ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಬಳಿಕ ಡಿಸ್ಚಾರ್ಜ್ ಆದವರಿಗೆ ತಲಾ 2 ಸಾವಿರ ಘೋಷಿಸಿದ ಆಂಧ್ರ

|
Google Oneindia Kannada News

ಅಮರಾವತಿ, ಏಪ್ರಿಲ್ 27: ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರಿಗೆ ತಲಾ 2 ಸಾವಿರ ನೀಡುವುದಾಗಿ ಆಂಧ್ರ ಪ್ರದೇಶ ಸರ್ಕಾರ ಘೋಷಿಸಿದೆ.

Recommended Video

Public creates Zero traffic from Mangaluru to Bengaluru to save child | Ambulance | Mangaluru

ಸೋಂಕಿತ ವ್ಯಕ್ತಿಗಳು ತಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಸಮರ್ಪಕವಾದ ಆಹಾರವನ್ನು ಖರೀದಿಸಲು ಈ ಹಣ ಬಳಕೆ ಮಾಡಿಕೊಳ್ಳಲಿ ಎಂದು ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಈ ಆದೇಶ ಹೊರಡಿಸಿದ್ದಾರೆ.

ಆಂಧ್ರಪ್ರದೇಶ ಗಡಿಯಲ್ಲಿ 7 ಅಡಿ ಎತ್ತರದ ತಡೆಗೋಡೆ ನಿರ್ಮಿಸಿದ ತಮಿಳುನಾಡುಆಂಧ್ರಪ್ರದೇಶ ಗಡಿಯಲ್ಲಿ 7 ಅಡಿ ಎತ್ತರದ ತಡೆಗೋಡೆ ನಿರ್ಮಿಸಿದ ತಮಿಳುನಾಡು

ರಾಜ್ಯ ಸರ್ಕಾರ ನೀಡಿರುವ ಅಧಿಕೃತ ಮಾಹಿತಿ ಪ್ರಕಾರ, ಈಗಾಗಲೇ ಆಂಧ್ರ ಪ್ರದೇಶದಲ್ಲಿ 231 ಜನರು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮತ್ತು ಸರ್ಕಾರ ಪ್ರಕಟ ಮಾಡಿರುವಂತೆ 2 ಸಾವಿರ ಧನಸಹಾಯವನ್ನು ಕೂಡ ಪಡೆದುಕೊಂಡಿದ್ದಾರಂತೆ.

Andhra Govt Announces 2 Thousand For Discharged COVID 19 Patients

ಆಂಧ್ರ ಪ್ರದೇಶದಲ್ಲಿ ಪ್ರಸ್ತುತ 1177 ಕೊರೊನಾ ಪ್ರಕರಣಗಳು ದಾಖಲಾಗಿದೆ. ಇದರಲ್ಲಿ 235 ಜನರು ಗುಣಮುಖರಾಗಿದ್ದಾರೆ. ಈವರೆಗೂ 31 ಜನರು ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇಂದು ಪ್ರಧಾನಿ ಮೋದಿ ಜೊತೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ವಿಡಿಯೊ ಕಾನ್ಫೆರೆನ್ಸ್ ಮೂಲಕ ಚರ್ಚೆ ನಡೆಸಿದರು. ರಾಜ್ಯದಲ್ಲಿನ ಪರಿಸ್ಥಿತಿ ಬಗ್ಗೆ ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ.

English summary
Andhra Pradesh Govt decides to extend financial assistance of Rs. 2,000 to each of the discharged COVID 19 patients for nutritious food to enhance immunity power.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X