ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈಎಸ್‌ಆರ್ ಕಾಂಗ್ರೆಸ್ ನಾಯಕರ ವಿರುದ್ಧ ಸಿಬಿಐ ತನಿಖೆಗೆ ಆಂಧ್ರ ಹೈಕೋರ್ಟ್ ಆದೇಶ

|
Google Oneindia Kannada News

ಅಮರಾವತಿ, ಅಕ್ಟೋಬರ್ 13: ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ನಾಯಕರ ವಿರುದ್ಧ ಸಿಬಿಐ ತನಿಖೆಗೆ ಆಂಧ್ರ ಹೈಕೋರ್ಟ್‌ ಆದೇಶ ನೀಡಿದೆ.

ಇದರಿಂದ ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರಕ್ಕೆ ತೀವ್ರ ಮುಖಭಂಗ ಉಂಟಾಗಿದೆ.ವೈಎಸ್‌ಆರ್ ಕಾಂಗ್ರೆಸ್ ನಾಯಕರು ಕೆಲವು ನ್ಯಾಯಾಧೀಶರು ಮತ್ತು ನ್ಯಾಯಾಂಗದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ತನಿಖೆಯನ್ನು ಆಂಧ್ರಪ್ರದೇಶ ಹೈಕೋರ್ಟ್‌ ಸಿಬಿಐಗೆ ವಹಿಸಿ ಆದೇಶಿಸಿದೆ.

ಸಿಬಿಐ ತನಿಖೆಗೆ ಸಹಕರಿಸುವಂತೆ ರಾಜ್ಯ ಸರ್ಕಾರಕ್ಕೂ ಸೂಚಿಸಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ನಡೆಸುತ್ತಿರುವ ತನಿಖೆಯ ಬಗ್ಗೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

Jagan Mohan Reddy

ವೈಎಸ್‌ಆರ್ ಕಾಂಗ್ರೆಸ್ ನಾಯಕರನ್ನು ರಕ್ಷಿಸುವ ಸಲುವಾಗಿಯೇ ತನಿಖಾ ಸಂಸ್ಥೆಯು ಪ್ರಕರಣ ದಾಖಲಿಸಿಲ್ಲ ಎಂದು ಹೇಳಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಕೇಶ್ ಕುಮಾರ್ ಮತ್ತು ಜೆ.ಉಮಾದೇವಿ ಅವರನ್ನೊಳಗೊಂಡ ಪೀಠವು, 'ಎಫ್‌ಐಆರ್‌ ದಾಖಲಿಸುವಂತೆ ಸಿಬಿಐಗೆ ಸೂಚಿಸಿದೆ. ಅಲ್ಲದೆ 8 ವಾರಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

ಸುಪ್ರೀಂಕೋರ್ಟ್ ಸಿಜೆಐಗೆ ಆಂಧ್ರ ಸಿಎಂ ಜಗನ್ ಪತ್ರಸುಪ್ರೀಂಕೋರ್ಟ್ ಸಿಜೆಐಗೆ ಆಂಧ್ರ ಸಿಎಂ ಜಗನ್ ಪತ್ರ

ಅಪಾಯಕಾರಿ ಮತ್ತು ನ್ಯಾಯಾಂಗದ ಮೇಲಿನ ಆಕ್ರಮಣಕ್ಕೆ ಸಮನಾಗಿವೆ. ಕೆಲವು ಸಾಮಾನ್ಯ ವ್ಯಕ್ತಿಗಳು ಸರ್ಕಾರದ ವಿರುದ್ಧ ಯಾವುದೇ ಪ್ರತಿಕ್ರಿಯೆ ನೀಡಿದರೆ, ಅಂತಹ ವ್ಯಕ್ತಿಗಳ ವಿರುದ್ಧ ಪ್ರಕರಣಗಳನ್ನು ಕೂಡಲೇ ದಾಖಲಿಸಲಾಗುತ್ತದೆ.

ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಸಿಐಡಿಗೆ ದೂರು ನೀಡಿದ್ದಲ್ಲದೆ 9 ಮಂದಿಯ ಹೆಸರು ಮತ್ತು ಸಾಕ್ಷಿಯನ್ನೂ ನೀಡಿದ್ದರು. ವಿಧಾನಸಭೆ ಸ್ಪೀಕರ್ ತಮ್ಮಿನೇನಿ ಸೀತಾರಾಮ್, ಉಪ ಮುಖ್ಯಮಂತ್ರಿ ನಾರಾಯಣ ಸ್ವಾಮಿ, ಸಂಸದರಾದ ವಿ.ವಿಜಯಸಾಯಿ ರೆಡ್ಡಿ, ನಂದಿಗಾಂ ಸುರೇಶ್, ಮಾಜಿ ಶಾಸಕ ಎ.ಕೃಷ್ಣಮೋಹನ್ ಮತ್ತು ಇತರ ನಾಯಕರು ನೀಡಿರುವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಇವರ ವಿರುದ್ಧ ಸಿಐಡಿ ಏಕೆ ಪ್ರಕರಣ ದಾಖಲಿಸಿಲ್ಲ ಎಂದು ಪ್ರಶ್ನಿಸಿದೆ.

ರಾಜ್ಯ ಸರ್ಕಾರದ ವಿರುದ್ಧ ಕೆಲವು ತೀರ್ಪುಗಳನ್ನು ನೀಡಿದ ಬಳಿಕ ವೈಎಸ್‌ಆರ್ ಕಾಂಗ್ರೆಸ್‌ನ ಕೆಲವು ನಾಯಕರು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ನ್ಯಾಯಾಧೀಶರು ಮತ್ತು ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿತ್ತು.

English summary
Expressing displeasure over the investigation by the state CID, the Andhra Pradesh High Court on Monday directed the CBI to probe the alleged derogatory comments made by ruling YSR Congress leaders in social media against some judges and the judiciary .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X