ಆಂಧ್ರ ಪ್ರದೇಶದಲ್ಲಿ ಕೊರೊನಾವೈರಸ್ ಅಂಟಿದ್ದು ಅದೆಷ್ಟು ಮಂದಿಗೆ?
ಅಮರಾವತಿ, ಆಗಸ್ಟ್.03: ಕರ್ನಾಟಕ, ತಮಿಳುನಾಡು ಅಷ್ಟೇ ಅಲ್ಲ ಆಂಧ್ರ ಪ್ರದೇಶದಲ್ಲಿ ಕೊರೊನಾವೈರಸ್ ಅಟ್ಟಹಾಸವೇನೂ ಕಡಿಮೆಯಾಗುತ್ತಿಲ್ಲ. ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 7822 ಮಂದಿಗೆ ಮಹಾಮಾರಿ ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ದೃಢಪಟ್ಟಿದೆ.
Recommended Video
ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಈ ವೇಳೆ ಆಂಧ್ರ ಪ್ರದೇಶದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ 166586 ಏರಿಕೆಯಾಗಿರುವುದು ಜನರಲ್ಲಿ ನಡುಕ ಹುಟ್ಟಿಸುತ್ತಿದೆ.
ಕಳೆದ 24 ಗಂಟೆಗಳಲ್ಲಿ 5786 ಮಂದಿ ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿ ಇದುವರೆಗೂ 88672 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 76377 ಮಂದಿ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾಮಾರಿಗೆ ಒಂದೇ ದಿನ 63 ಮಂದಿ ಪ್ರಾಣ ಬಿಟ್ಟಿದ್ದು, ಆಂಧ್ರ ಪ್ರದೇಶದಲ್ಲಿ ಕೊರೊನಾವೈರಸ್ ನಿಂದ ಸಾವಿನ ಮನೆ ಸೇರಿದವರ ಸಂಖ್ಯೆ 1537ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಕಂಡೀಷನ್:
ಭಾರತದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು ಯಥಾವತ್ತಾಗಿ ಏರಿಕೆಯಾಗುತ್ತಿದೆ. ಸೋಮವಾರದ ರಾತ್ರಿ ವೇಳೆಗೆ ದೇಶದಲ್ಲಿ 47,454 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ಪತ್ತೆಯಾಗಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ ಈಗಾಗಲೇ 18,52,156ಕ್ಕೆ ಏರಿಕೆಯಾಗಿದೆ. 808 ಮಂದಿ ಕೊರೊನಾವೈರಸ್ ನಿಂದ ಪ್ರಾಣ ಬಿಟ್ಟಿದ್ದರೆ, ದೇಶದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆಯು 38,969ಕ್ಕೆ ಹೆಚ್ಚಿದೆ.
ಭಾರತದಲ್ಲಿನ ಒಟ್ಟು 18,52,156 ಕೊವಿಡ್-19 ಸೋಂಕಿತ ಪ್ರಕರಣಗಳ ಪೈಕಿ 12,29,171 ಸೋಂಕಿತರಿಗೆ ನೀಡಿದ ಚಿಕಿತ್ಸೆ ಫಲಿಸಿದ್ದು, ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ 5,84,016 ಸಕ್ರಿಯ ಕೊವಿಡ್-19 ಪ್ರಕರಣಗಳಿವೆ.












Click it and Unblock the Notifications