ಆಂಧ್ರ ಪ್ರದೇಶದಲ್ಲಿ ಒಂದೇ ದಿನ 9747 ಮಂದಿಗೆ ಕೊವಿಡ್-19
ಅಮರಾವತಿ, ಆಗಸ್ಟ್.04: ದಕ್ಷಿಣ ಭಾರತದ ಒಂದಿಲ್ಲೊಂದು ರಾಜ್ಯಗಳಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದಾಖಲೆಯ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಮಂಗಳವಾರ ಆಂಧ್ರ ಪ್ರದೇಶದಲ್ಲಿ ದಾಖಲೆ ಮಟ್ಟದ ಪ್ರಕರಣಗಳು ಪತ್ತೆಯಾಗಿವೆ.
ಆಂಧ್ರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 9747 ಮಂದಿಗೆ ಕೊರೊನಾವೈರಸ್ ಮಹಾಮಾರಿ ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ದೃಢಪಟ್ಟಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಆಂಧ್ರ ಪ್ರದೇಶದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ 176333 ಏರಿಕೆಯಾಗಿರುವುದು ಜನರಲ್ಲಿ ನಡುಕ ಹುಟ್ಟಿಸುತ್ತಿದೆ. ಆದರೆ ಒಂದೇ ದಿನ ರಾಜ್ಯದಲ್ಲಿ 6,953 ಮಂದಿ ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿ ಇದುವರೆಗೂ 95,625 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಕೊರೊನಾವೈರಸ್ ಮರಣಮೃದಂಗ:
ಆಂಧ್ರ ಪ್ರದೇಶದಲ್ಲಿ ಸೋಂಕಿತ ಪ್ರಕರಣಗಳ ಜೊತೆಗೆ ಸಾವಿನ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಮಹಾಮಾರಿಗೆ ಒಂದೇ ದಿನ 67 ಮಂದಿ ಪ್ರಾಣ ಬಿಟ್ಟಿದ್ದು, ಆಂಧ್ರ ಪ್ರದೇಶದಲ್ಲಿ ಕೊರೊನಾವೈರಸ್ ನಿಂದ ಇದುವರೆಗೂ ಸಾವಿನ ಮನೆ ಸೇರಿದವರ ಸಂಖ್ಯೆ 1604ಕ್ಕೆ ಏರಿಕೆಯಾಗಿದೆ. ಇನ್ನು ಉಳಿದಂತೆ 79,104 ಮಂದಿ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.












Click it and Unblock the Notifications