ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರಪ್ರದೇಶ ಬಂದ್‌ಗೆ ಕರೆ ನೀಡಿದ ಟಿಡಿಪಿ, ಕಾರಣವೇನು?

|
Google Oneindia Kannada News

ತೆಲುಗು ದೇಶಂ ಪಕ್ಷ ತನ್ನ ಕಚೇರಿ ಮೇಲೆ ವೈಎಸ್‌ಆರ್ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದನ್ನು ಖಂಡಿಸಿ ಇಂದು (ಅಕ್ಟೋಬರ್ 20)ರಂದು ಆಂಧ್ರಪ್ರದೇಶ ಬಂದ್‌ಗೆ ಕರೆ ನೀಡಿದೆ.

ಗುಂಟೂರಿನಲ್ಲಿರುವ ಟಿಡಿಪಿ ಪಕ್ಷದ ಕಚೇರಿ ಮೇಲೆ ನಿನ್ನೆ ವೈಎಸ್‌ಆರ್ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದು, ಕಚೇರಿಯನ್ನು ಸಂಪೂರ್ಣ ಧ್ವಂಸ ಮಾಡಿದ್ದಾರೆ ಎಂದು ಟಿಡಿಪಿ ಆರೋಪಿಸಿದೆ.

ಇನ್ನು ಪಕ್ಷದ ಕಚೇರಿ ಮೇಲಿನ ದಾಳಿಯನ್ನು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಖಂಡಿಸಿದ್ದಾರೆ. ಹಾಗೆಯೇ ಟಿಡಿಪಿಯಿಂದ ಕರೆ ನೀಡಿರುವ ಬಂದ್‌ಗೆ ಎಲ್ಲಾ ಪ್ರತಿಪಕ್ಷಗಳು ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

Andhra Pradesh Bandh Today, Call Given By TDP After Attacks On Its Offices

ಪ್ರಮುಖವಾಗಿ ಆಂಧ್ರಪ್ರದೇಶದ ಗುಂಟೂರು, ವಿಜಯವಾಡ, ಮಂಗಳಗಿರಿ ಸೇರಿದಂತೆ ಅನೇಕ ಜಿಲ್ಲೆಯ ಟಿಡಿಪಿ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಘಟನೆ ವೇಳೆ ಪಕ್ಷದ ವಕ್ತಾರ ಪಟ್ಟಾಭಿ ರಾಮ್​ ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ.

ಇದೇ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಚಂದ್ರಬಾಬು ನಾಯ್ಡು, ವೈಎಸ್​ಆರ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಟಿಡಿಪಿ ಪ್ರಧಾನ ಕಚೇರಿ ಮೇಳೆ ದಾಳಿ ನಡೆಸಿದಿರುವುದ ನಿಜಕ್ಕೂ ಆಘಾತಕಾರಿ. ಸಿಎಂ ಜಗನ್​ ಆಮಿಷವೊಡ್ಡಿ ಇಂತಹ ಕೆಲಸ ಮಾಡಿಸುತ್ತಿದ್ದಾರೆಂದು ಆರೋಪಿಸಿದ್ದಾರೆ. ಟಿಡಿಪಿ ಕಚೇರಿಗಳ ಮೇಲೆ ದಾಳಿ ನಡೆಯುತ್ತಿದ್ದರೂ, ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇಂತಹ ದಾಳಿಗಳು ರಾಜ್ಯ ಪ್ರಾಯೋಜಿತ ಭಯೋತ್ಪಾದನೆಗಳು. ಇದೇ ವಿಚಾರವಾಗಿ ನಾವು ಬುಧವಾರ ಆಂಧ್ರಪ್ರದೇಶ ಬಂದ್​ಗೆ ಕರೆ ನೀಡಿದ್ದೇವೆ. ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಿರುವ ಶಕ್ತಿಗಳ ವಿರುದ್ಧ ಒಗ್ಗೂಡಿ ಹೋರಾಟ ನಡೆಸಬೇಕಾಗಿದೆ ಎಂದು ಚಂದ್ರಬಾಬು ನಾಯ್ಡು ಕರೆ ನೀಡಿದರು.

ವೈಎಸ್‌ಆರ್‌ಸಿಪಿ ಗೂಂಡಾಗಳು ಪಕ್ಷದ ಪ್ರಧಾನ ಕಚೇರಿ ಮತ್ತು ವಿಶಾಖಪಟ್ಟಣಂನ ಕಚೇರಿ ಮತ್ತು ಪಕ್ಷದ ನಾಯಕರ ನಿವಾಸಗಳ ಮೇಲೆ ನಡೆಸಿದ ದಾಳಿಯನ್ನು ತೆಲುಗು ದೇಶಂ ಪಕ್ಷವು ಬಲವಾಗಿ ಖಂಡಿಸುತ್ತದೆ.

