾ ಕಾರ್ಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ, ರಕ್ಷಣಾ ಕಾರ್ಯ ಹಾಗೂ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಕೊಡಿಸುವ ಬಗ್ಗೆ ಆದ್ಯತೆ ನೀಡಲಾಗಿದೆ ಎಂದು ಸಿಎಂ ಕಚೇರಿ ಹೇಳಿದೆ.

ಅಪಘಾತ ಸಂಭವಿಸಿದ ತಕ್ಷಣ ಜಿಲ್ಲಾಧಿಕಾರಿಗಳು ಮತ್ತು ಎಸ್ಪಿಗಳು ಅಪಘಾತದ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಿದ್ದಾರೆ. ಚಂದ್ರಗಿರಿ ಶಾಸಕ ಚೇವಿರೆಡ್ಡಿ ಭಾಸ್ಕರ್ ರೆಡ್ಡಿ ಕೂಡ ಪರಿಹಾರ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ ಎಂದು ಸಿಎಂಗೆ ತಿಳಿಸಲಾಗಿದೆ. ಗಾಯಗೊಂಡವರಿಗೆ ತಿರುಪತಿಯ ಹತ್ತಿರದ ಸ್ಥಳೀಯ ಆಸ್ಪತ್ರೆಗಳಾದ ಸ್ವಿಮ್ಸ್, ರುಯಾ ಮತ್ತು ಬರ್ಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಎಪಿ ಸರ್ಕಾರ ತಲಾ 2 ಲಕ್ಷ ಪರಿಹಾರ ಘೋಷಿಸಿದೆ. ಗಾಯಗೊಂಡವರಿಗೆ 50 ಸಾವಿರ ಪರಿಹಾರ ನೀಡಲು ಸಿಎಂ ಮುಂದಾಗಿದ್ದಾರೆ. ಜತೆಗೆ, ಗಾಯಾಳುಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವಂತೆ ಆರೋಗ್ಯ ತಜ್ಞರಿಗೆ ಸಿಎಂ ಸೂಚಿಸಿದರು. ಸಂತ್ರಸ್ತರು ಚೇತರಿಸಿಕೊಳ್ಳುವವರೆಗೆ ಕಾವಲು ಕಾಯುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+