ಆಂಧ್ರದಲ್ಲಿ 68 ವರ್ಷದ ವೃದ್ಧೆಯ ಮೇಲೆ 27 ವರ್ಷದ ಯುವಕನಿಂದ ಅತ್ಯಾಚಾರ!

ಅಮರಾವತಿ, ಜನವರಿ.06: ಮಾನವ ಸಂಕುಲವೇ ತಲೆ ತಗ್ಗಿಸುವಂತಾ ಘಟನೆಯೊಂದು ಆಂಧ್ರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಇದೊಂದು ಘಟನೆ ಸಂಬಂಧಗಳಿಗೆ ಬೆಲೆಯೇ ಇಲ್ಲವಾ ಎಂಬ ಪ್ರಶ್ನೆಯನ್ನು ಹುಟ್ಟು ಹಾಕುತ್ತಿದೆ.

ಕಾಮ ಪಿಶಾಚಿಯೊಬ್ಬ ವೃದ್ಧೆ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 68 ವರ್ಷದ ಅಜ್ಜಿಯ ಮೇಲೆ 27 ವರ್ಷದ ಯುವಕ ವಿಕೃತವಾಗಿ ನಡೆದುಕೊಂಡಿರುವಂತಾ ಪ್ರಕರಣ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ.

ಅಜ್ಜಿಯ ಮೇಲೆ ಎರಗಿದ ವಿಕೃತ ಕಾಮಿಯನ್ನು ವಿಶಾಖಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕಂಬಿ ಹಿಂದೆ ತಳ್ಳಿದ ಪೊಲೀಸರು ಅತ್ಯಾಚಾರ ಪ್ರಕರಣವನ್ನು ದಾಖಲಿಸಿಕೊಂಡು, ವಿಚಾರಣೆ ನಡೆಸುತ್ತಿದ್ದಾರೆ.

Andhra Police Arrested A Man, Who Raped 68-Years Old Women

ಕಠಿಣ ಕಾನೂನಿಗೂ ಬೆದರದ ಕಾಮುಕರು!

ಇತ್ತೀಚಿಗಷ್ಟೇ ತೆಲಂಗಾಣದಲ್ಲಿ ಪಶುವೈದ್ಯೆ ಮೇಲೆ ನಾಲ್ವರು ಕಾಮುಕರು ಸಾಮೂಹಿತ ಅತ್ಯಾಚಾರ ನಡೆಸಿ ನಂತರ ಆಕೆಯನ್ನು ಸುಟ್ಟು ಹಾಕಿದ್ದರು. ನಂತರ ವಿಚಾರಣೆ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿಗಳು ಪೊಲೀಸರು ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದರು. ಇದರ ಬೆನ್ನಲ್ಲೇ ಆಂಧ್ರ ಪ್ರದೇಶದಲ್ಲಿ ಕಠಿಣ ಕಾನೂನು ಜಾರಿಗೊಳಿಸಲು ಸ್ವತಃ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮುಂದಾಗಿದ್ದರು. ಅಂದುಕೊಂಡಂತೆ ಮಹಿಳಾ ಮತ್ತು ಮಕ್ಕಳ ಮೇಲಿನ ಅಪರಾಧ ಪ್ರಕರಣಗಳ ಇತ್ಯರ್ಥಕ್ಕೆ ಪ್ರತ್ಯೇತ ವ್ಯವಸ್ಥೆಯನ್ನೂ ಜಾರಿಗೊಳಿಸಲಾಗಿದೆ. ಹೀಗಿದ್ದರೂ ಕೂಡಾ ಆಂಧ್ರ ಪ್ರದೇಶದಲ್ಲಿ ಕಾಮುಕರ ಹಾವಳಿಗೆ ಕಡಿವಾಣ ಹಾಕಲು ಆಗುತ್ತಿಲ್ಲವೇ ಎಂದ ಪ್ರಶ್ನೆಯನ್ನು ಇದೊಂದು ಪ್ರಕರಣ ಎತ್ತುವಂತೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+