ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನಿಲ ಸೋರಿಕೆಯಿಂದ ಮೃತಪಟ್ಟವರಿಗೆ 30 ಕೋಟಿ ಬಿಡುಗಡೆ ಮಾಡಿದ ಸಿಎಂ ಜಗನ್

|
Google Oneindia Kannada News

ಅಮರಾವತಿ, ಮೇ 8: ವಿಶಾಖಪಟ್ಟಣದಲ್ಲಿ ನಡೆದ ಅನಿಲ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರಕ್ಕೆ ಸಂಬಂಧಪಟ್ಟಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶುಕ್ರವಾರ 30 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದಾರೆ.

ಗುರುವಾರ ಬೆಳಿಗ್ಗೆ ವಿಶಾಖಪಟ್ಟಣಂ ಹೊರವಲಯದ ಆರ್ ಆರ್ ವೆಂಕಟಾಪುರಂ ಬಳಿಯ ಎಲ್‌ ಜಿ ಪಾಲಿಮರ್ಸ್ ಎಂಬ ಎಂಎನ್‌ಸಿ ಕಂಪೆನಿಯ ಕಾರ್ಖಾನೆಯಲ್ಲಿ ವಿಷಾನಿಲ ಸ್ಫೋಟವಾಗಿತ್ತು. ಈ ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದರು. ಸುಮಾರು 300 ಜನರು ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಗ್ಯಾಸ್ ಸೋರಿಕೆಯಿಂದ ಮೃತ ಪಟ್ಟ ಕುಟುಂಬಕ್ಕೆ 1 ಕೋಟಿ ಪರಿಹಾರಗ್ಯಾಸ್ ಸೋರಿಕೆಯಿಂದ ಮೃತ ಪಟ್ಟ ಕುಟುಂಬಕ್ಕೆ 1 ಕೋಟಿ ಪರಿಹಾರ

ಘಟನೆ ಬಳಿಕ ಆಸ್ಪತ್ರೆಗೆ ಭೇಟಿ ನೀಡಿದ್ದ ಜಗನ್ ಮೋಹನ್ ರೆಡ್ಡಿ ಮೃತಕುಟುಂಬಗಳಿಗೆ ಸಾಂತ್ವನ ಹೇಳಿ, ತಲಾ ಒಂದು ಕೋಟಿ ಪರಿಹಾರ ಘೋಷಿಸಿದ್ದರು. ತೀವ್ರವಾಗಿ ಗಾಯಗೊಂಡು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ 10 ಲಕ್ಷ ನೀಡುವುದಾಗಿ ಪ್ರಕಟಿಸಿದ್ದರು.

Andhra Pradesh Govt Released 30 Crore For for ex gratia

ಎರಡು ಅಥವಾ ಮೂರು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ 1 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 25 ಸಾವಿರ ಪರಿಹಾರ ಘೋಷಿಸಿದ್ದರು. ಇನ್ನು ಘಟನೆಯಲ್ಲಿ ಬಾಧಿತ ಎಲ್ಲ ಕುಟುಂಬಗಳಿಗೆ ಹತ್ತು ಸಾವಿರ ನೀಡುವುದಾಗಿ ಹೇಳಿದ್ದರು. ಜೊತೆಗೆ ಮೃತ ಕುಟುಂಬದ ಒಬ್ಬ ಸದಸ್ಯರಿಗೆ ಕೆಲಸ ನೀಡುವುದಾಗಿ ಭರವಸೆ ನೀಡಿದ್ದರು.

ವಿಶಾಖಪಟ್ಟಣಂ ಮಹಾ ಅನಿಲ ದುರಂತಕ್ಕೆ ಕಾರಣ ಏನು?ವಿಶಾಖಪಟ್ಟಣಂ ಮಹಾ ಅನಿಲ ದುರಂತಕ್ಕೆ ಕಾರಣ ಏನು?

ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆಯೇ ಮೃತ ಕುಟುಂಬಗಳಿಗೆ ಒಂದು ಕೋಟಿ ಚೆಕ್ ವಿತರಿಸಿದ್ದರು. ಕೊಟ್ಟ ಮಾತಿನಂತೆ ಆಂಧ್ರ ಸಿಎಂ ಜಗನ್ ಪರಿಹಾರ ಹಣವನ್ನು ಬಿಡುಗಡೆಗೊಳಿಸಿದ್ದು, ಜನಪರ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ.

English summary
Andhra Pradesh CM Jagan mohan reddy sanction 30 crore for for ex gratia.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X