ವಿಪಕ್ಷ ಶಾಸಕರನ್ನು ಗೃಹ ಬಂಧನದಲ್ಲಿರಿಸಿದ ಸಿಎಂ ಜಗನ್
ಅಮರಾವತಿ, ಡಿಸೆಂಬರ್ 27: ರೈತರ ಪ್ರತಿಭಟನೆಯಲ್ಲಿ ಭಾಗಿಯಾಗದಂತೆ ತಡೆಯಲು ಟಿಡಿಪಿ ಪಕ್ಷದ ಇಬ್ಬರು ಶಾಸಕರನ್ನು ಜಗನ್ ಮೋಹನ್ ರೆಡ್ಡಿ ಸರ್ಕಾರ ಗೃಹ ಬಂಧನದಲ್ಲಿರಿಸಿದೆ.
ಇಂದು ಜಗನ್ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದ್ದು ಆಂಧ್ರಕ್ಕೆ ಮೂರು ರಾಜಧಾನಿ ಮಾಡುವ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ. ಮೂರು ರಾಜಧಾನಿಯಲ್ಲಿ ಅಮರಾವತಿ ನಗರ ಸೇರಿಲ್ಲವಾದ್ದರಿಂದ ಅಮರಾವತಿ ನಿರ್ಮಾಣಕ್ಕೆ ಭೂಮಿ ಕೊಟ್ಟಿದ್ದ ರೈತರು ಇದರ ವಿರುದ್ಧವಾಗಿ ಕೆಲವು ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
ರೈತರು ಮಾಡುತ್ತಿರುವ ಪ್ರತಿಭಟನೆಯಲ್ಲಿ ಟಿಡಿಪಿ ಶಾಸಕರು ಭಾಗವಹಿಸುವುದನ್ನು ತಡೆಯಬೇಕೆಂಬ ಕಾರಣದಿಂದ ವಿಜಯವಾಡದ ಶಾಸಕರಾದ ಕೆಸಿನೇನಿ ಶ್ರೀನಿವಾಸ್, ಶಾಸಕ ಬುದ್ಧ ವೆಂಕನ್ನ ಅವರನ್ನು ಗೃಹ ಬಂಧನದಲ್ಲಿ ಇಡಲಾಗಿದೆ.

ಈ ಹಿಂದೆ ಟಿಡಿಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರೈತರಿಂದ ಜಮೀನು ಪಡೆದು ಅಮರಾವತಿ ನಗರ ನಿರ್ಮಾಣ ಮಾಡಿತ್ತು. ಇದನ್ನೇ ಆಂಧ್ರಪ್ರದೇಶದ ರಾಜಾಧಾನಿಯನ್ನಾಗಿ ಮಾಡಲು ನಿಶ್ಚಯಿಸಿತ್ತು. ಆದರೆ ಚುನಾವಣೆ ನಂತರ ಬಂದ ವೈಎಸ್‌ಆರ್‌ಕಾಂಗ್ರೆಸ್‌ನ ಜಗನ್ ಸರ್ಕಾರ, ಅಮರಾವತಿಯನ್ನು ಕೈಬಿಟ್ಟು ಮೂರು ರಾಜಧಾನಿಯನ್ನು ಮಾಡಲು ಹೊರಟಿದೆ, ಇದು ಅಮರಾವತಿಗೆ ಜಮೀನು ನೀಡಿದ್ದ ರೈತರನ್ನು ಕೆರಳಿಸಿದೆ.
'ರಾಜಧಾನಿ ಪರಿರಕ್ಷಣಾ ಸಮಿತಿ' ಹೆಸರಿನಲ್ಲಿ ಟಿಡಿಪಿ ಪ್ರತಿಭಟನೆಗೆ ಇಳಿದಿದ್ದು, ರೈತರೊಂದಿಗೆ ಕೈಜೋಡಿಸಿ ಪ್ರತಿಭಟನೆಗೆ ಉಗ್ರರೂಪ ನೀಡುತ್ತಿದೆ. ಇದು ಜಗನ್ ಸರ್ಕಾರವನ್ನು ಚಿಂತೆಗೀಡು ಮಾಡಿರುವ ಕಾರಣ, ಪ್ರತಿಭಟನೆಯನ್ನು ಹತ್ತಿಕ್ಕಲು ಟಿಡಿಪಿ ಶಾಸಕರಿಗೆ ಗೃಹ ಬಂಧನ ವಿಧಿಸಲಾಗಿದೆ.
ಜಗನ್ ಸರ್ಕಾರದ ಈ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಚಂದ್ರಬಾಬು ನಾಯ್ಡು, 'ಏಕಪಕ್ಷೀಯ, ಸರ್ವಾಧಿಕಾರಿ ಮತ್ತು ದಮನಿಸುವ ಪ್ರವೃತ್ತಿಯನ್ನು ಸರ್ಕಾರ ಪ್ರದರ್ಶಿಸುತ್ತಿದೆ' ಎಂದಿದ್ದಾರೆ.
ಇಂದು ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಆಂಧ್ರದ ಮೂರು ಜಿಲ್ಲೆಗಳನ್ನು ರಾಜ್ಯದ ರಾಜಧಾನಿಯನ್ನಾಗಿ ಪ್ರಕಟಿಸಲಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications