ಗ್ಯಾಸ್ ಸೋರಿಕೆಯಿಂದ ಮೃತ ಪಟ್ಟ ಕುಟುಂಬಕ್ಕೆ 1 ಕೋಟಿ ಪರಿಹಾರ
ವಿಶಾಖಪಟ್ಟಣ, ಮೇ 7: ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಗುರುವಾರ ಬೆಳಿಗ್ಗೆ ಅನಿಲ ಸೋರಿಕೆಯಾಗಿ ಈವರೆಗೂ 11 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನು ಹಲವು ಜನರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
Recommended Video
ಘಟನೆ ಬಗ್ಗೆ ವಿಷಯ ತಿಳಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಈ ವೇಳೆ ಈ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ 1 ಕೋಟಿ ಪರಿಹಾರ ಧನ ಘೋಷಿಸಿದರು.
An ex-gratia of Rs 1 crore each to be given to the families of the deceased in the #VizagGasLeakage incident. Ex gratia of Rs 10 lakhs to be given to those on ventilator: Andhra Pradesh Chief Minister YS Jaganmohan Reddy pic.twitter.com/KgtxGiPdbD
— ANI (@ANI) May 7, 2020
ಇನ್ನು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 10 ಲಕ್ಷ ಪರಿಹಾರ ಪ್ರಕಟಿಸಿದ್ದಾರೆ. ಇನ್ನು ಪ್ರಾಥಮಿಕ ಚಿಕಿತ್ಸೆ ಪಡೆಯುವ ಕುಟುಂಬಗಳಿಗೆ 25 ಸಾವಿರ, ಎರಡು ಅಥವಾ ಮೂರು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ 1 ಲಕ್ಷ ನೀಡಲು ಸರ್ಕಾರ ತೀರ್ಮಾನಿಸಿದೆ.

ವರದಿಗಳ ಪ್ರಕಾರ ಇಂದು ಮುಂಜಾನೆ 3 ಗಂಟೆಗೆ ಗೋಪಾಲಪಟ್ಟಣಂ ಬಳಿ ಇರುವ ಆರ್.ಆರ್ ವೆಂಕಟಪುರಂ ನಲ್ಲಿನ ಎಲ್.ಜಿ ಪಾಲಿಮರ್ಸ್ ಇಂಡಸ್ಟ್ರಿಯಲ್ಲಿ ವಿಷಾನಿಲ ಸೋರಿಕೆಯಾಗಿದೆ. ಇದರಿಂದ 5 ಸಾವಿರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications