ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ಯಾಸ್ ಸೋರಿಕೆಯಿಂದ ಮೃತ ಪಟ್ಟ ಕುಟುಂಬಕ್ಕೆ 1 ಕೋಟಿ ಪರಿಹಾರ

|
Google Oneindia Kannada News

ವಿಶಾಖಪಟ್ಟಣ, ಮೇ 7: ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಗುರುವಾರ ಬೆಳಿಗ್ಗೆ ಅನಿಲ ಸೋರಿಕೆಯಾಗಿ ಈವರೆಗೂ 11 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನು ಹಲವು ಜನರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

Recommended Video

ಬೇರೆ ರಾಜ್ಯಗಳ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಬೆಂಗಳೂರು ಕಮಿಷನರ್ ಹೇಳಿದ್ದೇನು? | Bhaskar Rao | Bengaluru

ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆ: 8 ಬಲಿ, 5000ಕ್ಕೂ ಅಧಿಕ ಮಂದಿ ಅಸ್ವಸ್ಥವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆ: 8 ಬಲಿ, 5000ಕ್ಕೂ ಅಧಿಕ ಮಂದಿ ಅಸ್ವಸ್ಥ

ಘಟನೆ ಬಗ್ಗೆ ವಿಷಯ ತಿಳಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಈ ವೇಳೆ ಈ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ 1 ಕೋಟಿ ಪರಿಹಾರ ಧನ ಘೋಷಿಸಿದರು.

ಇನ್ನು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 10 ಲಕ್ಷ ಪರಿಹಾರ ಪ್ರಕಟಿಸಿದ್ದಾರೆ. ಇನ್ನು ಪ್ರಾಥಮಿಕ ಚಿಕಿತ್ಸೆ ಪಡೆಯುವ ಕುಟುಂಬಗಳಿಗೆ 25 ಸಾವಿರ, ಎರಡು ಅಥವಾ ಮೂರು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ 1 ಲಕ್ಷ ನೀಡಲು ಸರ್ಕಾರ ತೀರ್ಮಾನಿಸಿದೆ.

Andhra Govt Announced 1 Crore Compensation For Vizag Gas Leakage Victims

ವರದಿಗಳ ಪ್ರಕಾರ ಇಂದು ಮುಂಜಾನೆ 3 ಗಂಟೆಗೆ ಗೋಪಾಲಪಟ್ಟಣಂ ಬಳಿ ಇರುವ ಆರ್.ಆರ್ ವೆಂಕಟಪುರಂ ನಲ್ಲಿನ ಎಲ್.ಜಿ ಪಾಲಿಮರ್ಸ್ ಇಂಡಸ್ಟ್ರಿಯಲ್ಲಿ ವಿಷಾನಿಲ ಸೋರಿಕೆಯಾಗಿದೆ. ಇದರಿಂದ 5 ಸಾವಿರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.

English summary
Rs 1 crore each to be given to the families of the deceased in the Vizag Gas Leakage incident - Andhra Pradesh Chief Minister YS Jaganmohan Reddy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X