ಆಂಧ್ರ ಪ್ರದೇಶದಲ್ಲಿ ದಾಖಲೆ ಬರೆದ ಕೊರೊನಾವೈರಸ್ ಪ್ರಕರಣ

ಅಮರಾವತಿ, ಜುಲೈ.26: ಕೊರೊನಾವೈರಸ್ ಸೋಂಕು ದಕ್ಷಿಣ ಭಾರತದಲ್ಲಿ ಭಾರಿ ಹೊಡೆತ ಕೊಡುತ್ತಿದೆ. ಪ್ರತಿನಿತ್ಯ ದಾಖಲೆಯ ಮಟ್ಟದಲ್ಲಿ ಸೋಂಕಿತ ಪ್ರಕರಣಗಳು ವರದಿಯಾಗುತ್ತಿರುವುದು ಸಾರ್ವಜನಿಕರ ಎದೆಯಲ್ಲಿ ನಡುಕ ಹುಟ್ಟಿಸುತ್ತಿದೆ.
ಆಂಧ್ರ ಪ್ರದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಮತ್ತೊಂದು ದಾಖಲೆ ಬರೆದಿವೆ. ಕಳೆದ 24 ಗಂಟೆಗಳಲ್ಲೇ 7627 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

ಆಂಧ್ರಪ್ರದೇಶದಲ್ಲಿ ಒಂದೇ ದಿನ ದಾಖಲೆಯ ಕೊರೊನಾ ಕೇಸ್ ಪತ್ತೆ
ಕೊರೊನಾವೈರಸ್ ಸೋಂಕಿತರ ಅಂಕಿ-ಸಂಖ್ಯೆಗೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 96,298ಕ್ಕೆ ಏರಿಕೆಯಾಗಿದೆ.

7627 New Coronavirus Cases Reported in Andhra Pradesh Today, State Tally Rise to 96298

ರಾಜ್ಯದಲ್ಲಿ ಒಂದೇ ದಿನ 3041 ಸೋಂಕಿತರು ಗುಣಮುಖ:
ಆಂಧ್ರ ಪ್ರದೇಶದಲ್ಲಿ 24 ಗಂಟೆಗಳಲ್ಲೇ 3041 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 96,298 ಸೋಂಕಿತ ಪ್ರಕರಣಗಳ ಪೈಕಿ ಇದುವರೆಗೂ 46,301 ಮಂದಿ ಗುಣಮುಖರಾಗಿದ್ದಾರೆ. ಇನ್ನು, ಮಹಾಮಾರಿಗೆ ರಾಜ್ಯದಲ್ಲಿ ಒಟ್ಟು 1041 ಜನರು ಪ್ರಾಣ ಬಿಟ್ಟಿದ್ದಾರೆ.
ಭಾರತದಲ್ಲಿ ಒಂದೇ ದಿನ 48661 ಜನರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 1385522ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 705 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆಯು 32,063ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತರ ಪೈಕಿ 8,85,577 ಸೋಂಕಿತರು ಗುಣಮುಖರಾಗಿದ್ದರೆ, 4,67,882 ಮಂದಿ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+