ನಾವು ಪ್ರಜಾಪ್ರಭುತ್ವ ದೇಶದಲ್ಲಿದ್ದೇವೆಯೇ ಅಥವಾ ಫ್ಯಾಸಿಸ್ಟ್ ದೇಶದಲ್ಲಿದ್ದೇವೆಯೇ ಎಂದು ನಮಗೆ ಅರ್ಥವಾಗುತ್ತಿಲ್ಲ. ಮುಖ್ಯಮಂತ್ರಿ ಮತ್ತು ಡಿಜಿಪಿ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಎಪಿ ಟಿಡಿಪಿ ಅಧ್ಯಕ್ಷ ಅಚ್ಚಣ್ಣಾಯ್ಡು ಹೇಳಿದರು. ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಣದಲ್ಲಿಡಲು ವಿಫಲವಾದ ಕಾರಣಕ್ಕಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ವಿಜಯವಾಡದಲ್ಲಿ ಪಟ್ಟಾಭಿಯ ನಿವಾಸದ ಮೇಲೆ ಅಪರಿಚಿತ ವ್ಯಕ್ತಿಗಳು ದಾಳಿ ಮಾಡಿದ್ದಾರೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

ವೈಎಸ್‌ಆರ್‌ಸಿಪಿಯ ಕಾರ್ಯಕರ್ತರು ಕೆಲವು ನಾಯಕರು ಮಾಡಿದ ಟೀಕೆಳಿಗಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಗ ಎಲ್ಲವೂ ನಿಯಂತ್ರಣದಲ್ಲಿದೆ. ಕೆಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಡಿಜಿಪಿ ಪಿಟಿಐಗೆ ತಿಳಿಸಿದ್ದಾರೆ.

ಡಿಜಿಪಿ ಕಚೇರಿಯ ಪತ್ರಿಕಾ ಪ್ರಕಟಣೆಯಲ್ಲಿ ರಾಜ್ಯದಾದ್ಯಂತ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಪ್ರಚೋದನೆ ನೀಡದಂತೆ ಜನರನ್ನು ವಿನಂತಿಸಲಾಗಿದೆ. ಪ್ರಚೋದನಕಾರಿ ಟೀಕೆಗಳನ್ನು ಮಾಡುವ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಟಿಡಿಪಿ ವರಿಷ್ಠ ಎನ್ ಚಂದ್ರಬಾಬು ನಾಯ್ಡು ಅವರು ಈ ಸಮಸ್ಯೆಯನ್ನು ಕೇಂದ್ರದ ಗಮನಕ್ಕೆ ತಂದರು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ ಪರಿಸ್ಥಿತಿಗಳ ಬಗ್ಗೆ ಗಮನಹರಿಸಿದ್ದಾರೆ.

"ಕೇಂದ್ರವು ಪ್ರಜಾಪ್ರಭುತ್ವವನ್ನು ಉಳಿಸುವ ಕ್ರಮಗಳನ್ನು ಅನುಕರಿಸಬೇಕು ಮತ್ತು ಗಂಜಾ ಮಾಫಿಯಾ (ರಾಜ್ಯದಲ್ಲಿ) ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪಟ್ಟಾಭಿ ಹೇಳಿದ್ದರು.

ದಾಳಿಯಲ್ಲಿ ವೈಎಸ್‌ಆರ್‌ಸಿಪಿ ಕಾರ್ಯಕರ್ತರ ಪಾಲ್ಗೊಳ್ಳುವಿಕೆಯನ್ನು ನಿರಾಕರಿಸಿದ ಪಕ್ಷದ ಹಿರಿಯ ಶಾಸಕ ಮಲ್ಲಾಡಿ ವಿಷ್ಣು, ಪಟ್ಟಾಭಿ ಸಿಎಂ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಬಾರದಿತ್ತು.

ಪಟ್ಟಾಭಿ ಯಾವಾಗಲೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದರು ಮತ್ತು ವೈಎಸ್‌ಆರ್‌ಸಿಪಿ ಸರ್ಕಾರದ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸುತ್ತಿದ್ದರು ಎಂದು ವಿಷ್ಣು ಆರೋಪಿಸಿದರು.

ಈ ದಾಳಿಯಿಂದ ವೈಎಸ್‌ಆರ್ ಕಾಂಗ್ರೆಸ್‌ಗೆ ಯಾವ ಸಂಬಂಧವಿದೆ? ಅವರು ಸಾರ್ವಜನಿಕವಾಗಿ ನಮ್ಮ ಇಮೇಜ್ ಅನ್ನು ಕೆಡಿಸಲು ನಮ್ಮ ಪಕ್ಷವನ್ನು ಎಳೆಯಲು ಪ್ರಯತ್ನಿಸುತ್ತಿದ್ದಾರೆ. ಚಂದ್ರಬಾಬು ನಾಯ್ಡು ಅವರ ಕೆಟ್ಟ ಯೋಜನೆಗಳ ಬಗ್ಗೆ ಎಲ್ಲರಿಗೂ ತಿಳಿದಿದೆ ಎಂದು ಟಿವಿ ವಾಹಿನಿಯೊಂದರಲ್ಲಿ ಮಾತನಾಡಿದ ವಿಷ್ಣು ಹೇಳಿದ್ದಾರೆ.

ದಾಳಿಯ ಸುದ್ದಿಯನ್ನು ಕೇಳಿದ ನಂತರ, ನಾಯ್ಡು ಮಂಗಳಗಿರಿಯಲ್ಲಿರುವ ಪಕ್ಷದ ಕಚೇರಿಗೆ ಆಗಮಿಸಿ ಘಟನೆಯ ಬಗ್ಗೆ ವಿಚಾರಿಸಿದರು. ಕೆಲವರು ಬಿಯರ್ ಬಾಟಲಿಗಳಿಂದ ದಾಳಿ ಮಾಡಿದ್ದಾರೆ ಎಂದು ಟಿಡಿಪಿ ಕಚೇರಿಯಲ್ಲಿನ ಕಾರ್ಯಕರ್ತರು ನಾಯ್ಡು ಅವರಿಗೆ ಮಾಹಿತಿ ನೀಡಿದರು.

English summary
The Telugu Desam Party (TDP) has called for a bandh (shutdown) in Andhra Pradesh today over attacks on its offices, for which it blamed the YS Jagan Mohan Reddy regime. TDP chief N Chandrababu Naidu called the attacks "state sponsored terrorism".
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X